AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Donald Trump: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ; ಡೊನಾಲ್ಡ್​ ಟ್ರಂಪ್ ಘೋಷಣೆ

2020ರಲ್ಲಿ ಚುನಾವಣೆಯಲ್ಲಿ ಸೋತಿದ್ದ ಡೊನಾಲ್ಡ್​ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.

Donald Trump: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ; ಡೊನಾಲ್ಡ್​ ಟ್ರಂಪ್ ಘೋಷಣೆ
ಡೊನಾಲ್ಡ್​ ಟ್ರಂಪ್
TV9 Web
| Edited By: |

Updated on:Nov 16, 2022 | 10:40 AM

Share

ಕ್ಯಾಲಿಫೋರ್ನಿಯಾ: ಕಳೆದ ವಾರ ಓಹಿಯೋದಲ್ಲಿ ಚುನಾವಣೆ ಪ್ರಚಾರ ಮಾಡುವಾಗ ಮುಂದಿನ ವಾರ ಬಹಳ ದೊಡ್ಡ ಘೋಷಣೆ ಮಾಡಲಿದ್ದೇನೆ ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದರು. ಆ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದ್ದು, ಡೊನಾಲ್ಡ್​ ಟ್ರಂಪ್ (Donald Trump) 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (US President Election 2024) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 2020ರಲ್ಲಿ ಚುನಾವಣೆಯಲ್ಲಿ ಸೋತಿದ್ದ ಡೊನಾಲ್ಡ್​ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅಧ್ಯಕ್ಷೀಯ ಚುನಾವಣೆಗೆ US ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ; 2024ರ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಅಮೆರಿಕಾದ ಮಾಜಿ ಅಧ್ಯಕ್ಷ?

“ನಾನು ಇಂದು ರಾತ್ರಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ” ಎಂದು ಡೊನಾಲ್ಡ್​ ಟ್ರಂಪ್ ಹೇಳಿದ್ದರು. 2016ರ ಚುನಾವಣೆಯಲ್ಲಿ ವ್ಯಾಪಾರ ಉದ್ಯಮಿ ಮತ್ತು ರಿಯಾಲಿಟಿ ಟಿವಿ ತಾರೆ ಡೊನಾಲ್ಡ್​ ಟ್ರಂಪ್ ಅವರ ಗೆಲುವು ಜಗತ್ತನ್ನು ಬೆರಗುಗೊಳಿಸಿತ್ತು. ರಿಪಬ್ಲಿಕನ್ ನಾಯಕ ಇನ್ನೂ ತನ್ನ ಅನುಯಾಯಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದಾರೆ.

2024ರ ಬೇಸಿಗೆಯ ಸಮಯದಲ್ಲಿ ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ದೀರ್ಘಾವಧಿಯ ಅಧ್ಯಕ್ಷೀಯ ಪ್ರಚಾರಗಳಿಗೆ ಹೆಸರುವಾಸಿಯಾಗಿರುವ ಅಮೆರಿಕ ದೇಶದಲ್ಲಿ ಟ್ರಂಪ್ ಅವರ ಈ ಘೋಷಣೆಯು ಸಾಮಾನ್ಯಕ್ಕಿಂತ ಮುಂಚೆಯೇ ಬಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 16 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ