AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಸ್ಪರ ನಂಬಿಕೆ, ಗೌರವದ ಮೇಲೆ ನಮ್ಮ ಸಂಬಂಧ ಮುಂದುವರೆಸಲು ಬದ್ಧ: ಜಿನ್​​ಪಿಂಗ್​​ಗೆ ಮೋದಿ ಸಂದೇಶ

ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಪುನರುಚ್ಚರಿಸಿದರು.ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಈ ಸಂದೇಶ ನೀಡಿದರು.

ಪರಸ್ಪರ ನಂಬಿಕೆ, ಗೌರವದ ಮೇಲೆ ನಮ್ಮ ಸಂಬಂಧ ಮುಂದುವರೆಸಲು ಬದ್ಧ: ಜಿನ್​​ಪಿಂಗ್​​ಗೆ ಮೋದಿ ಸಂದೇಶ
ನರೇಂದ್ರ ಮೋದಿImage Credit source: PTI
ನಯನಾ ರಾಜೀವ್
|

Updated on:Aug 31, 2025 | 3:13 PM

Share

ಬೀಜಿಂಗ್, ಆಗಸ್ಟ್​ 31: ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧಗಳ ಬಲಪಡಿಸುವ ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಪುನರುಚ್ಚರಿಸಿದರು.ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಈ ಸಂದೇಶ ನೀಡಿದರು.

ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಮುನ್ನಡೆಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.ಭಾರತ ಮತ್ತು ಚೀನಾ ನಡುವಿನ ಸಹಕಾರವು ಉಭಯ ರಾಷ್ಟ್ರಗಳಿಗೆ ಮಾತ್ರವಲ್ಲದೆ 2.8 ಶತಕೋಟಿ ಜನರ ಕಲ್ಯಾಣಕ್ಕೂ ಅತ್ಯಗತ್ಯ ಎಂದು ಒತ್ತಿ ಹೇಳಿದರು.

ಭಯೋತ್ಪಾದನೆಯ ವಿಷಯವನ್ನು ದೃಢವಾಗಿ ಪ್ರಸ್ತಾಪಿಸಿದ ಪ್ರಧಾನಿ, ಅದನ್ನು ಜಾಗತಿಕ ಪಿಡುಗು ಎಂದು ಬಣ್ಣಿಸಿ, ಈ ಬೆದರಿಕೆಯನ್ನು ಎದುರಿಸುವಲ್ಲಿ ಚೀನಾ ಒಟ್ಟಾಗಿ ಕೆಲಸ ಮಾಡುವಂತೆ ಒತ್ತಾಯಿಸಿದರು. ವಿವಾದಿತ ಗಡಿಯಲ್ಲಿ ಇತ್ತೀಚೆಗೆ ಸೈನ್ಯವನ್ನು ವಾಪಸ್ ಕರೆಸಿಕೊಂಡಿರುವುದು ಶಾಂತಿ ಮತ್ತು ಸ್ಥಿರತೆಯ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಈ ಎರಡು ದಿನಗಳ ಭೇಟಿಯು ಏಳು ವರ್ಷಗಳ ನಂತರ ಪ್ರಧಾನಿಯವರ ಚೀನಾಕ್ಕೆ ಅವರ ಮೊದಲ ಭೇಟಿಯಾಗಿದೆ.

ಮತ್ತಷ್ಟು ಓದಿ: ಟ್ರಂಪ್ ಸುಂಕ ಬೆದರಿಕೆಗೆ ಜಗ್ಗದ ಮೋದಿ, ಚೀನಾದಲ್ಲಿ ಷಿ ಜಿನ್​​ಪಿಂಗ್, ಪುಟಿನ್ ಜತೆ ಮಾತುಕತೆ

2026 ರ ಬ್ರಿಕ್ಸ್ ಶೃಂಗಸಭೆಗೆ ಜಿನ್‌ಪಿಂಗ್​​ರನ್ನು ಭಾರತಕ್ಕೆ ಆಹ್ವಾನಿಸಿದ ಮೋದಿ 2026 ರಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಆಹ್ವಾನಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ.

ಭಾರತ ಮತ್ತು ಚೀನಾ ಪ್ರತಿಸ್ಪರ್ಧಿಗಳಲ್ಲ ಅಭಿವೃದ್ಧಿ ಪಾಲುದಾರರು ಎಂದು ಪ್ರಧಾನಿ ಮೋದಿ ಮತ್ತು ಷಿ ಪುನರುಚ್ಚರಿಸಿದ್ದಾರೆ .ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೇರ ವಿಮಾನಗಳ ಪುನರಾರಂಭ ಮತ್ತು ಕೈಲಾಸ ಮಾನಸ ಸರೋವರ ಯಾತ್ರೆ ನಿರ್ಣಾಯಕವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Sun, 31 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ