Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು
ಶಾರ್ಕ್​ ಮೀನು
Follow us
ನಯನಾ ರಾಜೀವ್
|

Updated on: Feb 05, 2023 | 10:05 AM

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಉತ್ತರ ಫ್ರೀಮೆಂಟಲ್​ನ ಪರ್ತ್​ ಉಪನಗರದಲ್ಲಿರುವ ಸ್ವಾನ್ ನದಿಯಲ್ಲಿ 16 ವರ್ಷ ಬಾಲಕಿ ಈಜಲು ಹೋಗಿದ್ದಳು, ಆ ಸಮಯದಲ್ಲಿ ಶಾರ್ಕ್​ ಮೀನೊಂದು ಆಕೆಯನ್ನು ಕಚ್ಚಿ ಘಾಸಿಗೊಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾವ ರೀತಿಯ ಶಾರ್ಕ್ ಬಾಲಕಿಯ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಎಬಿಸಿ ವರದಿ ಮಾಡಿದೆ. ಫ್ರಿಮೆಂಟಲ್ ಜಿಲ್ಲಾ ಪೊಲೀಸರು ನೀರಿನಿಂದ ಬಾಲಕಿಯನ್ನು ಹೊರತೆಗೆಯಲು ಪ್ರಯತ್ನಿಸಿದ್ದರು ಆದರೆ ಆಕೆ ಬದುಕುಳಿಯಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ನದಿಯಲ್ಲಿ ಜೆಟ್​ ಸ್ಕೀ ಮಾಡುತ್ತಿದ್ದಳು, ಜೆಟ್​ ಸ್ಕೀ ಸಮೀಪವೇ ಸಾಗುತ್ತಿದ್ದ ಡಾಲ್ಫಿನ್​ ಜತೆ ಈಜಲು ತೆರಳಿದ್ದಳು. ಆ ಸಮಯದಲ್ಲಿ ಶಾರ್ಕ್ ಮೀನು ದಾಳಿ ನಡೆಸಿದೆ.

ಮತ್ತಷ್ಟು ಓದಿ: Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಸ್ವಾನ್ ನದಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಯಾವುದೇ ಬೀಚ್‌ಗಳ ಬಳಿ ಹೋಗದಂತೆ ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಪಶ್ಚಿಮ ಆಸ್ಟ್ರೇಲಿಯನ್ ನೀರಿನಲ್ಲಿ 2021ರ ನವೆಂಬರ್​ನಲ್ಲಿ ಪರ್ತ್​ನ ಪೋರ್ಟ್​ ಬೀಚ್​ನಲ್ಲಿ 57 ವರ್ಷದ ವ್ಯಕ್ತಿಯನ್ನು ಬಿಳಿ ಶಾರ್ಕ್​ ಒಂದು ದಾಳಿ ನಡೆಸಿ ಹತ್ಯೆ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್