AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ವಿಧಿಸಿದರೆ ಭಾರತದ ನಿಲುವು ಏನಾಗಬಹುದು?

ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina)ರ ಶಿಕ್ಷೆ ಕುರಿತು ಇಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ–ಬಿಡಿ) ತೀರ್ಪು ನೀಡಲಿದೆ. 2024ರ ಜುಲೈ-ಆಗಸ್ಟ್​ನಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿತ್ತು. ಇದು ಕೋಟಾ ವಿರೋಧಿ ಸುಧಾರಣಾ ಚಳವಳಿಯೊಂದಿಗೆ ಪ್ರಾರಂಭವಾಯಿತು.

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ವಿಧಿಸಿದರೆ ಭಾರತದ ನಿಲುವು ಏನಾಗಬಹುದು?
ಶೇಖ್ ಹಸೀನಾ
ನಯನಾ ರಾಜೀವ್
|

Updated on: Nov 17, 2025 | 1:12 PM

Share

ಢಾಕಾ, ನವೆಂಬರ್ 17: ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina)ರ ಶಿಕ್ಷೆ ಕುರಿತು ಇಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ–ಬಿಡಿ) ತೀರ್ಪು ನೀಡಲಿದೆ. 2024ರ ಜುಲೈ-ಆಗಸ್ಟ್​ನಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿತ್ತು. ಇದು ಕೋಟಾ ವಿರೋಧಿ ಸುಧಾರಣಾ ಚಳವಳಿಯೊಂದಿಗೆ ಪ್ರಾರಂಭವಾಯಿತು.

ಹಸೀನಾ ಅವರ ಹೇಳಿಕೆಗಳು ಬೆಂಕಿಗೆ ತುಪ್ಪ ಸುರಿದಂತಾಗಿದ್ದವು.ನಂತರ ವಿದ್ಯಾರ್ಥಿ-ಸಾಮೂಹಿಕ ಚಳುವಳಿ ಹಸೀನಾ ಸರ್ಕಾರವನ್ನು ಅಧಿಕಾರದಿಂದ ಉರುಳಿಸಲು ಪ್ರಯತ್ನಿಸಿತು.

2024ರಲ್ಲಿ ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಶೇಖ್‌ ಹಸೀನಾ, ಮಾಜಿ ಗೃಹ ಸಚಿವ ಅಸಾದುಜ್ಜಾಮಾನ್‌ ಖಾನ್‌ ಕಮಲ್‌ ಹಾಗೂ ಮಾಜಿ ಐಜಿ‍‍‍‍ಪಿ ಚೌಧರಿ ಅಬ್ದುಲ್ಲಾ ಅಲ್‌–ಮುಮುನ್‌ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ನ್ಯಾಯಮಂಡಳಿಯು 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಸೋಮವಾರ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಢಾಕಾ ಸೇರಿದಂತೆ ಬಾಂಗ್ಲಾದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದಿದ್ದರು. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ಘಟನೆಯು ಹಲವಾರು ಬಾರಿ ದಂಗೆಯನ್ನು ಹೆಚ್ಚಿಸಿತು. ಈ ಪರಿಸ್ಥಿತಿಯಲ್ಲಿ, ಶೇಖ್ ಹಸೀನಾ ಕಳೆದ ವರ್ಷ ಆಗಸ್ಟ್ 5 ರಂದು ಬಲವಾದ ಸಾರ್ವಜನಿಕ ಕೋಪ ಮತ್ತು ಚಳವಳಿಯನ್ನು ಎದುರಿಸುತ್ತಾ ಬಾಂಗ್ಲಾದೇಶವನ್ನು ತೊರೆದರು.

ಮತ್ತಷ್ಟು ಒದಿ: Sheikh Hasina Verdict: ನಾನು ಜೀವಂತವಾಗಿದ್ದೇನೆ, ಮುಂದೆಯೂ ಇರುತ್ತೇನೆ, ತೀರ್ಪಿಗೂ ಮುನ್ನ ಯೂನಸ್​ಗೆ ಶೇಖ್ ಹಸೀನಾ ಸಂದೇಶ

ಭಾರತದಲ್ಲಿ ಆಶ್ರಯ ಶೇಖ್ ಹಸೀನಾ ಬಾಂಗ್ಲಾದೇಶದಿಂದ ನೇರವಾಗಿ ಭಾರತಕ್ಕೆ ಬಂದರು. ಅಂದಿನಿಂದ, ಶೇಖ್ ಹಸೀನಾ ಅವರು ಭಾರತದಲ್ಲಿ ರಾಜತಾಂತ್ರಿಕ ರಕ್ಷಣೆಯಲ್ಲಿದ್ದಾರೆ. ಬಾಂಗ್ಲಾದೇಶವು ಹಸೀನಾ ಅವರನ್ನು ವಾಪಸ್ ಕಳುಹಿಸಬೇಕೆಂದು ಹಲವಾರು ಬಾರಿ ಒತ್ತಾಯಿಸಿದ್ದರೂ, ಹಸೀನಾ ಇನ್ನೂ ಹಿಂತಿರುಗಿಲ್ಲ.

ಕಳೆದ ವರ್ಷ ಡಿಸೆಂಬರ್ 23 ರಂದು, ಬಾಂಗ್ಲಾದೇಶವು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ವಾಪಸ್ ಕಳುಹಿಸುವಂತೆ ಭಾರತಕ್ಕೆ ಪತ್ರ ಕಳುಹಿಸಿತು. ಆ ಸಂದೇಶವನ್ನು ಸ್ವೀಕರಿಸಿದ್ದಾಗಿ ಭಾರತವೂ ಒಪ್ಪಿಕೊಂಡಿದೆ. ಆದಾಗ್ಯೂ, ಆ ಪತ್ರಕ್ಕೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಈ ವರ್ಷದ ಮಾರ್ಚ್‌ನಲ್ಲಿ ಹೇಳಿದ್ದಾರೆ.

ತೀರ್ಪಿನ ನಂತರ ಭಾರತದ ನಿಲುವು ಏನಾಗಬಹುದು? ಈ ವಿಷಯದ ಬಗ್ಗೆ ಭಾರತ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಅಂತಾರಾಷ್ಟ್ರೀಯ ಸಂಬಂಧಗಳ ವಿಶ್ಲೇಷಕ ರಾಜಗೋಪಾಲ್ ಧರ್ ಚಕ್ರವರ್ತಿ ಮಾತನಾಡಿ,ಇಂದಿನ ತೀರ್ಪಿನಲ್ಲಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಲಾಗುವುದು ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಜಾಗರೂಕರಾಗಿರಲು ಮಿಲಿಟರಿಯನ್ನು ಕೇಳಲಾಗಿದೆ. ಶೇಖ್ ಹಸೀನಾ ಅವರಲ್ಲದೆ, ಬಾಂಗ್ಲಾದೇಶದ ಮಾಜಿ ಗೃಹ ಸಚಿವ ಅಸದುಜ್ಜಮಾನ್ ಖಾನ್ ಮತ್ತು ಬಾಂಗ್ಲಾದೇಶ ಪೊಲೀಸ್‌ನ ಮಾಜಿ ಐಜಿ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ವಿರುದ್ಧ ಪ್ರಕರಣಗಳಿವೆ.

ಇದು ಭಾರತ ಸರ್ಕಾರದ ಪ್ರಮುಖ ಜವಾಬ್ದಾರಿ. ನ್ಯಾಯಾಲಯವು ತನ್ನ ತೀರ್ಪು ನೀಡಿರುವುದರಿಂದ ಬಾಂಗ್ಲಾದೇಶವು ಈಗ ಭಾರತದ ಮೇಲೆ ಒತ್ತಡ ಹೇರುತ್ತದೆ. ಬಾಂಗ್ಲಾದೇಶವು ಭಾರತದೊಂದಿಗೆ ಒಪ್ಪಂದವನ್ನು ಹೊಂದಿದೆ. ಇದರ ಬಗ್ಗೆ ಉದ್ವಿಗ್ನತೆ ಮುಂದುವರಿಯುತ್ತದೆ.

ಏತನ್ಮಧ್ಯೆ, ಬಾಂಗ್ಲಾದೇಶದಲ್ಲಿ ಕೆಲವೇ ದಿನಗಳಲ್ಲಿ ಚುನಾವಣೆಗಳು ನಡೆಯಲಿವೆ. ಶೇಖ್ ಹಸೀನಾರನ್ನು ಬೇರೆ ದೇಶಕ್ಕೆ ಕಳುಹಿಸುವ ಮೂಲಕ ಭಾರತ ಕೈತೊಳೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಬಾಂಗ್ಲಾ ಒತ್ತಡಕ್ಕೆ ಮಣಿದು ಅವರನ್ನು ಕಳುಹಿಸಿಕೊಡುವ ಸಾಧ್ಯತೆ ಹೆಚ್ಚು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ