AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಸಾಲ ಕೊಟ್ಟ IMF

ಭಾರತದ ತೀವ್ರ ವಿರೋಧದ ಹೊರತಾಗಿಯೂ, ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್‌ಗಳ ಸಾಲವನ್ನು ಅನುಮೋದಿಸಿದೆ. ಪಾಕಿಸ್ತಾನದ ಆರ್ಥಿಕ ಸ್ಥಿತಿಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಐಎಂಎಫ್ ಹೇಳಿದೆ. ಆದರೆ, ಈ ಸಾಲ ಪಾಕಿಸ್ತಾನದ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಕೆಯಾಗಬಹುದು ಎಂಬ ಭಾರತದ ಆತಂಕವನ್ನು ಐಎಂಎಫ್ ನಿರ್ಲಕ್ಷಿಸಿದೆ. ಪಾಕಿಸ್ತಾನದ ಹಿಂದಿನ ಸಾಲಗಳನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂಬುದನ್ನು ಭಾರತ ಒತ್ತಿ ಹೇಳಿದೆ.

ಭಾರತದ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಸಾಲ ಕೊಟ್ಟ IMF
ಐಎಂ​ಎಫ್​
ವಿವೇಕ ಬಿರಾದಾರ
| Updated By: Ganapathi Sharma|

Updated on:May 10, 2025 | 7:06 AM

Share

ವಾಷಿಂಗ್ಟನ್​, ಮೇ 10: ಭಾರತದ (India) ವಿರೋಧದ ನಡುವೆಯೂ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಪಾಕಿಸ್ತಾನಕ್ಕೆ (Pakistan) 19 ಸಾವಿರ ಕೋಟಿ ರೂಪಾಯಿ ಸಾಲ ನೀಡಿದೆ. ಶುಕ್ರವಾರ (ಮೇ.09) ದಂದು ನಡೆದ ಐಎಂಎಫ್​ ಎಕ್ಸಿಕ್ಯೂಟಿವ್​ ಬೋರ್ಡನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಭಾರತದ ಮನವಿಯನ್ನು ಧಿಕ್ಕರಿಸಿ ಐಎಂಎಫ್​ ಪಾಕಿಸ್ತಾನಕ್ಕೆ ಸಾಲ ನೀಡಿದೆ.

ಐಎಂಎಫ್​ ಕಾರ್ಯಕಾರಿ ಮಂಡಳಿಯು ತನ್ನ ವಿಸ್ತೃತ ನಿಧಿ ಸೌಲಭ್ಯ (EFF) ಅಡಿಯಲ್ಲಿ ಪಾಕಿಸ್ತಾನಕ್ಕೆ 1 ಬಿಲಿಯನ್​ ಡಾಲರಗಳ ಎರಡನೇ ಸಾಲದ ಕಂತನ್ನು ವಿತರಿಸಲು ತೀರ್ಮಾನಿಸಿದೆ. ಆದರೆ, ಪಾಕಿಸ್ತಾನ ಪ್ರಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಹಣ ದುರಪಯೋಗಪಡಿಸಿಕೊಳ್ಳಬಹುದು ಎಂದು ಭಾರತ ಹೇಳಿದೆ. ಅಲ್ಲದೇ, ನಿರ್ಣಾಯಕ ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಭೆಯಲ್ಲಿ ಮತದಾನದಿಂದ ದೂರ ಉಳಿದಿದೆ.

ಪುನರಾವರ್ತಿತ ಆರ್ಥಿಕ ಬಿಕ್ಕಟ್ಟುಗಳು ಮತ್ತು ಹಿಂದಿನ ಐಎಂಎಫ್​ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಕಳಪೆ ದಾಖಲೆ ಇದ್ದರೂ ಪಾಕಿಸ್ತಾನದ ಪ್ರಗತಿಯನ್ನು ಐಎಂಎಫ್​ ಪರಿಶೀಲಿಸಿದ ನಂತರ ಈ ಅನುಮೋದನೆ ನೀಡಿದೆ.

ಟ್ವಿಟರ್ ಪೋಸ್ಟ್​

ಇನ್ನು, ಹಿಂದಿನ ಐಎಂಎಫ್​ ಸಾಲಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಪಾಕಿಸ್ತಾನದ ನಿರಂತರ ವೈಫಲ್ಯದ ಬಗ್ಗೆ ಭಾರತ ಎಚ್ಚರಿಕೆ ನೀಡಿತ್ತು. ನಿಧಿಯ ಕಾರ್ಯಕ್ರಮ ವಿನ್ಯಾಸಗಳು ಮತ್ತು ಮೇಲ್ವಿಚಾರಣಾ ಕಾರ್ಯವಿಧಾನಗಳು ದೇಶದ ಆರ್ಥಿಕ ಮತ್ತು ರಾಜಕೀಯ ವಾಸ್ತವಗಳಿಗೆ ಹೊಂದಿಕೊಳ್ಳುತ್ತವೆಯೇ ಎಂದು ಭಾರತ ಪ್ರಶ್ನಿಸಿತ್ತು.

ಇದನ್ನೂ ಓದಿ: ಪಾಕಿಸ್ತಾನದ ಜೊತೆ ಸಂಘರ್ಷ; ಮೇ 15ರವರೆಗೆ ಭಾರತದ 24 ವಿಮಾನ ನಿಲ್ದಾಣಗಳು ಬಂದ್

ಟ್ವೀಟ್​ ಮಾಡಿ ಸಾಲ ಕೇಳಿದ್ದ ಪಾಕ್​

ಎರಡು ದಿನಗಳಿಂದ ಭಾರತ ನೀಡುತ್ತಿರುವ ತಿರುಗೇಟು ಸಹಿಸಲು ಕಷ್ಟ ಪಡುತ್ತಿರುವ ಪಾಕಿಸ್ತಾನವು ಟ್ವೀಟ್​ ಮೂಲಕ ಭಾರಿ ನಷ್ಟವಾಗಿದೆ ಎಂದು ಉಲ್ಲೇಖಿಸಿ ಪಾಕಿಸ್ತಾನ ಸರ್ಕಾರದ ಆರ್ಥಿಕ ವ್ಯವಹಾರಗಳ ವಿಭಾಗವು ತನ್ನ ಅಂತಾಷ್ಟ್ರೀಯ ಪಾಲುದಾರರಿಂದ ದೊಡ್ಡ ಪರಿಹಾರವನ್ನು ಕೇಳಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:03 am, Sat, 10 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು