ಇಮ್ರಾನ್ ಖಾನ್ ಅವಿಶ್ವಾಸ ಮತ ಪ್ರಕರಣ: ಸಂವಿಧಾನದ ಪ್ರಕಾರ ಎಲ್ಲವೂ ನಡೆಯುತ್ತಿದ್ದರೆ ಬಿಕ್ಕಟ್ಟು ಎಲ್ಲಿದೆ?: ಸಿಜೆಪಿ ಪ್ರಶ್ನೆ

ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಸುಪ್ರೀಂಕೋರ್ಟ್ ಎಲ್ಲವೂ ನೆಲದ ಕಾನೂನಿನ ಪ್ರಕಾರವೇ ನಡೆಯುತ್ತಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಹೇಗೆ ಉಂಟಾಗುತ್ತದೆ ಎಂದು ಅಧ್ಯಕ್ಷ ಆರಿಫ್ ಅಲ್ವಿ ಅವರ ವಕೀಲರನ್ನು ಕೇಳಿದೆ

ಇಮ್ರಾನ್ ಖಾನ್ ಅವಿಶ್ವಾಸ ಮತ ಪ್ರಕರಣ: ಸಂವಿಧಾನದ ಪ್ರಕಾರ ಎಲ್ಲವೂ ನಡೆಯುತ್ತಿದ್ದರೆ ಬಿಕ್ಕಟ್ಟು ಎಲ್ಲಿದೆ?: ಸಿಜೆಪಿ ಪ್ರಶ್ನೆ
ಇಮ್ರಾನ್ ಖಾನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 07, 2022 | 3:06 PM

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ (Imran Khan) ಮತ್ತು ಅವರ ಮಿತ್ರ ಪಕ್ಷಗಳಿಗೆ ಸಂಸತ್ತನ್ನು ವಿಸರ್ಜಿಸಲು ಕಾನೂನುಬದ್ಧ ಹಕ್ಕಿದೆಯೇ ಎಂಬ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಸುಪ್ರೀಂಕೋರ್ಟ್ (Pakistan Supreme Court), ಎಲ್ಲವೂ ನೆಲದ ಕಾನೂನಿನ ಪ್ರಕಾರವೇ ನಡೆಯುತ್ತಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಹೇಗೆ ಉಂಟಾಗುತ್ತದೆ ಎಂದು ಅಧ್ಯಕ್ಷ ಆರಿಫ್ ಅಲ್ವಿ ಅವರ ವಕೀಲರನ್ನು ಕೇಳಿದೆ ಎಂದು ಪಾಕಿಸ್ತಾನಿ ಪತ್ರಿಕೆ ಡಾನ್‌ ವರದಿ ಮಾಡಿದೆ. ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ (CJP) ಉಮರ್ ಅಟಾ ಬಂಡಿಯಲ್ ನೇತೃತ್ವದ ಐವರು ಸದಸ್ಯರ ಪೀಠವು ಗುರುವಾರ ಬೆಳಿಗ್ಗೆ 9.30 ರ ಸುಮಾರಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದೆ ಎಂದು ವರದಿ ತಿಳಿಸಿದೆ. ಅಧ್ಯಕ್ಷರನ್ನು ಪ್ರತಿನಿಧಿಸುವ ಸೆನೆಟರ್ ಅಲಿ ಜಾಫರ್ ಅವರಲ್ಲಿ ಪೀಠವು ಪ್ರಧಾನ ಮಂತ್ರಿ ಜನಪ್ರತಿನಿಧಿಯೇ? ಸಂಸತ್ತು ಸಂವಿಧಾನದ ರಕ್ಷಕ ಅಲ್ಲವೇ ಎಂದು ಕೇಳಿದೆ. ಫೆಡರಲ್ ಸರ್ಕಾರದ ರಚನೆಯು ಸಂಸತ್ತಿನ “ಆಂತರಿಕ ವಿಷಯವೇ” ಎಂದು ಸಿಜೆಪಿ ಕೇಳಿದೆ.  ಸುಪ್ರೀಂಕೋರ್ಟ್ ಸೋಮವಾರ ಖಾನ್ ಅವರ ಕಾನೂನು ತಂಡ, ಅವರ ಮಿತ್ರಪಕ್ಷಗಳು ಮತ್ತು ಪ್ರತಿಪಕ್ಷಗಳ ವಾದಗಳನ್ನು ಆಲಿಸಿತ್ತು. ಆದರೆ ನಂತರ ಅಧಿವೇಶನವನ್ನು ಮುಂದೂಡಿತು. ಪ್ರಧಾನಿ ಖಾನ್ ಅವರು ಅವಿಶ್ವಾಸ ಮತವನ್ನು ಎದುರಿಸುವ ಬದಲು ಸಂಸತ್ತನ್ನು ವಿಸರ್ಜಿಸುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದ್ದಾರೆಯೇ ಎಂಬ ತೀರ್ಪನ್ನು ವಿಳಂಬಗೊಳಿಸಿದ ಕಾರಣ ಆಪಾದಿತ “ವಿದೇಶಿ ಪಿತೂರಿ” ಕುರಿತು ಇನ್ನಷ್ಟು ತಿಳಿದುಕೊಳ್ಳಲು ಸುಪ್ರೀಂಕೋರ್ಟ್ ಬುಧವಾರ ರಾಷ್ಟ್ರೀಯ ಭದ್ರತಾ ಮಂಡಳಿಯ ಸಭೆಯ ಟಿಪ್ಪಣಿಯನ್ನು ಕೇಳಿದೆ.

ನ್ಯಾಶನಲ್ ಅಸೆಂಬ್ಲಿ ಡೆಪ್ಯೂಟಿ ಸ್ಪೀಕರ್ ಖಾಸಿಂ ಖಾನ್ ಸೂರಿ ಅವರು ಅವಿಶ್ವಾಸ ನಿರ್ಣಯವು ಸರ್ಕಾರವನ್ನು ಉರುಳಿಸುವ “ವಿದೇಶಿ ಪಿತೂರಿ” ಯೊಂದಿಗೆ ಸಂಬಂಧ ಹೊಂದಿದೆ. ಆದ್ದರಿಂದ ಅದನ್ನು ನಿರ್ವಹಿಸಲಾಗುವುದಿಲ್ಲ ಎಂದು ಭಾನುವಾರ ತೀರ್ಪು ನೀಡಿದರು. ನಿಮಿಷಗಳ ನಂತರ ಅಧ್ಯಕ್ಷ ಆರಿಫ್ ಅಲ್ವಿ ಪ್ರಧಾನಿ ಖಾನ್ ಅವರ ಸಲಹೆಯ ಮೇರೆಗೆ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದರು. ಖಾನ್ ಅವರಿಗೆ ಅನುಕೂಲಕರ ತೀರ್ಪು ಬಂದರೆ 90 ದಿನಗಳಲ್ಲಿ ಚುನಾವಣೆ ನಡೆಯಲಿದೆ. ನ್ಯಾಯಾಲಯವು ಉಪಸಭಾಪತಿ ವಿರುದ್ಧ ತೀರ್ಪು ನೀಡಿದರೆ, ಸಂಸತ್ ಮತ್ತೆ ಸಭೆ ಸೇರಿ ಖಾನ್ ವಿರುದ್ಧ ಅವಿಶ್ವಾಸ ಮತವನ್ನು ನಡೆಸಲಿದೆ ಎಂದು ತಜ್ಞರು ಹೇಳಿದ್ದಾರೆ.

ಮಾರ್ಚ್ 8 ರಂದು ಪ್ರತಿಪಕ್ಷಗಳು ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ ನಂತರ ಚಾಲ್ತಿಯಲ್ಲಿರುವ ಬಿಕ್ಕಟ್ಟು ತೆರೆದುಕೊಳ್ಳಲು ಪ್ರಾರಂಭಿಸಿತು. ಮತದಾನವು ಏಪ್ರಿಲ್ 3 ರಂದು ನಡೆಯಬೇಕಿತ್ತು ಆದರೆ ಉಪಸಭಾಪತಿಯು ಚುನಾಯಿತ ಸರ್ಕಾರವನ್ನು ಉರುಳಿಸಲು “ಪಿತೂರಿ”ಯ ಭಾಗವಾಗಿದೆ ಎಂದು ಹೇಳಿ ಅದನ್ನು ವಜಾಗೊಳಿಸಿದರು.

ನ್ಯಾಷನಲ್ ಅಸೆಂಬ್ಲಿ ವಿಸರ್ಜನೆಗೆ ಸಂಬಂಧಿಸಿದಂತೆ ಪ್ರಧಾನಿ ಮತ್ತು ಅಧ್ಯಕ್ಷರು ಆರಂಭಿಸಿದ ಎಲ್ಲಾ ಆದೇಶಗಳು ಮತ್ತು ಕ್ರಮಗಳು ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಬಂಡಿಯಲ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸರ್ಕಾರ ಬರುತ್ತದೆ ಎಂಬ ಭಯದಿಂದ ದೇಶ ಬಿಟ್ಟು ದುಬೈಗೆ ಪರಾರಿಯಾದ ಇಮ್ರಾನ್ ಖಾನ್​ ಮೂರನೇ ಪತ್ನಿಯ ಸೇಹಿತೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ