AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಪರಸ್ಪರ ನಂಬಿಕೆ ಮರುಸ್ಥಾಪಿಸಲು ಒಪ್ಪಿಗೆ; ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಭೇಟಿ

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವರನ್ನು ಭೇಟಿಯಾಗುತ್ತಿದ್ದಂತೆ ಭಾರತ-ಚೀನಾ ಪರಸ್ಪರ ನಂಬಿಕೆಯನ್ನು ಪುನರ್​ ನಿರ್ಮಿಸಲು ಒಪ್ಪಿಗೆ ನೀಡಿವೆ. ಜಗತ್ತಿನ ಎರಡು ದೊಡ್ಡ ರಾಷ್ಟ್ರಗಳಾದ ಭಾರತ ಮತ್ತು ಚೀನಾ ನಡುವಿನ ಸಾಮರಸ್ಯದ ಸಂಬಂಧಗಳು ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಿ ಹೇಳಿದ್ದಾರೆ.

ಗಡಿಯಲ್ಲಿ ಪರಸ್ಪರ ನಂಬಿಕೆ ಮರುಸ್ಥಾಪಿಸಲು ಒಪ್ಪಿಗೆ; ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಭೇಟಿ
ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಭೇಟಿ
ಸುಷ್ಮಾ ಚಕ್ರೆ
|

Updated on: Nov 20, 2024 | 10:39 PM

Share

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವ ಡೋಂಗ್ ಜುನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ “ಭಾರತ-ಚೀನಾ ಗಡಿಯಲ್ಲಿ ಗಾಲ್ವಾನ್ ಮಾದರಿಯ ಘರ್ಷಣೆಯ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು” ಎಂದು ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಚೀನಾ ಇಂದು “ಪರಸ್ಪರ ನಂಬಿಕೆಯನ್ನು ಪುನರ್ನಿರ್ಮಿಸಲು ಮಾರ್ಗಸೂಚಿ”ಯತ್ತ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡಿವೆ.

ಪೂರ್ವ ಲಡಾಖ್‌ನ ಡೆಮ್‌ಚೋಕ್ ಮತ್ತು ಡೆಪ್ಸಾಂಗ್‌ನ ಉಳಿದ ಎರಡು ಮುಖಾಮುಖಿ ಪಾಯಿಂಟ್‌ಗಳಿಂದ ಭಾರತೀಯ ಮತ್ತು ಚೀನಾ ಸೇನೆಗಳನ್ನು ಹಿಂಪಡೆದ ಕೆಲವೇ ವಾರಗಳ ನಂತರ ಲಾವೋಸ್‌ನ ರಾಜಧಾನಿ ವಿಯೆಂಟಿಯಾನ್‌ನಲ್ಲಿ ಉಭಯ ದೇಶಗಳ ನಾಯಕರು ಇಂದು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಗಯಾನಾದಲ್ಲಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ

ವಿಯೆಂಟಿಯಾನ್‌ನಲ್ಲಿ ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರೊಂದಿಗೆ ಸಭೆಯನ್ನು ನಡೆಸಿದ್ದೇನೆ. ಪರಸ್ಪರ ನಂಬಿಕೆ ಮತ್ತು ತಿಳುವಳಿಕೆಯನ್ನು ಪುನರ್ನಿರ್ಮಿಸಲು ಮಾರ್ಗಸೂಚಿಯ ಕಡೆಗೆ ಒಟ್ಟಾಗಿ ಕೆಲಸ ಮಾಡಲು ನಾವು ಒಪ್ಪಿಕೊಂಡಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಇತ್ತೀಚಿನ ಒಪ್ಪಂದಗಳು ಮತ್ತು ಸಭೆಯ ನಂತರ ಇಬ್ಬರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮೊದಲ ಸಭೆ ಇದಾಗಿದೆ. ವಿಶ್ವದ ಎರಡು ದೊಡ್ಡ ರಾಷ್ಟ್ರಗಳಾದ ಭಾರತ ಮತ್ತು ಚೀನಾ ನಡುವಿನ ಸೌಹಾರ್ದಯುತ ಸಂಬಂಧಗಳು ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ಧನಾತ್ಮಕ ಪರಿಣಾಮಗಳನ್ನು ಬೀರುತ್ತವೆ ಎಂಬ ಅಂಶವನ್ನು ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ