ಭಯೋತ್ಪಾದನೆ ಹರಡುತ್ತಾ ಸಿಂಧೂ ಜಲ ಒಪ್ಪಂದ ಉಲ್ಲಂಘಿಸಿ ಈಗ ನಮ್ಮನ್ನು ದೂಷಿಸಬೇಡಿ: ಪಾಕ್​ಗೆ ಭಾರತ ಸ್ಪಷ್ಟ ಸಂದೇಶ

ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆ ಮೂಲಕ ಸಿಂಧೂ ಜಲ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಭಾರತವು ತಜಕಿಸ್ತಾನದಲ್ಲಿ ಹೇಳಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ 1960ರ ಒಪ್ಪಂದವನ್ನು ಸ್ಥಗಿತಗೊಳಿಸಿದ ತನ್ನ ಕ್ರಮವನ್ನು ಭಾರತ ಸಮರ್ಥಿಸಿಕೊಂಡಿದೆ. ಭಯೋತ್ಪಾದನೆ ಹರಡುತ್ತಾ ಸಿಂಧೂ ಜಲ ಒಪ್ಪಂದ ಉಲ್ಲಂಘಿಸಿ ಈಗ ನಮ್ಮನ್ನು ದೂಷಿಸುವುದು ಸರಿಯಲ್ಲ ಎಂದು ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ. ದುಶಾಂಬೆಯಲ್ಲಿ ನಡೆದ ಹಿಮನದಿಗಳ ಸಂರಕ್ಷಣಾ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕೀತರ್ತ ವರ್ಧನ್ ಸಿಂಗ್ ಭಾಗವಹಿಸಿದ್ದರು. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ವಿಶ್ವಸಂಸ್ಥೆ ನೇತೃತ್ವದ ಜಾಗತಿಕ ವೇದಿಕೆಯಲ್ಲಿ ಭಾರತವು ನೀರನ್ನು ಅಸ್ತ್ರವನ್ನಾಗಿಸುತ್ತಿದೆ ಎಂದು ಆರೋಪಿಸಿದ ನಂತರ ಈ ಹೇಳಿಕೆ ಹೊರಬಂದಿದೆ.

ಭಯೋತ್ಪಾದನೆ ಹರಡುತ್ತಾ ಸಿಂಧೂ ಜಲ ಒಪ್ಪಂದ ಉಲ್ಲಂಘಿಸಿ ಈಗ ನಮ್ಮನ್ನು ದೂಷಿಸಬೇಡಿ: ಪಾಕ್​ಗೆ ಭಾರತ ಸ್ಪಷ್ಟ ಸಂದೇಶ
ಸಿಂಧೂ ನದಿ
Image Credit source: Worlds Atlas

Updated on: Jun 01, 2025 | 8:45 AM

ತಜಕಿಸ್ತಾನ, ಜೂನ್ 1: ಪಾಕಿಸ್ತಾನ(Pakistan)ವು ಗಡಿಯಾಚೆಗಿನ ಭಯೋತ್ಪಾದನೆ ಮೂಲಕ ಸಿಂಧೂ ಜಲ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಭಾರತವು ತಜಕಿಸ್ತಾನದಲ್ಲಿ ಹೇಳಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ 1960ರ ಒಪ್ಪಂದವನ್ನು ಸ್ಥಗಿತಗೊಳಿಸಿದ ತನ್ನ ಕ್ರಮವನ್ನು ಭಾರತ ಸಮರ್ಥಿಸಿಕೊಂಡಿದೆ. ಭಯೋತ್ಪಾದನೆ ಹರಡುತ್ತಾ ಸಿಂಧೂ ಜಲ ಒಪ್ಪಂದ ಉಲ್ಲಂಘಿಸಿ ಈಗ ನಮ್ಮನ್ನು ದೂಷಿಸುವುದು ಸರಿಯಲ್ಲ ಎಂದು ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ.

ದುಶಾಂಬೆಯಲ್ಲಿ ನಡೆದ ಹಿಮನದಿಗಳ ಸಂರಕ್ಷಣಾ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕೀತರ್ತ ವರ್ಧನ್ ಸಿಂಗ್ ಭಾಗವಹಿಸಿದ್ದರು. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ವಿಶ್ವಸಂಸ್ಥೆ ನೇತೃತ್ವದ ಜಾಗತಿಕ ವೇದಿಕೆಯಲ್ಲಿ ಭಾರತವು ನೀರನ್ನು ಅಸ್ತ್ರವನ್ನಾಗಿಸುತ್ತಿದೆ ಎಂದು ಆರೋಪಿಸಿದ ನಂತರ ಈ ಹೇಳಿಕೆ ಹೊರಬಂದಿದೆ.

ಪಾಕಿಸ್ತಾನವು ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುವ ಮತ್ತು ವೇದಿಕೆಯ ವ್ಯಾಪ್ತಿಗೆ ಬರದ ವಿಷಯಗಳ ಬಗ್ಗೆ ಅನಗತ್ಯ ಉಲ್ಲೇಖಗಳನ್ನು ತರುವ ಪ್ರಯತ್ನವನ್ನು ನಾವು ನೋಡಿದ್ದೇವೆ. ಅಂತಹ ಪ್ರಯತ್ನವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಸೈಬರ್ ಅಪರಾಧಿಗಳ ವಿರುದ್ಧ 19 ಕಡೆ ಸಿಬಿಐ ಕಾರ್ಯಾಚರಣೆ
ಬುರ್ಖಾ ಧರಿಸಿ ಸೊಸೆ ಮನೆಗೆ ನುಗ್ಗಿದ ಮಾವ, ಮುಂದೇನಾಯ್ತು?
ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ನಿರ್ಬಂಧದ ನಡುವೆ ಇಲ್ಲಿದೆ ಗುಡ್ ನ್ಯೂಸ್

ಒಪ್ಪಂದವನ್ನು ಉಲ್ಲಂಘಿಸುತ್ತಿರುವ ಪಾಕಿಸ್ತಾನವು, ಒಪ್ಪಂದದ ಉಲ್ಲಂಘನೆಯ ಹೊಣೆಯನ್ನು ಭಾರತದ ಮೇಲೆ ಹೊರಿಸುವುದನ್ನು ನಿಲ್ಲಿಸಬೇಕು, ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದಾಗಿನಿಂದ ಪರಿಸ್ಥಿತಿಯಲ್ಲಿ ಮೂಲಭೂತ ಬದಲಾವಣೆಗಳಾಗಿವೆ ಎಂಬುದು ನಿರಾಕರಿಸಲಾಗದ ಸತ್ಯ, ಇದು ಒಪ್ಪಂದದ ನಿಯಮಗಳನ್ನು ಮರುಪರಿಶೀಲಿಸುವ ಅಗತ್ಯವನ್ನು ಒತ್ತಿ ಹೇಳುತ್ತದೆ ಎಂದರು.ಈ ಬದಲಾವಣೆಗಳಲ್ಲಿ ತಾಂತ್ರಿಕ ಪ್ರಗತಿ, ಜನಸಂಖ್ಯಾ ಬೆಳವಣಿಗೆ, ಹವಾಮಾನ ಬದಲಾವಣೆ ಮತ್ತು ನಡೆಯುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆ ಸೇರಿವೆ ಎಂದು ಅವರು ಹೇಳಿದರು.

ಆದಾಗ್ಯೂ, ಪಾಕಿಸ್ತಾನದಿಂದ ನಡೆಯುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯು ಒಪ್ಪಂದವನ್ನು ಅದರ ನಿಬಂಧನೆಗಳ ಪ್ರಕಾರ ಬಳಸುವ ಭಾರತದ ಸಾಮರ್ಥ್ಯಕ್ಕೆ ಅಡ್ಡಿಪಡಿಸುತ್ತದೆ. ಒಪ್ಪಂದವನ್ನು ಉಲ್ಲಂಘಿಸುತ್ತಿರುವ ಪಾಕಿಸ್ತಾನ, ಅದಕ್ಕೆ ಭಾರತವನ್ನು ದೂಷಿಸುವುದನ್ನು ನಿಲ್ಲಿಸಬೇಕು ಎಂದು ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಓದಿ: ಪಿಒಕೆಯನ್ನು ವಾಪಾಸ್ ಕೊಟ್ಟ ನಂತರವೇ ಮುಂದಿನ ಮಾತುಕತೆ; ಪಾಕಿಸ್ತಾನದ ಪ್ರಧಾನಿಗೆ ಭಾರತ ಪ್ರತಿಕ್ರಿಯೆ

ನೀರಿನ ವಿಚಾರದಲ್ಲಿ ರಾಜಿ ಇಲ್ಲ
ನೀರಿನ ವಿಚಾರದಲ್ಲಿ ಪಾಕಿಸ್ತಾನ(Pakistan) ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಏಕೆಂದರೆ ಇದು 24 ಕೋಟಿ ಜನರಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಸಿಂಧೂ ನದಿ ನೀರು ವಿಚಾರದಲ್ಲಿ ಭಾರತದ ನಿರ್ಧಾರವನ್ನು ಉಲ್ಲೇಖಿಸಿದ ಮುನೀರ್, ಪಾಕಿಸ್ತಾನದ ಜನರಿಗೆ ಈ ನೀರಿನ ಹಕ್ಕಿದೆ ಎಂದು ಹೇಳಿದರು.

ಇಂತಹ ಪರಿಸ್ಥಿತಿಯಲ್ಲಿ, 24 ಕೋಟಿ ಪಾಕಿಸ್ತಾನಿಗಳ ಈ ಮೂಲಭೂತ ಹಕ್ಕಿನ ಮೇಲೆ ಪಾಕಿಸ್ತಾನ ಸೇನೆ ಯಾವುದೇ ರಾಜಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ.ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನದೊಂದಿಗಿನ ದಶಕಗಳಷ್ಟು ಹಳೆಯದಾದ ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸುವ ಬಗ್ಗೆ ಭಾರತ ಮಾತನಾಡಿದೆ.

ಈ ನಿರ್ಧಾರಕ್ಕೆ ಪಾಕಿಸ್ತಾನದಿಂದ ನಿರಂತರ ಬಲವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತ ನೀರು ಸರಬರಾಜು ನಿಲ್ಲಿಸಿದರೆ ಅದನ್ನು ಯುದ್ಧ ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಮುನೀರ್ ಅವರಿಗೂ ಮೊದಲು ಪಾಕಿಸ್ತಾನ ಸರ್ಕಾರ ಹೇಳಿತ್ತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ