AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

India-Pakistan Ceasefire: ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ' ಎಂದು ಹೇಳಿದ್ದಾರೆ.

ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ
Us President Donald Trump
ಸುಷ್ಮಾ ಚಕ್ರೆ
|

Updated on:May 10, 2025 | 6:04 PM

Share

ನವದೆಹಲಿ, ಮೇ 10: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ವೈಮಾನಿಕ ದಾಳಿಯ (Airstrike) ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆಗೆ ಕೆಲವು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದವು. ಅದರಲ್ಲಿ ಅಮೆರಿಕ (United States) ಕೂಡ ಒಂದು. ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಮಾತುಕತೆಗಳಿಂದಾಗಿ ಎರಡೂ ದೇಶಗಳು ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎನ್ನಲಾಗಿದೆ.

ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿದೆ. ದೀರ್ಘ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದಿದ್ದಾರೆ. ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ” ತೋರಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ. ದಿನಗಟ್ಟಲೆ ಉಲ್ಬಣಗೊಳ್ಳುತ್ತಿದ್ದ ಮಿಲಿಟರಿ ಸಂಘರ್ಷದ ನಂತರ ಯುದ್ಧವನ್ನು ನಿಲ್ಲಿಸಿ ಶಾಂತತೆಯನ್ನು ಪುನಃಸ್ಥಾಪಿಸುವ ಎರಡೂ ದೇಶಗಳ ನಿರ್ಧಾರವನ್ನು ಅವರು ಶ್ಲಾಘಿಸಿದರು.

ಇದನ್ನೂ ಓದಿ
Image
ಸೂಕ್ಷ್ಮ ಸಂದರ್ಭದಲ್ಲಿ ಏನೋನೋ ಮಾತನಾಡಿದ್ರೆ ಏನೇನು ಅವಾಂತರವಾಗುತ್ತೆ ನೋಡಿ
Image
ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಜತೆ ಮಾತುಕತೆ
Image
ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ
Image
ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ

ಇದನ್ನೂ ಓದಿ: ಟಿವಿ ಕಾರ್ಯಕ್ರಮದಲ್ಲಿ ವಾಯುದಾಳಿಯ ಸೈರನ್‌ ಶಬ್ದ ಬಳಸಬೇಡಿ; ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ

ಕಳೆದ ಮೂರು ದಿನಗಳಿಂದ ಗುಂಡಿನ ಚಕಮಕಿ ನಡೆಸುತ್ತಿರುವ ಯುದ್ಧ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ ಎಂದು ಅಮೆರಿಕ ಹೇಳಿದೆ. ಈ ಹಿಂದೆ ಭಾರತ ಮತ್ತು ಪಾಕಿಸ್ತಾನದ ಯುದ್ಧದ ಸಾಧ್ಯತೆ ಬಗ್ಗೆ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅದು ನಮಗೆ ಸಂಬಂಧವಿಲ್ಲದ ವಿಷಯ, ಆ ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ಅವರು ಕೂಡ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಟ್ವೀಟ್ ಮಾಡಿದ್ದು, “ಕಳೆದ 48 ಗಂಟೆಗಳಲ್ಲಿ ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಶಾಂತಿಯ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:48 pm, Sat, 10 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ