Hurricane Ida: ಅಮೆರಿಕದ ಲೂಸಿಯಾನದಲ್ಲಿ ಇಡಾ ಚಂಡಮಾರುತದ ಅಬ್ಬರ; ಸದ್ಯದ ಪರಿಸ್ಥಿತಿಯ ವಿಡಿಯೋ ವೈರಲ್

Ida Hurricane Video | ಲೂಸಿಯಾನಕ್ಕೆ ಅಪ್ಪಳಿಸಿರುವ ಇಡಾ ಚಂಡಮಾರುತದ ಅಟ್ಟಹಾಸದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿವೆ.

Hurricane Ida: ಅಮೆರಿಕದ ಲೂಸಿಯಾನದಲ್ಲಿ ಇಡಾ ಚಂಡಮಾರುತದ ಅಬ್ಬರ; ಸದ್ಯದ ಪರಿಸ್ಥಿತಿಯ ವಿಡಿಯೋ ವೈರಲ್
ಇಡಾ ಚಂಡಮಾರುತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 01, 2021 | 8:36 PM

ವಾಷಿಂಗ್ಟನ್: ಅಮೆರಿಕದಲ್ಲಿ ಅಪ್ಪಳಿಸಿರುವ ಇಡಾ ಚಂಡಮಾರುತದ (Hurricane Ida) ಅಟ್ಟಹಾಸದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಮೆರಿಕದಲ್ಲಿ ಇದುವರಎಗೂ ಉಂಟಾದ ಚಂಡಮಾರುತಗಳಲ್ಲೇ ಇದು ಅತ್ಯಂತ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಇಡಾ ಚಂಡಮಾರುತದ ಅಬ್ಬರಕ್ಕೆ ಲೂಸಿಯಾನ ಬಹುತೇಕ ಮುಳುಗಡೆಯಾಗಿದೆ. ಈ ಭಾಗದಲ್ಲಿ ಚಂಡಮಾರುತದ ಜೊತೆಗೆ ಭೂ ಕುಸಿತವೂ ಉಂಟಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಡಾ ಚಂಡಮಾರುತದ ಅಟ್ಟಹಾಸದ ವಿಡಿಯೋ, ಫೋಟೋಗಳು ವೈರಲ್ ಅಗಿವೆ.

ಲೂಸಿಯಾನಾಗೆ ಭಾನುವಾರ ಅಪ್ಪಳಿಸಿರುವ ಇಡಾ ಚಂಡಮಾರುತದ ಪರಿಣಾಮದಿಂದ ಮಿಸಿಸಿಪ್ಪಿ ನದಿ ಕೂಡ ಹಿಮ್ಮುಖವಾಗಿ ಹರಿದ ವಿಡಿಯೋಗಳು ವೈರಲ್ ಆಗಿದ್ದವು. ಮಿಸಿಸಿಪ್ಪಿ ನದಿ ವಿರುದ್ಧ ದಿಕ್ಕಿನಲ್ಲಿ ಹರಿಯುತ್ತಿರುವ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಅಪ್​ಲೋಡ್ ಮಾಡಲಾಗಿತ್ತು. ಸಮುದ್ರದಲ್ಲಿ ಭೀಕರ ಚಂಡಮಾರುತ ಎದ್ದಿರುವುದರಿಂದ ನದಿ ಹಿಮ್ಮುಖವಾಗಿ ಹರಿದಿತ್ತು.

ಲೂಸಿಯಾನದಲ್ಲಿ ಅಪ್ಪಳಿಸಿರುವ ಇಡಾ ಚಂಡಮಾರುತದ ನಂತರದ ಪರಿಸ್ಥಿತಿಯ ವಿಡಿಯೋಗಳು ಇಲ್ಲಿವೆ.

ಅಮೆರಿಕದ ನ್ಯೂ ಒರ್ಲಿಯನ್ಸ್​ ಕರಾವಳಿ ತೀರದಲ್ಲಿ ಎದ್ದಿರುವ ಇಡಾ ಚಂಡಮಾರುತದಿಂದ ಹಲವರು ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಮನೆಗಳು ನಾಶವಾಗಿವೆ. ಭಾರೀ ಪ್ರವಾಹದಿಂದ ಮನೆಗಳು, ಕಂಪನಿಗಳು, ವಿದ್ಯುತ್ ಘಟಕಗಳು ನೀರಿನಿಂದ ಆವೃತವಾಗಿವೆ.

ನ್ಯೂ ಒರ್ಲಿಯನ್ಸ್​ ಭಾಗದಲ್ಲಿ ಉಂಟಾಗಿರುವ ಇಡಾ ಚಂಡಮಾರುತದಿಂದ ಲೂಸಿಯಾನದ ರಾಜಧಾನಿ ಬ್ರಾಟನ್​ ರೂಜ್ ಸುತ್ತಮುತ್ತ ಜನಜೀವನ ಅಸ್ತವ್ಯಸ್ತವಾಗಿದೆ. ಇಡಾ ಚಂಡಮಾರುತದಿಂದ ಈಗಾಗಲೇ ಮೂರೂವರೆ ಲಕ್ಷಕ್ಕೂ ಹೆಚ್ಚು ಮನೆಗಳು ಹಾಗೂ ಕಾರ್ಖಾನೆ, ಕಂಪನಿಗಳಲ್ಲಿ ವಿದ್ಯುತ್​ ಪೂರೈಕೆ ಕಡಿತಗೊಂಡಿದೆ. ಮೂರ್ನಾಲ್ಕು ದಿನಗಳಾದರೂ ಇನ್ನೂ ವಿದ್ಯುತ್ ಸಂಪರ್ಕ ಸರಿಯಾಗಿಲ್ಲ.

ಇದನ್ನೂ ಓದಿ: Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ

Karnataka Dams Water Level: ಮಳೆಯಿಂದ ಹಲವು ಡ್ಯಾಂಗಳ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Videos capturing the impact of Ida Hurricane in Louisiana goes viral on Social Media)

ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ