ಅಮೆರಿಕ: ಖ್ಯಾತ ಭರತನಾಟ್ಯ ಕಲಾವಿದ ಅಮರನಾಥ್​ ಘೋಷ್​ ಅವರನ್ನು ಗುಂಡಿಕ್ಕಿ ಹತ್ಯೆ

ಅಮೆರಿಕದಲ್ಲಿ ಕೋಲ್ಕತ್ತಾ ಮೂಲದ ಖ್ಯಾತ ಭರತನಾಟ್ಯ ಕಲಾವಿದ ಅಮರನಾಥ್​ ಘೋಷ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮರನಾಥ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ನೇಹಿತರು ಮನವಿ ಮಾಡಿದ್ದಾರೆ.

ಅಮೆರಿಕ: ಖ್ಯಾತ ಭರತನಾಟ್ಯ ಕಲಾವಿದ ಅಮರನಾಥ್​ ಘೋಷ್​ ಅವರನ್ನು ಗುಂಡಿಕ್ಕಿ ಹತ್ಯೆ
ಅಮರನಾಥ್ ಘೋಷ್​Image Credit source: Mint
Follow us
ನಯನಾ ರಾಜೀವ್
|

Updated on: Mar 03, 2024 | 8:37 AM

ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯ ಕಲಾವಿದ ಅಮರನಾಥ್​ ಘೋಷ್(Amarnath Ghosh) ಅವರನ್ನು ಅಮೆರಿಕದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕಿರುತೆರೆ ನಟಿ ದೇವೋಲೀನಾ ಭಟ್ಟಾಚಾರ್ಜಿ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ನೀಡಿದ್ದಾರೆ. ಅಮರನಾಥ್ ಅವರ ಸ್ನೇಹಿತರಾಗಿದ್ದರು. ಅಮರನಾಥ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವೋಲೀನಾ ಮನವಿ ಮಾಡಿದ್ದಾರೆ.

ದೇವೋಲೀನಾ ಭಟ್ಟಾಚಾರ್ಜಿ ಅವರು ಅಮರನಾಥ್ ಅವರ ಸಾವಿಗೆ ಸಂಬಂಧಿಸಿದ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಮಂಗಳವಾರ (ಫೆಬ್ರವರಿ 27) ಸಂಜೆ, ಮಿಸೌರಿಯ ಸೇಂಟ್ ಲೂಯಿಸ್‌ನಲ್ಲಿ ನನ್ನ ಸ್ನೇಹಿತ ಅಮರನಾಥ್ ಘೋಷ್ ಅವರನ್ನು ಕೊಲೆ ಮಾಡಲಾಗಿದೆ.

ಅಮರನಾಥ್​ರ ತಂದೆ ಅಮರ್​ನಾಥ್​ ಅವರು ಚಿಕ್ಕವರಿರುವಾಗಲೇ ತೀರಿಕೊಂಡಿದ್ದರು. ಮೂರು ವರ್ಷಗಳ ಹಿಂದೆ ಅಮರನಾಥ್​ರ ತಾಯಿಯೂ ಇರಲಿಲ್ಲ. ಅಮರನಾಥ್ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅಮರನಾಥ್​ ಕೋಲ್ಕತ್ತಾದವರು ಎಂದು ದೇವೋಲೀನಾ ಬರೆದಿದ್ದಾರೆ.

ಮತ್ತಷ್ಟು ಓದಿ: ಕಲಬುರಗಿ: ಸಂಸದ ಉಮೇಶ್​ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

ಪಿಎಚ್‌ಡಿ ಮಾಡುತ್ತಿದ್ದ ಅತ್ಯುತ್ತಮ ನೃತ್ಯ ಕಲಾವಿದ, ಸಂಜೆ ವಾಕಿಂಗ್ ಹೋಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ. ಅಮೆರಿಕದಲ್ಲಿರುವ ಆತನ ಸ್ನೇಹಿತರು ಮೃತದೇಹವನ್ನು ಹೊರತರಲು ಪ್ರಯತ್ನಿಸುತ್ತಿದ್ದಾರೆ.

ಭಾರತೀಯ ರಾಯಭಾರಿ ಕಚೇರಿ, ಎಸ್ ಜೈಶಂಕರ್ ಮತ್ತು ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ ದೇವೋಲೀನಾ, ಅಮರನಾಥ್ ಘೋಷ್ ಹತ್ಯೆಗೆ ಕಾರಣವನ್ನಾದರೂ ತಿಳಿಯಬೇಕು ಎಂದು ಬರೆದಿದ್ದಾರೆ. ಅಮರನಾಥ್ ಹತ್ಯೆಗೆ ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಂತಾಪ ವ್ಯಕ್ತಪಡಿಸಿದೆ.

ನಾವು ವಿಧಿವಿಜ್ಞಾನ ಮತ್ತು ಪೊಲೀಸ್ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ಸಹಾಯ ಮಾಡುತ್ತೇವೆ ಎಂದು ರಾಯಭಾರ ಕಚೇರಿ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ಭಾರತೀಯ ಮೂಲದವರ ಕೊಲೆಯಾಗುತ್ತಿರುವುದು ಆತಂಕ ಮೂಡಿಸಿದೆ, ಇದು 8ನೇ ಘಟನೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್