AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು
ಸುರಂಗ
ನಯನಾ ರಾಜೀವ್
|

Updated on: Nov 09, 2023 | 11:14 AM

Share

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಏತನ್ಮಧ್ಯೆ ಇಸ್ರೇಲ್ ರಕ್ಷಣಾ ಪಡೆಗಳು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿವೆ. ಈ ವಿಡಿಯೋದಲ್ಲಿ ಸುರಂಗವೊಂದು ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಇಸ್ರೇಲಿ ಸೇನೆ ಈ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಿಕೊಂಡಿದೆ.

ಸುರಂಗಗಳಲ್ಲಿ ನೀರು ಹಾಗೂ ಆಮ್ಲಜನಕದ ನಿಕ್ಷೇಪಗಳಿವೆ, ಅದನ್ನು ನೋಡಿದರೆ ದೀರ್ಘಕಾಲ ಉಗ್ರರು ಇಲ್ಲಿಯೇ ಉಳಿದುಕೊಳ್ಳಲು ಯೋಜನೆ ರೂಪಿಸಿದಂತೆ ಕಾಣುತ್ತದೆ ಎಂದಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಉಗ್ರರಿಗೆ ಜಯ ಸಿಗಲಿ ಎಂದ ಮಂಗಳೂರಿನ ಝಾಕಿರ್; ವಿಡಿಯೋ ವೈರಲ್​​

ಯುದ್ಧದ ಆರಂಭದಿಂದಲೂ 130 ಸುರಂಗಗಳು ನಾಶವಾಗಿವೆ, ಈ ಹಿಂದೆ ಇಸ್ರೇಲ್ ರಕ್ಷಣಾ ಪಡೆಗಳು ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಮತ್ತು ಹಮಾಸ್ ಉಗ್ರರು ಶಾಲೆಗಳು, ಮಸೀದಿಗಳನ್ನು ರಾಕೆಟ್ ಉಡಾವಣಾ ಕೇಂದ್ರಗಳಾಗಿ ಬಳಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಇಸ್ರೇಲಿ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಸೈನಿಕರೊಬ್ಬರು ಶಾಲಾ ಕಟ್ಟಡವನ್ನು ತೋರಿಸುತ್ತಿರುವುದನ್ನು ನೋಡಬಹುದು. ಗೋಡೆಗಳ ಮೇಲೆ ಮಕ್ಕಳ ಚಿತ್ರಗಳಿವೆ.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದರು, ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸಿತ್ತು. 10 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಾವು ಯುದ್ಧ ಪ್ರಾರಂಭಿಸಿಲ್ಲ ಆದರೆ ನಾವೇ ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ