303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ

ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕವು (JUNALCO) ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಮಾನದಲ್ಲಿರುವವರು ಭಾರತೀಯ ಮೂಲದವರಾಗಿದ್ದು, ಕೇಂದ್ರ ಅಮೆರಿಕಕ್ಕೆ ತೆರಳಿ ಅಲ್ಲಿಂದ ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಗೆ ಅಕ್ರಮವಾಗಿ ನುಸುಳಲು ತೆರಳುತ್ತಿರುವ ಶಂಕೆ ವ್ಯಕ್ತವಾಗಿದೆ.

303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ
303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ
Follow us
Ganapathi Sharma
|

Updated on: Dec 23, 2023 | 8:06 AM

ಪ್ಯಾರಿಸ್, ಡಿಸೆಂಬರ್ 23: ಕೇಂದ್ರ ಅಮೆರಿಕದ ನಿಕರಾಗುವಾಗೆ (Nicaragua) ತೆರಳುತ್ತಿದ್ದ 303 ಮಂದಿ ಭಾರತೀಯರಿದ್ದ (Indians) ವಿಮಾನವೊಂದನ್ನು ಫ್ರಾನ್ಸ್​ನ ಅಧಿಕಾರಿಗಳು ಮಾನವ ಕಳ್ಳಸಾಗಣೆ ಶಂಕೆಯ ಮೇಲೆ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿಸಿದ್ದಾರೆ. ಪ್ಯಾರಿಸ್ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯ ಪ್ರಕಾರ, 303 ಭಾರತೀಯ ಪ್ರಯಾಣಿಕರನ್ನು ಹೊತ್ತ ವಿಮಾನವು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ಟೇಕಾಫ್ ಆಗಿತ್ತು.

ರೊಮೇನಿಯನ್ ಕಂಪನಿ ಲೆಜೆಂಡ್ ಏರ್‌ಲೈನ್ಸ್‌ನ A340 ವಿಮಾನವು ಇಂಧನ ತುಂಬಲು ಲ್ಯಾಂಡ್ ಆಗಿತ್ತು. ಲ್ಯಾಂಡಿಂಗ್ ನಂತರ ಮಾನವ ಕಳ್ಳಸಾಗಣೆ ಅನುಮಾನದ ಮೇಲೆ ತನಿಖೆಗಾಗಿ ವಿಮಾನವನ್ನು ವ್ಯಾಟ್ರಿ ವಿಮಾನ ನಿಲ್ದಾಣದಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ಫ್ರಾನ್ಸ್​​ನ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕವು (JUNALCO) ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಮಾನದಲ್ಲಿರುವವರು ಭಾರತೀಯ ಮೂಲದವರಾಗಿದ್ದು, ಕೇಂದ್ರ ಅಮೆರಿಕಕ್ಕೆ ತೆರಳಿ ಅಲ್ಲಿಂದ ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಗೆ ಅಕ್ರಮವಾಗಿ ನುಸುಳಲು ತೆರಳುತ್ತಿರುವ ಶಂಕೆ ವ್ಯಕ್ತವಾಗಿದೆ ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕದ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪ್ಯಾರಿಸ್ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಭಾರತೀಯ ರಾಯಭಾರ ಕಚೇರಿಯಿಂದಲೂ ತನಿಖೆ

ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ತನಿಖೆಯನ್ನು ಪ್ರಾರಂಭಿಸಿದೆ. ಜತೆಗೆ, ವಿಮಾನದಲ್ಲಿರುವ ಭಾರತೀಯರ ನೆರವಿಗೆ ಮುಂದಾಗಿದೆ. ಯುಎಇಯಿಂದ ನಿಕರಾಗುವಾಗೆ ತೆರಳುವ ವಿಮಾನದಲ್ಲಿ 303 ಜನರು, ಹೆಚ್ಚಿನಂಶ ಭಾರತೀಯ ಮೂಲದವರು ಇರುವುದಾಗಿ ಫ್ರಾನ್ಸ್​ನ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಮಾನವ ಕಳ್ಳಸಾಗಣೆಯ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಮ್ಮ ತಂಡ ಅಲ್ಲಿಗೆ ತಲುಪಿದೆ ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ