ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

ತಾಲಿಬಾನ್ ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ನೆಲೆ ಒದಗಿಸುವುದಿಲ್ಲ ಎಂಬುದನ್ನು ಖಚಿತ ಪಡಿಸಬೇಕು. ತಾಲಿಬಾನ್ ತನ್ನ ನೆಲವನ್ನು ಭಯೋತ್ಪಾದಕರ ಸ್ವರ್ಗವನ್ನಾಗಿ ಮಾಡಬಾರದು ಎಂದು ಅಮೆರಿಕಾ ಮತ್ತು ಭಾರತ ಒತ್ತಾಯಿಸಿವೆ.

ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ
ನರೇಂದ್ರ ಮೋದಿ - ಜೋ ಬೈಡೆನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 29, 2021 | 1:24 PM

ನವದೆಹಲಿ: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣ ಅಥವಾ ಸ್ವರ್ಗವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿದೆ. ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ ದಾಳಿಗಳನ್ನು ಯೋಜಿಸಲು ಅಥವಾ ಹಣಕಾಸು ಒದಗಿಸಲು ಎಂದಿಗೂ ಬಳಸಬಾರದು ಎಂದು ತಾಲಿಬಾನ್​ಗೆ ಭಾರತ ಹಾಗೂ ಅಮೆರಿಕ ಕರೆ ನೀಡಿದೆ.

ಕಾನೂನು ಜಾರಿ, ಮಾಹಿತಿ ಹಂಚಿಕೆ, ಉತ್ತಮ ಅಭ್ಯಾಸಗಳ ವಿನಿಮಯ ಮತ್ತು ಭಯೋತ್ಪಾದನಾ ನಿಗ್ರಹ ಸವಾಲುಗಳ ಮೇಲೆ ಕಾರ್ಯತಂತ್ರದ ಒಮ್ಮುಖದ ಮೇಲೆ ಸಹಕಾರವನ್ನು ಇನ್ನಷ್ಟು ವಿಸ್ತರಿಸಲು ಅಮೆರಿಕ ಮತ್ತು ಭಾರತ ಮುಂದಾಗಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಜನರು ಮತ್ತು ಸರ್ಕಾರದೊಂದಿಗೆ ಒಟ್ಟಾಗಿ ನಿಲ್ಲಲು ನಾವು ಬದ್ಧರಿದ್ದೇವೆ ಎಂದು ಅಮೆರಿಕ ತಿಳಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಲ್-ಖೈದಾ, ಐಸಿಸ್, ಲಷ್ಕರ್-ಎ-ತೊಯ್ಬಾ (ಎಲ್​ಇಟಿ) ಮತ್ತು ಜೈಷ್-ಎ-ಮೊಹಮ್ಮದ್ (ಜೆಮ್) ಸೇರಿದಂತೆ ಎಲ್ಲಾ ಭಯೋತ್ಪಾದನಾ ಗುಂಪುಗಳ ವಿರುದ್ಧ ಸಂಘಟಿತ ಕ್ರಮಕ್ಕೆ ಕರೆ ನೀಡಲಾಗಿದೆ.

ತಾಲಿಬಾನ್ ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ನೆಲೆ ಒದಗಿಸುವುದಿಲ್ಲ ಎಂಬುದನ್ನು ಖಚಿತ ಪಡಿಸಬೇಕು ಎಂದು ಅಮೆರಿಕಾ ಮತ್ತು ಭಾರತ ಒತ್ತಾಯಿಸಿವೆ. ಪ್ರಮುಖವಾಗಿ ತಾಲಿಬಾನ್ ತನ್ನ ನೆಲವನ್ನು ಭಯೋತ್ಪಾದಕರ ಸ್ವರ್ಗವನ್ನಾಗಿ ಮಾಡಬಾರದು, ಅಲ್ಲಿಂದ ಬೇರೆ ಯಾವುದೇ ದೇಶದ ಮೇಲಿನ ದಾಳಿಗೆ ವೇದಿಕೆ ಕಲ್ಪಿಸಬಾರದು. ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸು ಮತ್ತು ಅಕ್ರಮ ಶಸ್ತ್ರಾಸ್ತ್ರ ಒದಗಿಸಬಾರದು ಎಂದು ಭಾರತ ಮತ್ತು ಅಮೆರಿಕ ಜಂಟಿಯಾಗಿ ಒತ್ತಾಯಿಸಿವೆ.

ಭಾರತ ಮತ್ತು ಅಮೆರಿಕ 2017ರ ವಿಶ್ವಸಂಸ್ಥೆಯ ನಿರ್ಣಯದಂತೆ ಅಂತಾರಾಷ್ಟ್ರೀಯ ಪ್ರವಾಸಿ ಭಯೋತ್ಪಾದನೆಯನ್ನು ಮಟ್ಟ ಹಾಕುವ ಕಾರ್ಯತಂತ್ರಗಳ ಜಾರಿಗೆ ನಿರ್ಣಯ ಕೈಗೊಳ್ಳಲಾಗಿದೆ. ಇನ್ನು, ತಾಲಿಬಾನ್ ಸರ್ಕಾರವಿರುವ ಅಫ್ಘಾನಿಸ್ತಾನಕ್ಕೆ ಅಮೆರಿಕ ಸುಮಾರು 144 ಮಿಲಿಯನ್ ಅಮೆರಿಕನ್ ಡಾಲರ್​ ನೀಡಲು ನಿರ್ಧರಿಸಿದೆ. ಮಾನವೀಯತೆಯ ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗಿದೆ. ಅಮೆರಿಕ ನೀಡುವ ಪರಿಹಾರವು ವಿವಿಧೆಡೆ ನಿರಾಶ್ರಿತರಾಗಿರುವ ಅಫ್ಘಾನ್ ಜನರಿಗೆ ಸಹಾಯ ಮಾಡಲಿದೆ. ಇದುವರೆಗೆ ಸುಮಾರು 474 ಮಿಲಿಯನ್ ಅಮೆರಿಕನ್ ಡಾಲರ್ ಅನ್ನು ಅಮೆರಿಕ ಅಫ್ಘಾನಿಸ್ತಾನಕ್ಕೆ ನೆರವು ನೀಡುವುದಾಗಿ ಘೋಷಿಸಿದೆ.

ಈ ಹಿಂದೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಪಾಕಿಸ್ತಾನ ಹಾಗೂ ಚೀನಾ ವಿರುದ್ಧ ಪರೋಕ್ಷವಾಗಿ ಗುಡುಗಿದ್ದರು. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸುತ್ತಿದ್ದಾರೆ. ಆದರೆ, ಭಯೋತ್ಪಾದನೆ ಮುಂದೊಂದು ದಿನ ಅವರಿಗೂ ಕಂಟಕವಾಗುತ್ತದೆ ಎಂಬುದನ್ನು ಅವರು ಮರೆಯಬಾರದು. ಅಫ್ಘಾನಿಸ್ತಾನದ ಭೂಮಿಯನ್ನು ಭಯೋತ್ಪಾದನೆಗೆ ಬಳಸಬಾರದು ಎಂದು ನಾವು ಎಚ್ಚರಿಕೆ ನೀಡುತ್ತಿದ್ದೇನೆ. ಭಯೋತ್ಪಾದನೆ ರಾಜಕೀಯವಾಗಿ ಬಳಕೆಯಾಗುತ್ತಿದೆ ಎಂದು ಹೇಳುವ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: T20 World Cup: ಅಫ್ಘಾನಿಸ್ತಾನ ತಾಲಿಬಾನ್ ವಶ; ಕ್ರಿಕೆಟ್ ಮೇಲಾದ ಪರಿಣಾಮವೇನು? ನಾಯಕ ನಬಿ ಹೇಳಿದಿಷ್ಟು

ಅಫ್ಘಾನ್​ ಪರಿಸ್ಥಿತಿ ಚರ್ಚಿಸಲು ಎನ್​ಎಸ್​ಎಗಳ ಸಭೆ ಕರೆದ ಭಾರತ; ದೆಹಲಿಗೆ ಭೇಟಿ ನೀಡಲಿರುವ ಪಾಕಿಸ್ತಾನದ ಭದ್ರತಾ ಸಲಹೆಗಾರ

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ