AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಭಾರತ-ಪಾಕ್ ಯುದ್ಧವಾದರೆ ಸೌದಿ ಅರೇಬಿಯಾ ಯಾರ ಬೆನ್ನಿಗೆ ನಿಲ್ಲುತ್ತಂತೆ ಗೊತ್ತಾ!? ಪಾಕ್ ರಕ್ಷಣಾ ಸಚಿವ ಹೇಳಿದ್ದಿಷ್ಟು

ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ಹೊಸ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಮುಸ್ಲಿಂ ದೇಶಗಳ ರಕ್ಷಣೆಗಾಗಿ ಈ ಒಪ್ಪಂದ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಇದು ಭಾರತ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು? ಈ ಕುರಿತು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಹೇಳಿದ್ದೇನು? ಭಾರತದ ಪ್ರತಿಕ್ರಿಯೆ ಏನಿದೆ? ವಿವರ ಇಲ್ಲಿದೆ.

ಮತ್ತೆ ಭಾರತ-ಪಾಕ್ ಯುದ್ಧವಾದರೆ ಸೌದಿ ಅರೇಬಿಯಾ ಯಾರ ಬೆನ್ನಿಗೆ ನಿಲ್ಲುತ್ತಂತೆ ಗೊತ್ತಾ!? ಪಾಕ್ ರಕ್ಷಣಾ ಸಚಿವ ಹೇಳಿದ್ದಿಷ್ಟು
ಖ್ವಾಜಾ ಆಸೀಫ್
Ganapathi Sharma
|

Updated on: Sep 20, 2025 | 11:22 AM

Share

ನವದೆಹಲಿ, ಸೆಪ್ಟೆಂಬರ್ 20: ಆಪರೇಷನ್ ಸಿಂದೂರ್ ನಂತರ ಭಾರತ (India) ಹಾಗೂ ಪಾಕಿಸ್ತಾನ (Pakistan) ನಡುವೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಯುದ್ಧದ ವಾತಾವರಣ ತುಸು ತಣ್ಣಗಾಗಿದ್ದರೂ ಉಭಯ ದೇಶಗಳ ನಡುವಣ ಸಮಸ್ಯೆಗಳು ಬಗೆಹರಿದಿಲ್ಲ. ಇದೇ ಸಂದರ್ಭದಲ್ಲಿ, ಭಾರತದೊಂದಿಗೆ ಅತಿದೊಡ್ಡ ಪಾಲುದಾರಿಕೆ ಹೊಂದಿರುವ ಸೌದಿ ಅರೇಬಿಯಾ ಜತೆ ಪಾಕಿಸ್ತಾನ ರಕ್ಷಣಾ ಒಪ್ಪಂದ ಮಾಡಿಕೊಂಡಿದೆ. ಸೌದಿ ಅರೇಬಿಯಾ (Saudi Arabia) ಜತೆ ಭಾರತದ ಬಾಂಧವ್ಯ, ವ್ಯಾಪಾರ-ವಹಿವಾಟು ಚೆನ್ನಾಗಿದೆ. ಇಂಥ ಪರಿಸ್ಥಿತಿಯಲ್ಲಿ ಒಂದು ವೇಳೆ ಮತ್ತೆ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧ ಸಂಭವಿಸಿದರೆ ಸೌದಿ ಅರೇಬಿಯಾ ಯಾರ ಪರ ನಿಲ್ಲಲಿದೆ ಎಂಬ ಪ್ರಶ್ನೆಗೆ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ (khawaja Asif)  ಏನು ಹೇಳಿದ್ದಾರೆ ಗೊತ್ತೇ!? ‘ಖಂಡಿತವಾಗಿಯೂ ನಮ್ಮ ಬೆಂಬಲಕ್ಕೆ ಬರಲಿದೆ’ ಎಂದಿದ್ದಾರೆ.

ಏನಿದು ಪಾಕಿಸ್ತಾನ – ಸೌದಿ ಅರೇಬಿಯಾ ನಡುವಣ ಒಪ್ಪಂದ?

ಪರಸ್ಪರ ರಕ್ಷಣಾ ಕಾರ್ಯತಂತ್ರ ಒಪ್ಪಂದಕ್ಕೆ ಸೌದಿ ಅರೇಬಿಯ ಮತ್ತು ಪಾಕಿಸ್ತಾನ ಬುಧವಾರ ಸಹಿ ಹಾಕಿದ್ದವು. ಈ ವಿಚಾರವಾಗಿ ಇಸ್ಲಾಮಬಾದ್​​​ನಲ್ಲಿ ಶುಕ್ರವಾರ ಪಾಕ್ ರಕ್ಷಣಾ ಸಚಿವ ಮಾತನಾಡಿದ್ದು, ಇದೊಂದು ನ್ಯಾಟೋ ಮಾದರಿಯ ಒಪ್ಪಂದ. ಈ ಒಪ್ಪಂದದಲ್ಲಿ ಇನ್ನಷ್ಟು ಅರಬ್ ದೇಶಗಳು ಸೇರ್ಪಡೆಯಾಗುವ ಸಾಧ್ಯತೆಯ ಬಾಗಿಲು ಮುಚ್ಚಿಲ್ಲ ಎಂದಿದ್ದಾರೆ.

ಮುಸ್ಲಿಂ ದೇಶಗಳ ರಕ್ಷಣೆಗೆ ಒಪ್ಪಂದ ಎಂದ ಪಾಕ್ ಸಚಿವ

ಇದು ಆಕ್ರಮಣಕಾರಿ ಒಪ್ಪಂದವಲ್ಲ. ಬದಲಿಗೆ ನ್ಯಾಟೋ ಮಾದರಿಯ ರಕ್ಷಣಾತ್ಮಕ ಒಪ್ಪಂದ. ವಿಶೇಷವಾಗಿ, ಮುಸ್ಲಿಂ ದೇಶಗಳಿಗೆ ತಮ್ಮನ್ನು ರಕ್ಷಿಸಿಕೊಳ್ಳಲು ಒಟ್ಟಾಗಿ ಹೋರಾಟ ಮಾಡಲು ಇಂತಹ ಒಪ್ಪಂದದ ಅಗತ್ಯವಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಪ್ರತಿಪಾದಿಸಿದ್ದಾರೆ.

ಇದೇ ವೇಳೆ, ಮತ್ತೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಿದರೆ ಸೌದಿ ಅರೇಬಿಯಾ ನಿಮ್ಮ ಪರ ನಿಲ್ಲಲಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಂಡಿತವಾಗಿಯೂ’ ಎಂದು ಹೇಳಿದ್ದಾರೆ.

ಸೌದಿ ಒಪ್ಪಂದದ ಕುರಿತು ಭಾರತದ ಪ್ರತಿಕ್ರಿಯೆ ಏನು?

ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಣ ಒಪ್ಪಂದದ ಬಗ್ಗೆ ಭಾರತ ಕೂಡ ಪ್ರತಿಕ್ರಿಯಿಸಿದೆ. ಸೌದಿ ಅರೇಬಿಯಾದೊಂದಿಗೆ ಭಾರತ ಅನೇಕ ವ್ಯವಹಾರ ಪಾಲುದಾರಿಕೆ ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ನಡುವಣ ವ್ಯವಹಾರ ಗಮನಾರ್ಹವಾಗಿ ಪ್ರಗತಿಯಾಗಿದೆ. ಉಭಯ ದೇಶಗಳ ಹಿತಾಸಕ್ತಿ ಮತ್ತು ಬಾಂಧವ್ಯ ಕುರಿತ ಸೂಕ್ಷ್ಮ ವಿಚಾರಗಳನ್ನು ಸೌದಿ ಅರೇಬಿಯಾ ಗಮನದಲ್ಲಿ ಇಟ್ಟುಕೊಳ್ಳುತ್ತದೆ ಎಂಬ ಭರವಸೆ ಇದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಚೈಸ್ವಾಲ್ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!