Donald Trump: ನ್ಯೂಯಾರ್ಕ್​​​ನಲ್ಲಿ ಡೊನಾಲ್ಡ್ ಟ್ರಂಪ್ ವಿಚಾರಣೆ; ಅಮೆರಿಕದ ಮಾಜಿ ಅಧ್ಯಕ್ಷರಿಗೆ ಬಂಧನದ ಭೀತಿ?

Hush money case: ಚಲನಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್ ಅವರಿಗೆ 2016 ರ ಅಧ್ಯಕ್ಷೀಯ ಚುನಾವಣೆಯ ಮೊದಲು ಟ್ರಂಪ್ $1,30,000 ಪಾವತಿಸಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ. ನಿರಪರಾಧಿ ಎಂದು ಒಪ್ಪಿಕೊಂಡಿರುವ ಟ್ರಂಪ್, ಈ ಪ್ರಕರಣ ರಾಜಕೀಯ ದ್ವೇಷದಿಂದ ಮಾಡಲಾಗಿದ್ದು ಎಂದು ಆರೋಪಿಸಿದ್ದಾರೆ

Donald Trump: ನ್ಯೂಯಾರ್ಕ್​​​ನಲ್ಲಿ ಡೊನಾಲ್ಡ್ ಟ್ರಂಪ್ ವಿಚಾರಣೆ; ಅಮೆರಿಕದ ಮಾಜಿ ಅಧ್ಯಕ್ಷರಿಗೆ ಬಂಧನದ ಭೀತಿ?
ಡೊನಾಲ್ಡ್ ಟ್ರಂಪ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 04, 2023 | 10:44 PM

ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಅಮೆರಿಕದ (US) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಟ್ರಂಪ್ ತಮ್ಮ ಫ್ಲೋರಿಡಾದ ಮಾರ್-ಎ-ಲಾಗೋ ನಿವಾಸದಿಂದ ನ್ಯೂಯಾರ್ಕ್ ನಗರದ ಟ್ರಂಪ್ ಟವರ್‌ಗೆ ಪ್ರಯಾಣಿಸಿದ್ದು ಮ್ಯಾನ್‌ಹ್ಯಾಟನ್‌ನಲ್ಲಿ ನ್ಯಾಯಾಧೀಶ ಯುವಾನ್ ಮೆರ್ಕನ್ ಅವರ ಮುಂದೆ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ. ಅಲ್ಲಿ ಅವರು ದೋಷಾರೋಪಣೆಯನ್ನು ಓದಿದ ನಂತರ ಹಿಂತಿರುಗುತ್ತಾರೆ. ಕೋರ್ಟ್ ಪ್ರವೇಶಿಸುವ ಮುನ್ನ ಟ್ರಂಪ್ ಅವರ ಬೆರಳಚ್ಚು ಮತ್ತು ಮುಖದ ಚಿತ್ರವನ್ನು ತೆಗೆಯಲಾಗುತ್ತದೆ. ಚಲನಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್ (Stormy Daniels)ಅವರಿಗೆ 2016 ರ ಅಧ್ಯಕ್ಷೀಯ ಚುನಾವಣೆಯ ಮೊದಲು ಟ್ರಂಪ್ $1,30,000 ಪಾವತಿಸಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ. ನಿರಪರಾಧಿ ಎಂದು ಒಪ್ಪಿಕೊಂಡಿರುವ ಟ್ರಂಪ್, ಈ ಪ್ರಕರಣ ರಾಜಕೀಯ ದ್ವೇಷದಿಂದ ಮಾಡಲಾಗಿದ್ದು ಎಂದು ಆರೋಪಿಸಿದ್ದಾರೆ.

ಮೊಹರು ಮಾಡಿದ ದೋಷಾರೋಪಣೆಯು 76 ವರ್ಷದ ಟ್ರಂಪ್ ವಿರುದ್ಧ 30 ಕ್ಕೂ ಹೆಚ್ಚು ಕಾರ್ಪೊರೇಟ್ ವಂಚನೆಗಳನ್ನು ಆರೋಪಿಸಿದೆ, ಅದರಲ್ಲಿ ಅತ್ಯಂತ ಗಂಭೀರವಾದದ್ದು ನೀಲಿ ಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್‌ಗೆ ಗೌಪ್ಯವಾಗಿ ಹಣ ಪಾವತಿಸಿರುವುದು.

ಬಂಧನಕ್ಕೂ ಮುನ್ನ ಕೊನೆಯ ಇಮೇಲ್ ಬರೆದ ಟ್ರಂಪ್

ಮುಂದಿನ ಕೆಲವು ಗಂಟೆಗಳ ಕಾಲ ನಾನು ಇಲ್ಲಿಂದ ಹೊರಗುಳಿಯಲಿರುವುದರಿಂದ, ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನಾವು ಸ್ವೀಕರಿಸಿದ ಎಲ್ಲಾ ದೇಣಿಗೆಗಳು, ಬೆಂಬಲ ಮತ್ತು ಪ್ರಾರ್ಥನೆಗಳಿಂದ ನಾನು ಆಶ್ಚರ್ಯಚಕಿತನಾಗಿದ್ದೇನೆ. ನನಗೆ ಅಲ್ಲ ದೇಶದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಲು ದುಃಖವಾಗುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಇಮೇಲ್ ನಲ್ಲಿ ಹೇಳಿದ್ದಾರೆ.

ನ್ಯಾಯಾಲಯದ ಹೊರಗಡೆ ಪರ- ವಿರೋಧಿ ಜನರ ದಂಡು

ಮಂಗಳವಾರ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಅವರನ್ನು ಕ್ರಿಮಿನಲ್ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಲಿರುವ ನ್ಯಾಯಾಲಯದ ಹೊರಗೆ ಅವರ ಬೆಂಬಲಿಗರು, ವಿರೋಧ ಘೋಷಣೆ ಕೂಗುವ ಜನರು ಜಮಾಯಿಸಿದ್ದಾರೆ. ಟ್ರಂಪ್ ವಿರೋಧಿಗಳ ಬಳಗವು Trump lies all the time ಎಂಬ ಬ್ಯಾನರ್ ಹಿಡಿದು Lock him up! ಎಂದು ಕೂಗಿದರೆ MAGA (Make America Great Again) ತಂಡವು Trump or Death ಎಂಬ ಘೋಷಣೆಯೊಂದಿಗೆ ಧ್ವಜವನ್ನು ಬೀಸಿದೆ.

ಏನಿದು ಪ್ರಕರಣ?

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2016 ರ ಅಧ್ಯಕ್ಷೀಯ ಪ್ರಚಾರದ ಸಮಯದಲ್ಲಿ ಪೋರ್ನ್ ಸ್ಟಾರ್‌ಗಳಿಗೆ ಹಣ ಪಾವತಿಸಿದ್ದಾರೆ ಎಂಬ ಆರೋಪವಿದೆ. ವಾಸ್ತವವಾಗಿ ಟ್ರಂಪ್ ವಿವಾಹೇತರ ಸಂಬಂಧಗಳನ್ನು ಹೊಂದಿದ್ದಾರೆಂದು ಆರೋಪಿಸಲಾಗಿದೆ. ಆದರೆ ಚುನಾವಣಾ ಪ್ರಚಾರದ ಸಮಯದಲ್ಲಿ ಇದು ಹೊರಬರದಂತೆ ತಡೆಯಲು ಅವರಿಗೆ ಹಣ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಮೊದಲ ಬಾರಿಗೆ ಅಮೆರಿಕದ ಮಾಜಿ ಅಧ್ಯಕ್ಷರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ.

ಇದನ್ನೂ ಓದಿ:ಹಿಂದೂ ಎಂಬ ಕಾರಣಕ್ಕೆ ಲಂಡನ್ ಸ್ಕೂಲ್ ಆಫ್​ ಎಕನಾಮಿಕ್ಸ್​ ಚುನಾವಣೆಯಿಂದ ಅನರ್ಹಗೊಳಿಸಿದರು; ಭಾರತೀಯ ವಿದ್ಯಾರ್ಥಿ ಅಳಲು

ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ಸ್‌ಗೆ ಡೊನಾಲ್ಡ್ ಟ್ರಂಪ್ 130,000 ಡಾಲರ್ ಪಾವತಿಸಿದ್ದಾರೆ ಎಂದು ಗ್ರ್ಯಾಂಡ್ ಜ್ಯೂರಿ ಒಪ್ಪಿಕೊಂಡಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆ ಸಮಯದಲ್ಲಿ ಡೇನಿಯಲ್ಸ್ 27 ವರ್ಷ ವಯಸ್ಸು ಮತ್ತು ಟ್ರಂಪ್ 60 ವರ್ಷ ವಯಸ್ಸಿನವರಾಗಿದ್ದರು. ಆಗಷ್ಟೇ ಅವರ ಮೂರನೇ ಪತ್ನಿ ಮೆಲಾನಿಯಾ ತಮ್ಮ ಮಗ ಬ್ಯಾರನ್‌ಗೆ ಜನ್ಮ ನೀಡಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 4 April 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ