AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಮೇಲೆ ಭಾರತ ದಾಳಿ ಮಾಡಿದರೆ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಲು ಚೀನಾದೊಂದಿಗೆ ಕೈಜೋಡಿಸಿ; ಬಾಂಗ್ಲಾ ಮಾಜಿ ಜನರಲ್

ಪಹಲ್ಗಾಮ್ ದಾಳಿಯ ಬಗ್ಗೆ ಸೇಡು ತೀರಿಸಿಕೊಳ್ಳಲು ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ಈಶಾನ್ಯ ರಾಜ್ಯಗಳನ್ನು ಆಕ್ರಮಿಸಲು ಚೀನಾದೊಂದಿಗೆ ಸಹಕರಿಸಿ ಎಂದು ಬಾಂಗ್ಲಾದೇಶ ಸರ್ಕಾರದ ಮುಖ್ಯ ಸಲಹೆಗಾರ ಮಹಮ್ಮದ್ ಯೂನಸ್ ಅವರ ಸಹಾಯಕ ಹಾಗೂ ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಈ ಬಗ್ಗೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ರೆಹಮಾನ್ ಅವರ ಹೇಳಿಕೆಗಳಿಂದ ದೂರ ಉಳಿದಿದೆ.

ಪಾಕ್ ಮೇಲೆ ಭಾರತ ದಾಳಿ ಮಾಡಿದರೆ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಲು ಚೀನಾದೊಂದಿಗೆ ಕೈಜೋಡಿಸಿ; ಬಾಂಗ್ಲಾ ಮಾಜಿ ಜನರಲ್
Alm Fazlur Rahman With Yunus
ಸುಷ್ಮಾ ಚಕ್ರೆ
|

Updated on: May 03, 2025 | 3:22 PM

Share

ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ (Bangladesh) ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ್ದರು. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ (Pahalgam Terror Attack) ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಮಿಲಿಟರಿ ಪ್ರತೀಕಾರ ತೀರಿಸಿಕೊಂಡರೆ, ‘ಸೆವೆನ್ ಸಿಸ್ಟರ್ಸ್’ ಎಂದೂ ಕರೆಯಲ್ಪಡುವ ಭಾರತದ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಲು ಚೀನಾದೊಂದಿಗೆ ಕೈ ಜೋಡಿಸಬೇಕು ಎಂದು ಮಾಜಿ ಬಾಂಗ್ಲಾದೇಶದ ಮಿಲಿಟರಿ ಅಧಿಕಾರಿ ಮತ್ತು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಆಪ್ತ ಸಹಚರ ರೆಹಮಾನ್ ಹೇಳಿಕೆ ನೀಡಿ ವಿವಾದವನ್ನು ಹುಟ್ಟುಹಾಕಿದ್ದಾರೆ.

2009ರ ಬಾಂಗ್ಲಾದೇಶ ರೈಫಲ್ಸ್ ದಂಗೆಯನ್ನು ತನಿಖೆ ಮಾಡುವ ರಾಷ್ಟ್ರೀಯ ಸ್ವತಂತ್ರ ಆಯೋಗದ ಮುಖ್ಯಸ್ಥರಾಗಿ ಪ್ರಸ್ತುತ ಮಧ್ಯಂತರ ಸರ್ಕಾರದಿಂದ ನೇಮಕಗೊಂಡ ಮೇಜರ್ ಜನರಲ್ (ನಿವೃತ್ತ) ಎಎಲ್ಎಂ ಫಜ್ಲುರ್ ರೆಹಮಾನ್, ಈ ವಾರದ ಆರಂಭದಲ್ಲಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಬಂಗಾಳಿ ಭಾಷೆಯಲ್ಲಿ ಬರೆದ ತಮ್ಮ ಪೋಸ್ಟ್‌ನಲ್ಲಿ ರೆಹಮಾನ್ ಹೀಗೆ ಹೇಳಿದ್ದಾರೆ: “ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ಬಾಂಗ್ಲಾದೇಶ ಈಶಾನ್ಯ ಭಾರತದ ಏಳು ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಂಟಿ ಮಿಲಿಟರಿ ವ್ಯವಸ್ಥೆ ಕುರಿತು ಚೀನಾದೊಂದಿಗೆ ಚರ್ಚೆಗಳನ್ನು ಪ್ರಾರಂಭಿಸುವುದು ಅಗತ್ಯವೆಂದು ನಾನು ಭಾವಿಸುತ್ತೇನೆ.” ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ತವರಿನಲ್ಲಿ ಮಹತ್ವದ ಕಾರ್ಯಚರಣೆ, ಭಾರತದಿಂದ ಬಾಂಗ್ಲಾದೇಶ ಪ್ರಜೆಗಳಿಗೆ ಗೇಟ್​​​​ಪಾಸ್

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಈ ಬಗ್ಗೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ರೆಹಮಾನ್ ಅವರ ಹೇಳಿಕೆಗಳಿಂದ ದೂರ ಉಳಿದಿದೆ. ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಹೇಳಿಕೆನು ರೆಹಮಾನ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಆ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಘೋಷಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್