ಇರಾಕ್ನಲ್ಲಿ ಭಾರಿ ಅಗ್ನಿ ದುರಂತ, 100 ಮಂದಿ ಸಾವು, 150ಕ್ಕೂ ಅಧಿಕ ಜನರಿಗೆ ಗಾಯ
ಉತ್ತರ ಇರಾಕ್ನ ಹಮ್ದುನಿಯಾಹ್ ಪಟ್ಟಣದ ಈವೆಂಟ್ ಹಾಲ್ನಲ್ಲಿ ಮದುವೆ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 100 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೊಸುಲ್ ನಗರದ ಹೊರ ವಲಯದಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟಾಕಿ ಸಿಡಿಸುವಾಗ ಮದುವೆ ಮಂಟಪಕ್ಕೆ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮದುವೆ ಕಾರ್ಯಕ್ರಮದಲ್ಲಿ 700 ಮಂದಿ ಭಾಗಿಯಾಗಿದ್ದರು.

ನೆವೆಹ್ ಪ್ರಾಂತ್ಯವು ಮೊಸುಲ್‌ನ ಹೊರಗೆ ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ (205 ಮೈಲಿ) ದೂರದಲ್ಲಿದೆ. ಇರಾಕಿನ ಸುದ್ದಿ ಸಂಸ್ಥೆ ನೀನಾ ವರದಿಯ ಪ್ರಕಾರ, ಈ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ವಧು-ವರರು ಕೂಡ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆದರೆ ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಪಟಾಕಿ ಸುಟ್ಟಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇರಾಕಿನ ಸುದ್ದಿ ಸಂಸ್ಥೆ ನೀನಾ ಪೋಸ್ಟ್ ಮಾಡಿದ ಚಿತ್ರದಲ್ಲಿ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿದ್ದಾರೆ.
ಮತ್ತಷ್ಟು ಓದಿ: ಬೆಂಗಳೂರು: ಶೂ, ಚಪ್ಪಲಿ ಗೋಡೌನ್ನಲ್ಲಿ ಅಗ್ನಿ ಅವಘಡ, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ
ಇದಲ್ಲದೆ, ಈವೆಂಟ್ ಹಾಲ್‌ನ ಸುಟ್ಟ ಅವಶೇಷಗಳು ಸಾಮಾಜಿಕ ಮಾಧ್ಯಮದಲ್ಲಿ ಸ್ಥಳೀಯ ಪತ್ರಕರ್ತರು ಪೋಸ್ಟ್ ಮಾಡಿರುವ ಚಿತ್ರಗಳಲ್ಲಿ ಗೋಚರಿಸುತ್ತವೆ. ಸಂತ್ರಸ್ತರಿಗೆ ಪರಿಹಾರ ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್ ಸುಡಾನಿ ಅಧಿಕಾರಿಗಳನ್ನು ಕೇಳಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:24 am, Wed, 27 September 23