AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ ಮೇಲಿನ ಯುದ್ಧಕ್ಕೆ ಭಾರತ-ಚೀನಾ ಮುಖ್ಯ ಹೂಡಿಕೆದಾರರು; ವಿಶ್ವಸಂಸ್ಥೆಯಲ್ಲಿ ಮತ್ತೆ ಹಳೇ ರಾಗ ಹಾಡಿದ ಟ್ರಂಪ್

ಉಕ್ರೇನ್ ಹಾಗೂ ರಷ್ಯಾದ ನಡುವಿನ ಯುದ್ಧಕ್ಕೆ ರಷ್ಯಾಗೆ ಭಾರತ ಹಾಗೂ ಚೀನಾ ಪರೋಕ್ಷವಾಗಿ ಆರ್ಥಿಕ ಸಹಾಯ ಮಾಡುತ್ತಿದೆ ಎಂದು ಇಂದು ವಿಶ್ವಸಂಸ್ಥೆಯಲ್ಲಿನ ತಮ್ಮ ಭಾಷಣದಲ್ಲಿ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಆರೋಪಿಸಿದ್ದಾರೆ. ಹಾಗೇ, ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ರಷ್ಯಾದ ಇಂಧನ ಮತ್ತು ಸಂಬಂಧಿತ ಉತ್ಪನ್ನಗಳ ಆಮದನ್ನು ಕಡಿತಗೊಳಿಸಲು ವಿಫಲವಾದ ನ್ಯಾಟೋ ದೇಶಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ.

ಉಕ್ರೇನ್​​ ಮೇಲಿನ ಯುದ್ಧಕ್ಕೆ ಭಾರತ-ಚೀನಾ ಮುಖ್ಯ ಹೂಡಿಕೆದಾರರು; ವಿಶ್ವಸಂಸ್ಥೆಯಲ್ಲಿ ಮತ್ತೆ ಹಳೇ ರಾಗ ಹಾಡಿದ ಟ್ರಂಪ್
Donald Trump In Unga
ಸುಷ್ಮಾ ಚಕ್ರೆ
|

Updated on: Sep 23, 2025 | 10:37 PM

Share

ನ್ಯೂಯಾರ್ಕ್, ಸೆಪ್ಟೆಂಬರ್ 23: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು (UNGA) ಉದ್ದೇಶಿಸಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತದ ಮೇಲೆ ಮತ್ತೊಮ್ಮೆ ಗೂಬೆ ಕೂರಿಸಿದ್ದಾರೆ. ರಷ್ಯಾದ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್ ಯುದ್ಧಕ್ಕೆ ಭಾರತ ಮತ್ತು ಚೀನಾ ಭಾರೀ ಹಣಕಾಸು ಹೂಡಿಕೆ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಅಮೆರಿಕ ಮತ್ತು ಭಾರತದ ನಡುವಿನ ಹಳಸಿದ ಸಂಬಂಧ ಮತ್ತೆ ಹಳೇ ಟ್ರ್ಯಾಕ್​ಗೆ ಹಿಂತಿರುಗುವ ಲಕ್ಷಣಗಳು ಕಂಡುಬಂದಿತ್ತು. ಅದರ ನಡುವೆ ಟ್ರಂಪ್ ಮತ್ತೊಮ್ಮೆ ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು (UNGA) ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಅಧಿಕಾರಾವಧಿಯ ಯಶಸ್ಸನ್ನು ಎತ್ತಿ ತೋರಿಸುವ ಮೂಲಕ ಭಾಷಣ ಪ್ರಾರಂಭಿಸಿದರು. ಹಾಗೇ ವಿಶ್ವಸಂಸ್ಥೆಯ ಪರಿಣಾಮಕಾರಿತ್ವವನ್ನು ಪ್ರಶ್ನಿಸಿದರು. ಅವರು ಅಕ್ರಮ ವಲಸಿಗರಿಗೆ ಕಠಿಣ ಎಚ್ಚರಿಕೆಯನ್ನು ಸಹ ನೀಡಿದರು. ಬಳಿಕ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧವನ್ನು ಪ್ರಸ್ತಾಪಿಸಿದ ಟ್ರಂಪ್, “NATO ರಾಷ್ಟ್ರಗಳು ಇನ್ನೂ ರಷ್ಯಾದ ಇಂಧನವನ್ನು ಖರೀದಿಸುತ್ತಿವೆ ಎಂದು ಎರಡು ವಾರಗಳ ಹಿಂದಷ್ಟೇ ತಿಳಿದುಕೊಂಡೆ, ಅದನ್ನು ಕ್ಷಮಿಸಲಾಗದು” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಭಾರತೀಯ ಉದ್ಯೋಗಿಗಳಿಗೆ ಟ್ರಂಪ್ ಶಾಕ್; 1 ಲಕ್ಷ ಡಾಲರ್ ಪಾವತಿಸದಿದ್ದರೆ ನಾಳೆಯಿಂದ ಅಮೆರಿಕಕ್ಕೆ ಪ್ರವೇಶವಿಲ್ಲ

“ರಷ್ಯಾದ ತೈಲವನ್ನು ಖರೀದಿಸುವುದನ್ನು ಮುಂದುವರಿಸುವ ಮೂಲಕ ಚೀನಾ ಮತ್ತು ಭಾರತ ಉಕ್ರೇನ್ ಮೇಲಿನ ಯುದ್ಧಕ್ಕೆ ಪ್ರಾಥಮಿಕ ಹಣಕಾಸು ಒದಗಿಸುತ್ತಿವೆ. ಆದರೆ ಕ್ಷಮಿಸಲಾಗದ ವಿಷಯವೆಂದರೆ NATO ರಾಷ್ಟ್ರಗಳು ಸಹ ರಷ್ಯಾದ ಇಂಧನ ಮತ್ತು ರಷ್ಯಾದ ಉತ್ಪನ್ನಗಳನ್ನು ಇನ್ನೂ ಖರೀದಿಸುತ್ತಿವೆ. ನನಗೆ ಸುಮಾರು ಎರಡು ವಾರಗಳ ಹಿಂದೆ ಈ ವಿಷಯ ತಿಳಿಯಿತು. ಇದು ನನಗೆ ಬೇಸರ ತಂದಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

ಒಂದುವೇಳೆ ಯುದ್ಧವನ್ನು ಕೊನೆಗೊಳಿಸಲು ರಷ್ಯಾ ಮಾತುಕತೆ ನಡೆಸಲು ಇಚ್ಛಿಸದಿದ್ದರೆ ರಷ್ಯಾದ ಮೇಲೆ ಭಾರೀ ಪ್ರಮಾಣದ ಹೊಸ ಸುಂಕಗಳನ್ನು ವಿಧಿಸಲು ಅಮೆರಿಕ ಸಿದ್ಧವಾಗಿದೆ ಎಂದು ಟ್ರಂಪ್ ಹೇಳುವ ಮೂಲಕ ರಷ್ಯಾಗೆ ಸುಂಕದ ಬೆದರಿಕೆಯೊಡ್ಡಿದ್ದಾರೆ.

ಇದನ್ನೂ ಓದಿ: ಟ್ರಂಪ್​ಗಾಗಿ ಫ್ರೆಂಚ್ ಅಧ್ಯಕ್ಷರನ್ನೇ ನಡುರಸ್ತೆಯಲ್ಲಿ ನಿಲ್ಲಿಸಿದ ನ್ಯೂಯಾರ್ಕ್​ ಪೊಲೀಸರು

ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಬಹುದೆಂದು ಟ್ರಂಪ್ ಒತ್ತಾಯಿಸಿದರೂ, ಇತ್ತೀಚಿನ ವಾರಗಳಲ್ಲಿ ರಷ್ಯಾ ಉಕ್ರೇನ್ ಮೇಲೆ ತನ್ನ ದಾಳಿಯನ್ನು ಮುಂದುವರೆಸಿದೆ. ಹಾಗೇ NATO ಸದಸ್ಯರಾದ ಪೋಲೆಂಡ್, ಎಸ್ಟೋನಿಯಾ ಮತ್ತು ರೊಮೇನಿಯಾದಲ್ಲಿ ಡ್ರೋನ್ ಅಥವಾ ವಾಯು ಆಕ್ರಮಣಗಳನ್ನು ನಡೆಸಿದೆ.

ಹಾಗೇ, ಮತ್ತೊಮ್ಮೆ ತಾನೇ ಭಾರತ–ಪಾಕಿಸ್ತಾನದ ನಡುವಿನ ಯುದ್ಧ ನಿಲ್ಲಿಸಿದ್ದು ಎಂದು ಟ್ರಂಪ್ ಹೇಳಿದ್ದಾರೆ. ಈಗಾಗಲೇ ಲೆಕ್ಕವಿಲ್ಲದಷ್ಟು ಬಾರಿ ಅವರು ಈ ಹೇಳಿಕೆ ನೀಡಿದ್ದಾರೆ. ಅಷ್ಟೇ ಬಾರಿ ಭಾರತವೂ ಆ ಹೇಳಿಕೆಯನ್ನು ನಿರಾಕರಿಸಿದೆ. ಆದರೂ ಮತ್ತೆ ಅದೇ ರಾಗ ಹಾಡಿರುವ ಟ್ರಂಪ್ ತಾನು ಇದೇ ರೀತಿ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿಯೇ ನಾನು ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್