ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರ ಹೆಚ್ಚಲು ಕಾರಣ..ಪುರುಷರೇನು ರೋಬೋಟ್​ಗಳಲ್ಲ: ಇಮ್ರಾನ್ ಖಾನ್​ ಬೇಜವಾಬ್ದಾರಿ ಹೇಳಿಕೆ

ಇಮ್ರಾನ್​ ಖಾನ್​ ಇಂಥ ಹೇಳಿಕೆ ನೀಡಿದ್ದು ಇದೇ ಮೊದಲೇನೂ ಅಲ್ಲ. ಏಪ್ರಿಲ್​​ನಲ್ಲೂ ಕೂಡ ಇಂಥದ್ದೇ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದರು. ಪ್ರಧಾನಮಂತ್ರಿ ಮಹಿಳೆಯರ ಕ್ಷಮೆಯಾಚಿಸಬೇಕು ಎಂಬ ಆಗ್ರಹ ಭುಗಿಲೇಳುವಂತೆ ಮಾಡಿದ್ದರು.

ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರ ಹೆಚ್ಚಲು ಕಾರಣ..ಪುರುಷರೇನು ರೋಬೋಟ್​ಗಳಲ್ಲ: ಇಮ್ರಾನ್ ಖಾನ್​ ಬೇಜವಾಬ್ದಾರಿ ಹೇಳಿಕೆ
ಪಾಕ್ ಪ್ರಧಾನಿ ಇಮ್ರಾನ್ ಖಾನ್
Follow us
TV9 Web
| Updated By: Lakshmi Hegde

Updated on:Jun 21, 2021 | 3:13 PM

ಪಾಕಿಸ್ತಾನದ ಪ್ರಧಾನಿ ಒಂದಲ್ಲ ಒಂದು ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್​ ಆಗುತ್ತಿರುತ್ತಾರೆ…ಟೀಕೆಗೆ ಗುರಿಯಾಗುತ್ತಿರುತ್ತಾರೆ. ಇದೀಗ ಇಮ್ರಾನ್​ ಖಾನ್​ ಮತ್ತೊಮ್ಮೆ ಜನರಿಂದ ಬೈಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಲು ಮಹಿಳೆಯರು ತೊಡುವ ಉಡುಗೆಗಳೇ ಕಾರಣ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಇಮ್ರಾನ್​ ಖಾನ್​, ಮಹಿಳೆಯರು ಮೈಮೇಲೆ ಕಡಿಮೆ ಬಟ್ಟೆ ಧರಿಸಿದರೆ ಅದು ಪುರುಷನ ಮೇಲೆ ಖಂಡಿತ ಪ್ರಭಾವ ಬೀರುತ್ತದೆ. ಯಾಕೆಂದರೆ ಅವರೇನೂ ರೋಬೋಟ್​ಗಳಲ್ಲ. ಇದು ಕಾಮನ್​ಸೆನ್ಸ್​..ಮಹಿಳೆಯರು ತುಂಡು ಉಡುಗೆ ತೊಟ್ಟರೆ ಪುರುಷರಿಗೆ ಸಹಜವಾಗಿಯೇ ಪ್ರಚೋದನೆ ಆಗುತ್ತದೆ. ಅದನ್ನು ನಿಯಂತ್ರಿಸಿಕೊಳ್ಳಲಾಗದವರು ಅತ್ಯಾಚಾರ ಮಾಡಲು ಮುಂದಾಗುತ್ತಾರೆ. ಲೈಂಗಿಕ ದೌರ್ಜನ್ಯ ನಡೆಸುತ್ತಾರೆ ಎಂದು ಹೇಳಿದ್ದಾಗಿ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗದ ದಕ್ಷಿಣ ಏಷ್ಯಾದ ಕಾನೂನು ಸಲಹೆಗಾರ್ತಿ ರೀಮಾ ಓಮರ್​ ಟ್ವೀಟ್​ ಮಾಡಿದ್ದಾರೆ.

ನಾಚಿಕೆಗೇಡು ! ಇಮ್ರಾನ್​ಖಾನ್​ರ ಈ ಹೇಳಿಕೆಗೆ ಸೋಷಿಯಲ್​ ಮೀಡಿಯಾದಲ್ಲಿ ಅಪಾರ ವಿರೋಧ ವ್ಯಕ್ತವಾಗಿದೆ. ಇದು ನಿಜಕ್ಕೂ ನಾಚಿಕೆ ಗೇಡು ಎಂದು ಹಲವು ಮಹಿಳೆಯರು ಹೇಳಿದ್ದಾರೆ. ಆದರೆ ಪಾಕಿಸ್ತಾನ ಪ್ರಧಾನಮಂತ್ರಿ ಕಚೇರಿಯ ಡಿಜಿಟಲ್​ ಮೀಡಿಯಾ ವಿಭಾಗದ ಡಾ. ಅರ್ಸಲ್​ ಖಲೀದ್​ ಇದನ್ನು ತಳ್ಳಿಹಾಕಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್​​ರ ಹೇಳಿಕೆಗಳನ್ನು ತಿರುಚಲಾಗಿದೆ. ಆಯ್ದ ಭಾಗಗಳನ್ನಷ್ಟೇ ವೈರಲ್ ಮಾಡಿಕೊಂಡು ಟೀಕಿಸಲಾಗುತ್ತಿದೆ ಎಂದಿದ್ದಾರೆ.

ಇದೇ ಮೊದಲಲ್ಲ ಇಮ್ರಾನ್​ ಖಾನ್​ ಇಂಥ ಹೇಳಿಕೆ ನೀಡಿದ್ದು ಇದೇ ಮೊದಲೇನೂ ಅಲ್ಲ. ಏಪ್ರಿಲ್​​ನಲ್ಲೂ ಕೂಡ ಇಂಥದ್ದೇ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದರು. ಪ್ರಧಾನಮಂತ್ರಿ ಮಹಿಳೆಯರ ಕ್ಷಮೆಯಾಚಿಸಬೇಕು ಎಂಬ ಆಗ್ರಹ ಭುಗಿಲೇಳುವಂತೆ ಮಾಡಿದ್ದರು. ಇಸ್ಲಾಂನಲ್ಲಿ ಮಹಿಳೆಯರು ಮುಸುಕು ಹಾಕಿಕೊಳ್ಳುವ ಪರಿಕಲ್ಪನೆ ಬಂದಿದ್ದೇ ಈ ಲೈಂಗಿಕ ದೌರ್ಜನ್ಯ ತಡೆಯುವ ಕಾರಣಕ್ಕೆ. ಎಲ್ಲರಿಗೂ ತಮ್ಮ ಕಾಮನೆಯನ್ನು ನಿಯಂತ್ರಿಸಿಕೊಳ್ಳುವ ಶಕ್ತಿ ಇರುವುದಿಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನದಲ್ಲಿ ಅತ್ಯಾಚಾರ ಹೆಚ್ಚಲು ಒಂದರ್ಥದಲ್ಲಿ ಮಹಿಳೆಯರೇ ಕಾರಣ ಎಂಬಂತೆ ಮಾತನಾಡಿದ್ದರು.

ಪಾಕ್​​ನಲ್ಲಿ ಹೆಚ್ಚುತ್ತಿದೆ ಅತ್ಯಾಚಾರ ಪ್ರಕರಣ ಪಾಕಿಸ್ತಾನದಲ್ಲಿ ಪ್ರತಿ 24ಗಂಟೆಗೆ ಸುಮಾರು 11 ರೇಪ್​ ಕೇಸ್​ಗಳು ದಾಖಲಾಗುತ್ತವೆ ಎಂದು ಡಾಟಾದಲ್ಲಿ ಉಲ್ಲೇಖವಾಗಿದೆ. ಕಳೆದ 6ವರ್ಷಗಳಲ್ಲಿ ಒಟ್ಟು 22 ಸಾವಿರ ಪ್ರಕರಣಗಳು ಪೊಲೀಸ್​ ಠಾಣೆಯಲ್ಲಿ ದಾಖಲಾಗಿವೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆ ಹೆಸರಿನಲ್ಲಿ ಅಕ್ರಮ; ಕಾರ್ಮಿಕರ ಬದಲು ಜೆಸಿಬಿ ಬಳಸಿ ಕಾಮಗಾರಿ ಮಾಡಿಸಿದ ಆರೋಪ

Imran Khan blames women clothing for increase rapes in Pakistan

Published On - 3:12 pm, Mon, 21 June 21

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್