ಬ್ರಿಟನ್: ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ನಿಯಮದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ಸಂಪೂರ್ಣ ಮಾಹಿತಿ ಇಲ್ಲಿದೆ

Britain | Omicron: ಬ್ರಿಟನ್​ನಲ್ಲಿ ಪ್ರಯಾಣದ ನಿಯಮಾವಳಿಗಳನ್ನು ಸಡಿಲಿಸುವ ಸಾಧ್ಯತೆ ದಟ್ಟವಾಗಿದೆ. ಫೆಬ್ರವರಿಯಿಂದ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆ ಇದೆ.

ಬ್ರಿಟನ್: ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ನಿಯಮದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Jan 16, 2022 | 8:44 AM

ಬ್ರಿಟನ್​ನಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಇಳಿಕೆಯಾಗುತ್ತಿವೆ. ಇದೀಗ ಸರ್ಕಾರ ಪ್ರಯಾಣದ ನಿಯಮಾವಳಿಗಳಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಈ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ. ಉದ್ದೇಶಿತ ಬದಲಾವಣೆಗಳ ಪ್ರಕಾರ, ಬ್ರಿಟನ್​ಗೆ ತೆರಳುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪಡೆದಿದ್ದರೆ ಅವರು ಯಾವುದೇ ಕೊರೊನಾ ಟೆಸ್ಟ್​​ಗೆ ಒಳಪಡಬೇಕಿಲ್ಲ. ಬದಲಾಗಿ ನೇರವಾಗಿ ಅವರು ಬ್ರಿಟನ್ ಪ್ರವೇಶಿಸಿ, ಸುತ್ತಾಡಬಹುದು ಎಂದು ಟೈಮ್ಸ್ ವರದಿ ಮಾಡಿದೆ. ಈ ಕುರಿತು ಬ್ರಿಟನ್ ಆರೋಗ್ಯ ಸಚಿವ ಸಾಜಿದ್ ಜಾವಿದ್ ಕೂಡ ಒಪ್ಪಿದ್ದು, ಸಾರಿಗೆ ಸಚಿವ ಗ್ರಾಂಟ್ ಶಾಪ್ಸ್ ಜನವರಿ 26ರಂದು ಘೋಷಣೆ ಹೊರಡಿಸಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇಂಗ್ಲೆಂಡಗ್ ಪ್ರಧಾನಿ ಬೋರಿಸ್ ಜಾನ್ಸನ್ ಸದ್ಯ ಜಾರಿಯಲ್ಲಿರುವ ‘ಪ್ಲಾನ್ ಬಿ’ ನಿಯಮಾವಳಿಗಳನ್ನು ವಾಪಸ್ ಪಡೆಯಲು ಸಿದ್ಧರಾಗಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿತ್ತು. ಅಲ್ಲದೇ ವರ್ಕ್ ಫ್ರಮ್ ಹೋಮ್ ನಿಯಮಾವಳಿಗಳು ಹಾಗೂ ಕೊವಿಡ್ ಪ್ರಯಾಣ ನಿಯಮಾವಳಿಗಳಲ್ಲೂ ಬದಲಾವಣೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮಾಸ್ಕ್ ಧರಿಸುವ ನಿಯಮ ಮೊದಲಿನಂತೆಯೇ ಮುಂದುವರೆಯಲಿದೆ. ಆದಷ್ಟು ಶೀಘ್ರವಾಗಿ ಈ ಕುರಿತು ಸರ್ಕಾರ ಹೊಸ ನಿಯಮಾವಳಿ ಪ್ರಕಟಿಸಲಿದೆ. ಸದ್ಯ ಇಂಗ್ಲೆಂಡ್​ನಲ್ಲಿ ಕೊವಿಡ್ ಪ್ರಸರಣವನ್ನು ತಡೆಯಲು ಕೈಗೊಂಡ ‘ಪ್ಲಾನ್ ಬಿ’ ನಿಯಮಾವಳಿ ಜಾರಿಯಲ್ಲಿದೆ. ಇದರ ಅಡಿಯಲ್ಲಿ ಜನರು ಮನೆಯಿಂದಲೇ ಕೆಲಸ ನಿರ್ವಹಿಸುವುದು, ದೈಹಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ಪ್ರಯಾಣಕ್ಕೆ ಪಾಸ್​ಗಳನ್ನು ಒಳಗೊಳ್ಳಬೇಕಾಗಿದೆ.

ಆದರೆ ಬ್ರಿಟನ್​ನ ವೈಜ್ಞಾನಿಕ ಸಲಹಾ ಸಮಿತಿ ಸರ್ಕಾರದ ಹೊಸ ನಿರ್ಧಾರದ ಸಂಭಾವ್ಯ ಸಮಸ್ಯೆಗಳ ಕುರಿತು ಮುನ್ನೆಚ್ಚರಿಕೆ ನೀಡಿದೆ. ಬ್ರಿಟನ್​ನಲ್ಲಿ ಕಳೆದ ವಾರ ಸರಿಸುಮಾರು 2 ಲಕ್ಷ ದೈನಂದಿನ ಪ್ರಕರಣ ವರದಿಯಾಗಿದ್ದವು. ಇದೀಗ ದೈನಂದಿನ ಪ್ರಕರಣಗಳು ಸುಮಾರು 80,000ದ ಆಸುಪಾಸಿಗೆ ಇಳಿದಿವೆ.

ಇದನ್ನೂ ಓದಿ:

ನಿಕ್​ ಜೋನಸ್ ಜತೆ ಮಗು ಪಡೆಯೋ ವಿಚಾರದ ಬಗ್ಗೆ ಮೌನ ಮುರಿದ ಪ್ರಿಯಾಂಕಾ ಚೋಪ್ರಾ

‘ಹೂ ಅಂತೀಯಾ ಮಾವ..’ ಹಾಡಿಗಾಗಿ ಸಮಂತಾಗೆ 5 ಕೋಟಿ ರೂ. ಸಂಭಾವನೆ? ಅಷ್ಟು ದುಬಾರಿ ಯಾಕೆ?

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್