ಏಪ್ರಿಲ್​ನಿಂದಲೇ ತನ್ನ ಸೇನೆಗೆ ಭಾರತೀಯರ ನೇಮಕಾತಿ ನಿಲ್ಲಿಸಲಾಗಿದೆ ಎಂದ ರಷ್ಯಾ

ತನ್ನ ಸೇನೆಗೆ ಭಾರತೀಯರ ನೇಮಕಾರಿಯನ್ನು ಕಳೆದ ಏಪ್ರಿಲ್​ನಿಂದಲೇ ನಿಲ್ಲಿಸಲಾಗಿದೆ ಎಂದು ರಷ್ಯಾ ರಾಯಭಾರಿ ಕಚೇರಿ ತಿಳಿಸಿದೆ. ರಷ್ಯಾದ ಸೇನೆಗೆ ನೇಮಕಗೊಂಡಿರುವ 91 ಭಾರತೀಯರ ಸ್ಥಿತಿಗತಿ ಕುರಿತು ಉಭಯ ಪಕ್ಷಗಳು ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ ನಂತರ ರಷ್ಯಾ ರಾಯಭಾರಿ ಕಚೇರಿಯು ರಷ್ಯಾದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ಭಾರತೀಯರ ಸ್ಥಿತಿಗತಿಯನ್ನು ವಿವರಿಸಿದೆ

ಏಪ್ರಿಲ್​ನಿಂದಲೇ ತನ್ನ ಸೇನೆಗೆ ಭಾರತೀಯರ ನೇಮಕಾತಿ ನಿಲ್ಲಿಸಲಾಗಿದೆ ಎಂದ ರಷ್ಯಾ
ರಷ್ಯಾ ಸೇನೆ
Follow us
ನಯನಾ ರಾಜೀವ್
|

Updated on: Aug 10, 2024 | 4:59 PM

ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಪ್ರಜೆಗಳನ್ನು ತನ್ನ ಸಶಸ್ತ್ರ ಪಡೆಗಳಿಗೆ ನೇಮಿಸಿಕೊಳ್ಳುವುದನ್ನು ನಿಲ್ಲಿಸಿರುವುದಾಗಿ ರಷ್ಯಾ ಶನಿವಾರ ಹೇಳಿದೆ. ಸ್ವಯಂಪ್ರೇರಿತವಾಗಿ ಮಿಲಿಟರಿ ಸೇವೆಗೆ ಒಪ್ಪಂದ ಮಾಡಿಕೊಂಡ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದೆ.

ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಸೇನೆಗೆ ಒತ್ತಾಯಪೂರ್ವಕವಾಗಿ ಸೇರಿಸಿಕೊಂಡಿತ್ತು. ರಷ್ಯಾದ ಸೇನೆಗೆ ನೇಮಕಗೊಂಡಿರುವ 91 ಭಾರತೀಯರ ಸ್ಥಿತಿಗತಿ ಕುರಿತು ಉಭಯ ಪಕ್ಷಗಳು ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ ನಂತರ ರಷ್ಯಾ ರಾಯಭಾರಿ ಕಚೇರಿಯು ರಷ್ಯಾದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ಭಾರತೀಯರ ಸ್ಥಿತಿಗತಿಯನ್ನು ವಿವರಿಸಿದೆ.

ಜೈಶಂಕರ್ ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿ, ಭಾರತವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ತನ್ನ ಎಲ್ಲಾ ನಾಗರಿಕರನ್ನು ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ರಷ್ಯಾವನ್ನು ಒತ್ತಾಯಿಸಿದೆ.

ಮತ್ತಷ್ಟು ಓದಿ: Strong Armies: ವಿಶ್ವ ಮಿಲಿಟರಿ ದೈತ್ಯರ ಪಟ್ಟಿ; ಟಾಪ್-4ನಲ್ಲಿ ಭಾರತ; ಪಾಕಿಸ್ತಾನ, ಚೀನಾದ ಸೇನಾ ಶಕ್ತಿ ಎಷ್ಟಿದೆ? ಇಲ್ಲಿದೆ ಜಿಎಫ್​ಪಿ ಮಾಹಿತಿ

ಉಕ್ರೇನ್‌ನೊಂದಿಗಿನ ಯುದ್ಧದ ಮುಂಚೂಣಿಯಲ್ಲಿ ರಷ್ಯಾದ ಘಟಕಗಳೊಂದಿಗೆ ಸೇವೆ ಸಲ್ಲಿಸುತ್ತಿದ್ದ ಎಂಟು ಭಾರತೀಯರು ಇದುವರೆಗೆ ಕೊಲ್ಲಲ್ಪಟ್ಟಿದ್ದಾರೆ. ಈ ವರ್ಷದ ಏಪ್ರಿಲ್‌ನಿಂದ, ರಷ್ಯಾದ ಒಕ್ಕೂಟದ ರಕ್ಷಣಾ ಸಚಿವಾಲಯವು ಭಾರತ ಸೇರಿದಂತೆ ಹಲವಾರು ವಿದೇಶಿ ದೇಶಗಳ ನಾಗರಿಕರನ್ನು ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಮಿಲಿಟರಿ ಸೇವೆಗೆ ಸೇರಿಸುವುದನ್ನು ನಿಲ್ಲಿಸಿದೆ ಎಂದು ರಷ್ಯಾದ ರಾಯಭಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಷ್ಯಾವು ಮಿಲಿಟರಿ ಸೇವೆಗೆ ಭಾರತೀಯ ಪ್ರಜೆಗಳನ್ನು ನೇಮಿಸಿಕೊಳ್ಳುವ ಮೋಸದ ಯೋಜನೆಗಳನ್ನು ರೂಪಿಸಿಲ್ಲ ಎಂದಿದ್ದಾರೆ. ಒಟ್ಟು 91 ಭಾರತೀಯರನ್ನು ರಷ್ಯಾದ ಸೇನೆಗೆ ನೇಮಕ ಮಾಡಿಕೊಳ್ಳಲಾಗಿದ್ದು, ಅವರಲ್ಲಿ 14 ಮಂದಿಯನ್ನು ಬಿಡುಗಡೆ ಮಾಡಲಾಗಿದೆ ಅಥವಾ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ