Mike Waltz: ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ಮೈಕ್ ವಾಲ್ಡ್ಜ್​ ನೇಮಕ

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗಿನಿಂದ ಆ್ಯಕ್ಷನ್ ಮೋಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚೀನಾವನ್ನು ಮೂಲೆಗುಂಪು ಮಾಡಲು ಟ್ರಂಪ್ ಈಗಾಗಲೇ ಸಂಪೂರ್ಣ ತಯಾರಿ ಆರಂಭಿಸಿದ್ದಾರೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾ ರಾಷ್ಟ್ರೀಯ ಗಾರ್ಡ್ ಅಧಿಕಾರಿ ಮೈಕ್ ವಾಲ್ಟ್ಜ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದಾರೆ.

Mike Waltz: ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ಮೈಕ್ ವಾಲ್ಡ್ಜ್​ ನೇಮಕ
ಮೈಕ್ Image Credit source: Reddit
Follow us
ನಯನಾ ರಾಜೀವ್
|

Updated on:Nov 12, 2024 | 9:24 AM

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಾಗಿನಿಂದ ಆ್ಯಕ್ಷನ್ ಮೋಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚೀನಾವನ್ನು ಮೂಲೆಗುಂಪು ಮಾಡಲು ಟ್ರಂಪ್ ಈಗಾಗಲೇ ಸಂಪೂರ್ಣ ತಯಾರಿ ಆರಂಭಿಸಿದ್ದಾರೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾ ರಾಷ್ಟ್ರೀಯ ಗಾರ್ಡ್ ಅಧಿಕಾರಿ ಮೈಕ್ ವಾಲ್ಟ್ಜ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದಾರೆ.

ಫ್ಲೋರಿಡಾ ರಿಪಬ್ಲಿಕನ್ ನಾಯಕ ಮೈಕ್ ವಾಲ್ಟ್ಜ್ ಅವರನ್ನು ಈ ಸ್ಥಾನದಲ್ಲಿ ಸೇವೆ ಸಲ್ಲಿಸುವಂತೆ ಟ್ರಂಪ್ ಕೇಳಿಕೊಂಡಿದ್ದಾರೆ. ಅಜಿತ್ ದೋವಲ್ ಭಾರತದಲ್ಲಿ ಈ ಹುದ್ದೆಯಲ್ಲಿದ್ದಾರೆ. ವಾಲ್ಟ್ಜ್ ಅವರು ಈ ಹುದ್ದೆಯನ್ನು ನಿರ್ವಹಿಸುವಾಗ ಭೌಗೋಳಿಕ ರಾಜಕೀಯಕ್ಕೆ ಸಂಬಂಧಿಸಿದ ಅನೇಕ ಸಂಕೀರ್ಣ ವಿಷಯಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ಇದು ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಹಮಾಸ್ ಯುದ್ಧವನ್ನು ಒಳಗೊಂಡಿದೆ.

ವಾಲ್ಟ್ಜ್ ಟ್ರಂಪ್ ಅವರ ಕಟ್ಟಾ ಬೆಂಬಲಿಗ. ಅವರು ಅಫ್ಘಾನಿಸ್ತಾನದಲ್ಲಿ ಹಲವಾರು ಬಾರಿ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ, ಅವರು ಪೆಂಟಗನ್‌ನಲ್ಲಿ ಎರಡು ಬಾರಿ ನೀತಿ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಾಮ್ ಬೀಚ್‌ನಲ್ಲಿರುವ ಟ್ರಂಪ್‌ರ ಮಾರ್ ಎ ಲಾಗೋ ರೆಸಾರ್ಟ್‌ನಲ್ಲಿ ವಾಲ್ಟ್ಜ್ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಉಕ್ರೇನ್​ ಯುದ್ಧವನ್ನು ಉಲ್ಬಣಗೊಳಿಸದಂತೆ ರಷ್ಯಾ ಅಧ್ಯಕ್ಷ ಪುಟಿನ್​ಗೆ ಟ್ರಂಪ್ ಸಲಹೆ

ಮೈಕ್ ವಾಲ್ಟ್ಜ್ ಯಾರು? ರಾಷ್ಟ್ರೀಯ ಭದ್ರತಾ ಸಲಹೆಗಾರ ಶಕ್ತಿಶಾಲಿ ಹುದ್ದೆಯಾಗಿದೆ.ಇದಕ್ಕೆ ಸೆನೆಟ್‌ನ ಅನುಮೋದನೆ ಅಗತ್ಯವಿಲ್ಲ. ವಾಲ್ಟ್ಜ್ ಅವರು ಪ್ರಮುಖ ರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಟ್ರಂಪ್‌ಗೆ ಮಾಹಿತಿ ನೀಡಲು ಮತ್ತು ಅನೇಕ ಏಜೆನ್ಸಿಗಳೊಂದಿಗೆ ಸಮನ್ವಯಗೊಳಿಸಲು ಜವಾಬ್ದಾರರಾಗಿರುತ್ತಾರೆ.

ಮೈಕ್ ವಾಲ್ಟ್ಜ್ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಜೊತೆ ಹೋರಾಡಿದ್ದಾರೆ. ಅವರು ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ವಾಲ್ಟ್ಜ್ US ವಿಶೇಷ ಪಡೆಗಳ ಗ್ರೀನ್ ಬೆರೆಟ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಚೀನಾವನ್ನು ಎದುರಿಸಲು, ಅವರು ಭಾರತದೊಂದಿಗೆ ಬಲವಾದ ಸಂಬಂಧವನ್ನು ನಿರ್ಮಿಸಲು ಒತ್ತು ನೀಡುತ್ತಿದ್ದಾರೆ. ಮೈಕ್‌ಗೆ ವಿದೇಶಾಂಗ ನೀತಿಯ ಬಗ್ಗೆ ಉತ್ತಮ ಹಿಡಿತವಿದೆ. ಅವರು ಭಾರತ-ಯುಎಸ್ ಮೈತ್ರಿಯನ್ನು ಪ್ರತಿ ರಂಗದಲ್ಲಿಯೂ ಮುಂದಕ್ಕೆ ಕೊಂಡೊಯ್ಯಲಿದ್ದಾರೆ.

ವಿಶೇಷವಾಗಿ ರಕ್ಷಣಾ ಕ್ಷೇತ್ರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಸಹಕಾರ ಮತ್ತಷ್ಟು ಹೆಚ್ಚಬೇಕು ಎಂದು ಮೈಕ್ ನಂಬಿದ್ದಾರೆ. ಅವರು ಅಮೆರಿಕದಲ್ಲಿ ಇಂಡಿಯನ್ ಕಾಕಸ್‌ನ ಸಹ-ಅಧ್ಯಕ್ಷರೂ ಆಗಿದ್ದಾರೆ. 2023 ರಲ್ಲಿ ತಮ್ಮ ಯುಎಸ್ ಭೇಟಿಯ ಸಂದರ್ಭದಲ್ಲಿ ಕ್ಯಾಪಿಟಲ್ ಹಿಲ್‌ನಲ್ಲಿ ಪ್ರಧಾನಿ ಮೋದಿಯವರ ಭಾಷಣದಲ್ಲಿ ವಾಲ್ಟ್ಜ್ ಪ್ರಮುಖ ಪಾತ್ರ ವಹಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:23 am, Tue, 12 November 24

ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್