ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ನೀಡುವುದಿಲ್ಲ, ಮತ್ತೆ ಕ್ರೆಡಿಟ್ ಪಡೆಯಲು ಮುಂದಾದ ಟ್ರಂಪ್
ಭಾರತ - ಪಾಕ್ ಬಿಕ್ಕಟ್ಟಿನ ವಿಚಾರದಲ್ಲಿ ಅಮೆರಿಕ ಪದೇ ಪದೇ ಮಧ್ಯೆ ಬರುತ್ತಿದೆ. ಇದೀಗ ಮತ್ತೆ ಭಾರತ - ಪಾಕ್ ನಡುವೆ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ಮಾಡುತ್ತೇವೆ ಎಂದು ಹೇಳಿದೆ. ಈ ಎರಡು ದಿನದ ಹಿಂದೆ ಪ್ರಧಾನಿ ಮೋದಿ ಭಾರತದ ವಿಚಾರದಲ್ಲಿ ಮೂರನೇ ವ್ಯಕ್ತಿ ಬರುವಂತಿಲ್ಲ ಎಂದು ಖಡಕ್ ಆಗಿ ಅಮೆರಿಕಕ್ಕೆ ಹೇಳಿದ್ದಾರೆ. ಇದೀಗ ಮತ್ತೆ ಟ್ರಂಪ್ ಅದೇ ಹಳೆ ರಾಗ ಶುರು ಮಾಡಿದ್ದಾರೆ.

ಭಾರತ – ಪಾಕಿಸ್ತಾನದ ನಡುವೆ ಶಾಂತಿಗಾಗಿ ಮಧ್ಯಸ್ಥಿಕೆಯನ್ನು ಮಾಡುವೆ ಎಂದು ಪದೇ ಪದೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಹೇಳುತ್ತಿದ್ದಾರೆ. ಇದೀಗ ಮತ್ತೆ ಶುಕ್ರವಾರ (ಜೂ.20) ಅದೇ ರಾಗ ಹೇಳಿದ್ದಾರೆ. ಪಾಕಿಸ್ತಾನ – ಭಾರತ ಯುದ್ಧ ನಿಂತಿದ್ದು ನನ್ನ ಮಧ್ಯಸ್ಥಿಕೆಯಲ್ಲಿ ಎಂದು ಈ ಹಿಂದೆ ಹೇಳಿದ್ದಾರೆ. ಇದೀಗ ಎರಡು ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ಮಾಡುವೆ ಎಂದು ಹೇಳಿದ್ದಾರೆ. ಈ ಕೆಲಸಕ್ಕೆ ನನಗೆ ಯಾರು ನೊಬೆಲ್ ಶಾಂತಿ ಪ್ರಶಸ್ತಿ (Nobel Peace Prize) ನೀಡುವುದಿಲ್ಲ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಪಾಕಿಸ್ತಾನ ಮತ್ತು ಭಾರತದ ನಡುವೆ ನಡೆದ ಬಿಕ್ಕಟ್ಟಿಗೆ ಹಲವು ವಿಚಾರಗಳು ಕಾರಣವಾಗಿತ್ತು. ಭಾರತದ ನಾಗರಿಕರನ್ನು ಹತ್ಯೆ ಮಾಡಿದ ನಂತರ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರದ ಮೂಲಕ ದಾಳಿ ಮಾಡಿ ಉಗ್ರ ನೆಲೆಗಳನ್ನು ನಾಶ ಮಾಡಿತ್ತು. ಈ ಸಂಘರ್ಷ ಮುಂದುವರಿತ್ತು. ಕೊನೆಯಲ್ಲಿ ಪಾಕಿಸ್ತಾನ ಕದನ ವಿರಾಮ ಘೋಷಣೆ ಮಾಡಿತ್ತು. ಈ ವೇಳೆ ಅಮೆರಿಕದ ಸಹಾಯವನ್ನು ಕೂಡ ಪಾಕಿಸ್ತಾನ ಕೇಳಿತು. ನಂತರ ಅಮೆರಿಕ ಭಾರತಕ್ಕೆ ಮನವಿ ಮಾಡಿತ್ತು. ಆದರೆ ಭಾರತದ ಅಧಿಕಾರಿಗಳಿಗೆ ನೇರವಾಗಿ ಹೇಳುವಂತೆ ಪಾಕಿಸ್ತಾನಕ್ಕೆ ಹೇಳಿತ್ತು. ನಂತರ ಪಾಕ್ ಭಾರತದ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ, ಕದನ ವಿರಾಮಕ್ಕೆ ಭಾರತ ಒಪ್ಪಿತ್ತು. ಆದರೆ ಇದನ್ನೇ ಅಸ್ತ್ರವಾಗಿ ಇಟ್ಟುಕೊಂಡ ಅಮೆರಿಕ ನಮ್ಮ ಮಧ್ಯಸ್ಥಿಕೆಯಲ್ಲಿ ಈ ಸಮಸ್ಯೆ ಬಗೆಹರಿದಿದೆ ಎಂದು ಹೇಳಿಕೊಂಡಿದೆ. ಇದೀಗ ಮತ್ತೆ ಅದೇ ಮಾತನ್ನು ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಇತ್ತಿಚೇಗೆ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆ ಬಳಿಕ ಟ್ರಂಪ್ ಆತುರಾತುರವಾಗಿ ದೇಶಕ್ಕೆ ಹಿಂದಿರುಗಿದ ಕಾರಣ ಪ್ರಧಾನಿ ಮೋದಿಗೆ ಮಾತನಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಮಯದಲ್ಲಿ ಪಾಕಿಸ್ತಾನ – ಭಾರತದ ನಡುವಿನ ಸಂಘರ್ಷದ ಬಗ್ಗೆಯೂ ಮಾತನಾಡಿದ್ದಾರೆ. ಆದರೆ ಮೋದಿ ಇದಕ್ಕೆ ಸರಿಯಾಗಿ ಉತ್ತರ ಕೂಡ ನೀಡಿದ್ದಾರೆ. ಈ ವಿಚಾರದಲ್ಲಿ ಭಾರತ ಎಂದೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಯಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಆದರೆ ಇದೀಗ ಟ್ರಂಪ್ ಪಾಕ್- ಭಾರತದ ನಡುವೆ ಶಾಂತಿಗಾಗಿ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಆದರೆ ಈ ಹಿಂದೆ ಕದನ ವಿರಾಮ ಘೋಷಣೆಗೆ ನಾವು ಕಾರಣ ಅಲ್ಲ ಎಂದು ಹೇಳಿದ್ದಾರೆ.
ಇಲ್ಲಿದೆ ನೋಡಿ ಟ್ರಂಪ್ ಪೋಸ್ಟ್
ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ತಮ್ಮ ಟ್ರುತ್ ಸೋಶಿಯಲ್ ಖಾತೆಯಲ್ಲಿ ಅಧ್ಯಕ್ಷ ಟ್ರಂಪ್ ಬರೆದುಕೊಂಡಿದ್ದಾರೆ. ನಾನು ಏನೇ ಮಾಡಿದರೂ, ಫಲಿತಾಂಶ ಒಂದೇ ಆಗಿರಬೇಕು. ಇದರಿಂದ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಆದರೆ ಜನರಿಗೆ ತಿಳಿದಿದೆ ಅದು ನನಗೆ ಮುಖ್ಯ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಪ್ಪು ತಿಳೀಬೇಡಿ ನಿಮ್ಮ ಸಹಕಾರ ಬೇಕು ಆದ್ರೆ ಮಧ್ಯಸ್ಥಿಕೆ ಬೇಡ: ಟ್ರಂಪ್ಗೆ ಮೋದಿ ಹೇಳಿದ್ದೇನು?
ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ರುವಾಂಡಾ ಮತ್ತು ವಾಷಿಂಗ್ಟನ್‌ನಲ್ಲಿ ನಡೆದ ಶಾಂತಿ ಒಪ್ಪಂದ ಬಗ್ಗೆ ಮಾತನಾಡುತ್ತಿದ್ದ ವೇಳೆ ಈ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಟ್ರಂಪ್ನಿಂದ ಭಾರತ – ಪಾಕ್ ನಡುವಿನ ಸಂಘರ್ಷ ನಿಂತಿದ್ದು ಎಂಬ ಹೇಳಿಕೆಯನ್ನು ಭಾರತ ನಿರಾಕರಿಸಿದೆ. ಈ ನಿರ್ಧಾರದಲ್ಲಿ ವಾಷಿಂಗ್ಟನ್ ಅಥವಾ ಯಾವುದೇ ಮೂರನೇ ವ್ಯಕ್ತಿಯ ಪಾತ್ರವಿಲ್ಲ ಎಂದು ಸರ್ಕಾರ ಕೂಡ ಹೇಳಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಪ್ರಮುಖ ನೂರ್ ಖಾನ್ ವಾಯುನೆಲೆ ಸೇರಿದಂತೆ ದೇಶದ ಹಲವಾರು ವಾಯುನೆಲೆಗಳ ಮೇಲೆ ದಾಳಿ ಮಾಡಿದ ನಂತರ, ಮೇ 10 ರಂದು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಭಾರತದ ಡಿಎಂಒಗೆ ಕರೆ ಮಾಡಿ, ದಾಳಿ ನಿಲ್ಲಿಸಿ. ಕದನ ವಿರಾಮ ಘೋಷಣೆ ಮಾಡಿದ್ದಾರೆ.
ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








