AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧಾರ; ಆರ್ಥಿಕ ಬಲ ಇಲ್ಲದೆ ತಾಲಿಬಾನಿಗಳು ಕಂಗಾಲು

Afghanistan: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಈಗ ಐಎಂಫ್ ನಿರ್ಧಾರ ಮಾಡಿದೆ. ಈ ಬಗ್ಗೆ ಐಎಂಎಫ್ ವಕ್ತಾರರಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧಾರ; ಆರ್ಥಿಕ ಬಲ ಇಲ್ಲದೆ ತಾಲಿಬಾನಿಗಳು ಕಂಗಾಲು
ತಾಲಿಬಾನ್ ಹೋರಾಟಗಾರರು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Aug 20, 2021 | 10:57 AM

Share

ದೆಹಲಿ: ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್‌ನ್ಯಾಷನಲ್ ಮಾನಿಟರಿ ಫಂಡ್ (International Monetary Fund- IMF) ನಿರ್ಧಾರ ಮಾಡಿದೆ. ಆಫ್ಘನ್‌ಗೆ ಹಣ ನೀಡಲು ಈ ಹಿಂದೆ ಐಎಂಎಫ್ ಅನುಮೋದನೆ ಕೊಟ್ಟಿತ್ತು. 650 ಮಿಲಿಯನ್ ಡಾಲರ್ ನೀಡಲು ಅನುಮೋದನೆ ಸೂಚಿಸಿತ್ತು. ಆಗಸ್ಟ್ 23ರಂದು 340 ಮಿಲಿಯನ್ ಡಾಲರ್ ನೀಡಬೇಕಾಗಿತ್ತು. ಆದರೆ, ಅಫ್ಘಾನಿಸ್ತಾನವನ್ನು (Afghanistan) ತಾಲಿಬಾನ್ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಈಗ ಐಎಂಫ್ ನಿರ್ಧಾರ ಮಾಡಿದೆ. ಈ ಬಗ್ಗೆ ಐಎಂಎಫ್ ವಕ್ತಾರರಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ, ಆಫ್ಘನ್‌ನಲ್ಲಿರುವ ತಾಲಿಬಾನಿಗಳಿಗೆ (Taliban) ಹಣ ಸಿಗದೆ ಕಂಗಾಲಾಗಿದ್ದಾರೆ. ದಿ ಅಪ್ಘಾನಿಸ್ತಾನ ಬ್ಯಾಂಕ್‌ನ ಹಣವನ್ನು ಅಮೆರಿಕ ಜಪ್ತಿ ಮಾಡಿದೆ. ಹೀಗಾಗಿ ಹಣ ಸಿಗದೆ ತಾಲಿಬಾನ್ ಉಗ್ರರು ಕಂಗಾಲಾಗಿದ್ದಾರೆ. ಅಮೆರಿಕ, ಇಂಗ್ಲೆಂಡ್, ಜರ್ಮನಿ, ಭಾರತ ಸೇರಿದಂತೆ ಪ್ರಮುಖ ದೇಶಗಳಿಂದ ತಾಲಿಬಾನಿಗಳಿಗೆ ಹಣ ಸಿಗುತ್ತಿಲ್ಲ. ಪಾಕ್ ಈಗಾಗಲೇ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಹೀಗಾಗಿ ಸದ್ಯ ಹಣ ಸಿಗದೆ ತಾಲಿಬಾನಿಗಳು ಕಂಗಾಲಾಗಿದ್ದಾರೆ. ಚೀನಾದಿಂದ ಹಣ ಬರುವ ನಿರೀಕ್ಷೆಯಲ್ಲಿ ತಾಲಿಬಾನ್ ಉಗ್ರರು ಇದ್ದಾರೆ. ಅಪ್ಘಾನಿಸ್ತಾನ ಅಭಿವೃದ್ಧಿಗೆ ಚೀನಾ ಕೊಡುಗೆ ನೀಡಬಹುದು ಎಂದು ತಾಲಿಬಾನ್ ವಕ್ತಾರ ಸುಹೇಲ್ ಶಹೀನ್ ಹೇಳಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಯಾವ ರೀತಿ ಅಧಿಕಾರ ನಡೆಸಬೇಕು ಎಂಬುದರ ಬಗ್ಗೆ ತಾಲಿಬಾನ್ ತಂಡ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ತಾಲಿಬಾನ್‌ನ ಹಿರಿಯ ಸದಸ್ಯ ವಹೀದುಲ್ಲಾ ಹಾಶಿಮಿ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಗುರುವಾರ (ಆಗಸ್ಟ್ 19) ಮಾಡಿತ್ತು. ಈ ಗುಂಪು ತನ್ನ ಹಿಂದಿನ ಆಡಳಿತದಂತೆಯೇ ಆಡಳಿತವನ್ನು ಯೋಜಿಸುತ್ತಿರುವುದರಿಂದ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯು ಇರುವುದಿಲ್ಲ. ಯಾಕೆಂದರೆ ಅದು ದೇಶದಲ್ಲಿ ಯಾವುದೇ ನೆಲೆಯನ್ನು ಹೊಂದಿಲ್ಲ ಎಂದು ಸದಸ್ಯರು ವಿವರಿಸಿದ್ದರು. “ಅಫ್ಘಾನಿಸ್ತಾನದಲ್ಲಿ ನಾವು ಯಾವ ರೀತಿಯ ರಾಜಕೀಯ ವ್ಯವಸ್ಥೆಯನ್ನು ಅನ್ವಯಿಸಬೇಕು ಎಂಬುದನ್ನು ನಾವು ಚರ್ಚಿಸುವುದಿಲ್ಲ ಏಕೆಂದರೆ ಅದು ಸ್ಪಷ್ಟವಾಗಿದೆ. ಇದು ಶರಿಯಾ ಕಾನೂನು, ಅಷ್ಟೇ” ಎಂದು ಹಾಶಿಮಿ ಹೇಳಿದ್ದರು.

ದೇಶದ ಮೇಲ್ವಿಚಾರಣೆ ನೋಡಿಕೊಳ್ಳಲಿದೆ ಕೌನ್ಸಿಲ್ ಹಾಶಿಮಿ ಪ್ರಕಾರ ಒಂದು ಕೌನ್ಸಿಲ್ ದೇಶದ ದಿನನಿತ್ಯದ ಚಟುವಟಿಕೆಯ ಮೇಲ್ವಿಚಾರಣೆ ಮಾಡುತ್ತದೆ. ತಾಲಿಬಾನ್‌ನ ಅತ್ಯುನ್ನತ ನಾಯಕ ಹೈಬತುಲ್ಲಾ ಅಖುಂಡಜಾದ ಒಟ್ಟಾರೆ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. 1996 ರಿಂದ 2001 ರವರೆಗೆ ತಾಲಿಬಾನ್‌ಗಳು ಅಫ್ಘಾನಿಸ್ತಾನವನ್ನು ಹೇಗೆ ಆಳಿದರು ಎಂಬಂತೆಯೇ ಇದು ಇರಲಿದೆ. ಆ ಸಮಯದಲ್ಲಿ ಸರ್ವೋಚ್ಚ ನಾಯಕ ಮುಲ್ಲಾ ಒಮರ್ ನೆರಳಿನಲ್ಲಿ ಹಿನ್ನೆಲೆಯಲ್ಲಿ ನಿಂತು ದೈನಂದಿನ ಆಡಳಿತವು ಕೌನ್ಸಿಲ್​ನ ಜವಾಬ್ದಾರಿ ಆಗಿತ್ತು.

ಇದನ್ನೂ ಓದಿ: ದಿಕ್ಕುತಪ್ಪಿರುವ ಅಫ್ಘಾನಿಸ್ತಾನದ ಆಡಳಿತಕ್ಕೆ ತಾಲಿಬಾನಿಯ ಈ ಏಳು ಮಂದಿಯೇ ಸೂತ್ರಧಾರಿಗಳು!

Sharia Law: ಅಫ್ಘಾನಿಸ್ತಾನದಲ್ಲಿ ಷರಿಯಾ ಆಡಳಿತ ಜಾರಿಗೆ ಸಿದ್ಧತೆ; ಷರಿಯಾ ಕಾನೂನು ಎಂದರೇನು?

(IMF Indian Monetary Fund blocks Funds transfer to Afghanistan Taliban facing Economic Crisis)

Published On - 10:52 am, Fri, 20 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?