
ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ (Bangladesh) ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ್ದರು. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ (Pahalgam Terror Attack) ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಮಿಲಿಟರಿ ಪ್ರತೀಕಾರ ತೀರಿಸಿಕೊಂಡರೆ, ‘ಸೆವೆನ್ ಸಿಸ್ಟರ್ಸ್’ ಎಂದೂ ಕರೆಯಲ್ಪಡುವ ಭಾರತದ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಲು ಚೀನಾದೊಂದಿಗೆ ಕೈ ಜೋಡಿಸಬೇಕು ಎಂದು ಮಾಜಿ ಬಾಂಗ್ಲಾದೇಶದ ಮಿಲಿಟರಿ ಅಧಿಕಾರಿ ಮತ್ತು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಆಪ್ತ ಸಹಚರ ರೆಹಮಾನ್ ಹೇಳಿಕೆ ನೀಡಿ ವಿವಾದವನ್ನು ಹುಟ್ಟುಹಾಕಿದ್ದಾರೆ.
2009ರ ಬಾಂಗ್ಲಾದೇಶ ರೈಫಲ್ಸ್ ದಂಗೆಯನ್ನು ತನಿಖೆ ಮಾಡುವ ರಾಷ್ಟ್ರೀಯ ಸ್ವತಂತ್ರ ಆಯೋಗದ ಮುಖ್ಯಸ್ಥರಾಗಿ ಪ್ರಸ್ತುತ ಮಧ್ಯಂತರ ಸರ್ಕಾರದಿಂದ ನೇಮಕಗೊಂಡ ಮೇಜರ್ ಜನರಲ್ (ನಿವೃತ್ತ) ಎಎಲ್ಎಂ ಫಜ್ಲುರ್ ರೆಹಮಾನ್, ಈ ವಾರದ ಆರಂಭದಲ್ಲಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಬಂಗಾಳಿ ಭಾಷೆಯಲ್ಲಿ ಬರೆದ ತಮ್ಮ ಪೋಸ್ಟ್‌ನಲ್ಲಿ ರೆಹಮಾನ್ ಹೀಗೆ ಹೇಳಿದ್ದಾರೆ: “ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ಬಾಂಗ್ಲಾದೇಶ ಈಶಾನ್ಯ ಭಾರತದ ಏಳು ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಂಟಿ ಮಿಲಿಟರಿ ವ್ಯವಸ್ಥೆ ಕುರಿತು ಚೀನಾದೊಂದಿಗೆ ಚರ್ಚೆಗಳನ್ನು ಪ್ರಾರಂಭಿಸುವುದು ಅಗತ್ಯವೆಂದು ನಾನು ಭಾವಿಸುತ್ತೇನೆ.” ಎಂದಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ತವರಿನಲ್ಲಿ ಮಹತ್ವದ ಕಾರ್ಯಚರಣೆ, ಭಾರತದಿಂದ ಬಾಂಗ್ಲಾದೇಶ ಪ್ರಜೆಗಳಿಗೆ ಗೇಟ್ಪಾಸ್
ಈ ಬಗ್ಗೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ರೆಹಮಾನ್ ಅವರ ಹೇಳಿಕೆಗಳಿಂದ ದೂರ ಉಳಿದಿದೆ. ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಹೇಳಿಕೆನು ರೆಹಮಾನ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಆ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಘೋಷಿಸಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ