AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ

ಇರಾನ್​ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಕೊನೆಗೂ ಭಾರತ ಸಂತಾಪ ಸೂಚಿಸಿದೆ. ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ಆರಂಭಿಸಿದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಆದರೆ, ಈ ಹತ್ಯೆಯ ಬಗ್ಗೆ ಭಾರತ ಮೌನ ತಳೆದಿತ್ತು. ಖಮೇನಿಯ ಹತ್ಯೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಭಾರತ ಖಮೇನಿಯ ಹತ್ಯೆಯನ್ನು ಖಂಡಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಇಂದು ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ್ದಾರೆ.

ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ
Vikram Misri Condolences The Death Of Iran Supreme Leader Khamenei
ಸುಷ್ಮಾ ಚಕ್ರೆ
|

Updated on: Mar 05, 2026 | 5:48 PM

Share

ನವದೆಹಲಿ, ಮಾರ್ಚ್ 5: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಭಾರತದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರ ಸಂತಾಪ ಸೂಚಿಸುವ ಪುಸ್ತಕಕ್ಕೆ ಸಹಿ ಹಾಕಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ ಮುಂಜಾನೆ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಅವರನ್ನು ಕೊಲ್ಲಲಾಗಿತ್ತು. ಖಮೇನಿಯ ನಿಧನಕ್ಕೆ ಭಾರತದ ಮೊದಲ ಪ್ರತಿಕ್ರಿಯೆಯ ಭಾಗವಾಗಿ ಮಿಶ್ರಿ ಸಂತಾಪ ಸೂಚಿಸಿದ್ದಾರೆ.

ಖಮೇನಿ ಅವರ ಸಾವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ರಾತ್ರಿ ಟ್ರೂತ್ ಸೋಷಿಯಲ್‌ನಲ್ಲಿ ಮೊದಲು ಘೋಷಿಸಿದ್ದರು. ಇರಾನ್‌ನ ಜನರು ದೇಶದ ಮೇಲೆ ಹಿಡಿತ ಸಾಧಿಸಲು ಇದು ಅತ್ಯಂತ ದೊಡ್ಡ ಅವಕಾಶ ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಬರೆದಿದ್ದರು. “ಇತಿಹಾಸದಲ್ಲಿ ಅತ್ಯಂತ ದುಷ್ಟ ಜನರಲ್ಲಿ ಒಬ್ಬರಾದ ಖಮೇನಿ ನಿಧನರಾಗಿದ್ದಾರೆ. ಇದು ಇರಾನ್‌ನ ಜನರಿಗೆ ಮಾತ್ರವಲ್ಲ, ಎಲ್ಲಾ ಮಹಾನ್ ಅಮೆರಿಕನ್ನರಿಗೆ ಮತ್ತು ಖಮೇನಿಯಿಂದ ಕೊಲ್ಲಲ್ಪಟ್ಟ ಅಥವಾ ಅಂಗವಿಕಲರಾದ ಪ್ರಪಂಚದಾದ್ಯಂತದ ಅನೇಕ ದೇಶಗಳ ಜನರಿಗೆ ಸಿಕ್ಕ ನ್ಯಾಯವಾಗಿದೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್

ಖಮೇನಿ ಸಾವನ್ನಪ್ಪಿದ ವಾಯುದಾಳಿಯನ್ನು ಖಂಡಿಸದ ಮತ್ತು ಯಾವುದೇ ಹೇಳಿಕೆ ಬಿಡುಗಡೆ ಮಾಡದೆ ಮೌನವನ್ನು ಕಾಯ್ದುಕೊಂಡಿದ್ದ ಭಾರತ ಕೊನೆಗೂ ಖಮೇನಿ ಸಾವಿಗೆ ಸಂತಾಪ ಸೂಚಿಸಿದೆ. ಆದರೆ, ಶಾಂತಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಮೋದಿ ಕರೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ