AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ತಿಂಗಳಲ್ಲಿ.. ಇಲ್ಲಿ ಕೊರೊನಾಕ್ಕೆ ಬಲಿಯಾದವರಿಗಿಂತ ಆತ್ಮಹತ್ಯೆಗೆ ಶರಣಾದವರೇ ಹೆಚ್ಚಂತೆ!

ಜಪಾನಿನಲ್ಲಿ ಕೊರೊನಾ ಸೋಂಕಿಗೆ ಆರಂಭದಿಂದ ಇಲ್ಲಿಯ ತನಕ 2,087ಜನ ಮೃತರಾಗಿದ್ದಾರೆ. ಆದರೆ, ಈ ಸಂಖ್ಯೆಯನ್ನೂ ಮೀರಿ ಕೇವಲ ಅಕ್ಟೋಬರ್ ತಿಂಗಳೊಂದರಲ್ಲೇ 2,153 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದೊಂದು ತಿಂಗಳಲ್ಲಿ.. ಇಲ್ಲಿ ಕೊರೊನಾಕ್ಕೆ ಬಲಿಯಾದವರಿಗಿಂತ ಆತ್ಮಹತ್ಯೆಗೆ ಶರಣಾದವರೇ ಹೆಚ್ಚಂತೆ!
ಮಾನಸಿಕವಾಗಿ ಸದೃಢವಾಗಿರುವ ಜಪಾನೀಯರಲ್ಲಿ ಆತ್ಮಹತ್ಯೆ ಪ್ರವೃತ್ತಿ ವಿಪರ್ಯಾಸವೇ ಸರಿ
Skanda
| Updated By: ಸಾಧು ಶ್ರೀನಾಥ್​|

Updated on: Nov 30, 2020 | 10:56 AM

Share

ಕೊರೊನಾ ಇಡೀ ಜಗತ್ತಿನ ಲೆಕ್ಕಾಚಾರವನ್ನೇ ತಲೆಕೆಳಗೆ ಮಾಡಿದೆ. ಜನರ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯನ್ನು ದುಸ್ತರಗೊಳಿಸಿದೆ. ಆರ್ಥಿಕ ಹೊಡೆತಕ್ಕೆ ತತ್ತರಿಸಿ ಹಲವು ಸಂಸ್ಥೆಗಳು ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕಿವೆ. ಬಹುತೇಕ ಎಲ್ಲಾ ರಾಷ್ಟ್ರಗಳೂ ಒಂದೊಂದು ತೆರನಾದ ಸಮಸ್ಯೆಗೆ ಸಿಲುಕಿವೆ.

ಇತ್ತೀಚೆಗೆ ಜಪಾನ್​ನಲ್ಲಿ ನಡೆದ ಅಧ್ಯಯನವೊಂದು ಕೊರೊನಾದಿಂದ ಜಪಾನ್ ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ತೆರೆದಿಟ್ಟಿದೆ. 2020ರಲ್ಲಿ ಕೊರೊನಾದಿಂದ ಸಾವಿಗೀಡಾಗಿದ್ದಕ್ಕಿಂತ ಹೆಚ್ಚು ಜಪಾನೀಯರು ಅಕ್ಟೋಬರ್ ತಿಂಗಳೊಂದರಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಕಳವಳಕಾರಿ ಮಾಹಿತಿ ಹೊರಬಿದ್ದಿದೆ.

 ಆತ್ಮಹತ್ಯೆಗೂ ಕೊರೊನಾದಿಂದಾದ ಆರ್ಥಿಕ ಸಂಕಷ್ಟಕ್ಕೂ ನೇರ ಸಂಬಂಧವಿದೆ ಜಪಾನಿನಲ್ಲಿ ಕೊರೊನಾ ಸೋಂಕಿಗೆ ಆರಂಭದಿಂದ ಇಲ್ಲಿಯ ತನಕ 2,087ಜನ ಮೃತರಾಗಿದ್ದಾರೆ. ಆದರೆ, ಈ ಸಂಖ್ಯೆಯನ್ನೂ ಮೀರಿ ಕೇವಲ ಅಕ್ಟೋಬರ್ ತಿಂಗಳೊಂದರಲ್ಲೇ 2,153 ಜನ ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ಸಂಗತಿಯೆಂದರೆ ಹೀಗೆ ಆತ್ಮಹತ್ಯೆಯಲ್ಲಿ ಧಿಡೀರ್ ಏರಿಕೆಯಾಗಿರುವುದಕ್ಕೂ ಕೊರೊನಾ ಉಂಟುಮಾಡಿರುವ ಆರ್ಥಿಕ ಸಂಕಷ್ಟಕ್ಕೂ ನೇರ ಸಂಬಂಧವಿದೆ ಎನ್ನಲಾಗುತ್ತಿದೆ.

ಕೊವಿಡ್​ನಿಂದಾಗಿ ಇತರೆ ದೇಶಗಳಲ್ಲೂ ಆರ್ಥಿಕ ಸಂಕಷ್ಟವಿದೆ; ಹಾಗಾಗಿ ಇತರೆ ದೇಶಗಳಿಗೂ ಇದು ಎಚ್ಚರಿಕೆಯ ಗಂಟೆ ಕೊವಿಡ್ ಕಾರಣದಿಂದ ಕೆಲಸ ಕಳೆದುಕೊಂಡವರು, ಆರ್ಥಿಕ ಸಂಕಷ್ಟಕ್ಕೆ ಒಳಗಾದವರು ಮಾನಸಿಕ ಸಮಸ್ಯೆಯನ್ನು ಎದುರಿಸುತ್ತಿದ್ದು ಅದರಿಂದ ಹೊರಬರಲಾರದೇ ಸಾವಿನ ಮೊರೆಹೋಗುತ್ತಿದ್ದಾರೆ ಎಂಬ ಆಂಶ ಅಧ್ಯಯನದಲ್ಲಿ ಬಯಲಾಗಿದೆ.

ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪಾನಿನ ತಜ್ಞೆ ಮಿಚಿಕೋ ಅವರು ಹೇಳುವಂತೆ ಇತರೆ ದೇಶಗಳಿಗೆ ಹೋಲಿಸಿದರೆ ಜಪಾನ್​ ಲಾಕ್​ಡೌನ್​ನಿಂದಾದ ಪರಿಣಾಮ ಅತ್ಯಂತ ಕಡಿಮೆ ಇದೆ. ಆದರೂ, ಅಲ್ಲಿಯ ಜನ ಅಧಿಕ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಆತಂಕಕಾರಿ ಬೆಳವಣಿಗೆ ಇತರೆ ದೇಶಗಳಿಗೆ ಎಚ್ಚರಿಕೆಯ ಗಂಟೆಯಾಗಿದ್ದು. ಈ ವಿಚಾರದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ.

ಸರಿಸುಮಾರು ಒಂದು ದಶಕದ ಹಿಂದೆ ಭೀಕರ ಸುನಾಮಿ ಜಪಾನ್ ದೇಶವನ್ನು ಅಪ್ಪಳಿಸಿದಾಗ ಇಡೀ ಜಗತ್ತೇ ಮರುಗಿತ್ತು. 15 ಸಾವಿರಕ್ಕೂ ಅಧಿಕ ಮಂದಿಯನ್ನು ಕಳೆದುಕೊಂಡು ಅನೇಕ ರೀತಿಯ ನಷ್ಟಗಳನ್ನು ಎದುರಿಸಿ ಜಪಾನ್ ಅತ್ಯಂತ ಕಠಿಣ ಪರಿಸ್ಥಿತಿಗೆ ತಲುಪಿದಾಗ ಮುಂದುವರಿದ ದೇಶವೊಂದು ಮುಗ್ಗರಿಸಿ ಬಿತ್ತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು.

ಮಾನಸಿಕವಾಗಿ ಸದೃಢವಾಗಿರುವ ಜಪಾನೀಯರಲ್ಲಿ ಆತ್ಮಹತ್ಯೆ ಪ್ರವೃತ್ತಿ ವಿಪರ್ಯಾಸವೇ ಸರಿ ಅದೇನೇ ಆದರೂ ಜಪಾನ್ ಮಾತ್ರ ಇಡೀ ಜಗತ್ತೇ ನಿಬ್ಬೆರಗಾಗುವಂತೆ ಪುಟಿದೆದ್ದಿತ್ತು. ಆ ಮೂಲಕ ಎಂತಹ ಕಷ್ಟವನ್ನೂ ಎದುರಿಸುವ ಸಾಮರ್ಥ್ಯವಿದೆ ಎಂದು ತೋರಿಸಿಕೊಟ್ಟಿತ್ತು. ಆದರೆ, ಜಗತ್ತಿನ ಬೇರೆ ದೇಶಗಳಿಗೆ ಹೋಲಿಸಿದರೆ ಕಡಿಮೆ ನಷ್ಟ ಅನುಭವಿಸುತ್ತಿರುವ ಜಪಾನಿನ ಜನ ಮಾನಸಿಕ ತೊಳಲಾಟಕ್ಕೆ ಸಿಲುಕಿ ಆತ್ಮಹತ್ಯೆಯ ದಾರಿ ಹಿಡಿದಿರುವುದು ವಿಪರ್ಯಾಸ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ