AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕ್ ಕೈದಿಗಳ ಪಟ್ಟಿ ವಿನಿಮಯ: 188 ಭಾರತೀಯರ ತಕ್ಷಣದ ಬಿಡುಗಡೆಗೆ ಪಾಕಿಸ್ತಾನಕ್ಕೆ ಭಾರತ ಒತ್ತಾಯ

ಭಾರತ ಮತ್ತು ಪಾಕಿಸ್ತಾನ ತಮ್ಮಲ್ಲಿರುವ ಕೈದಿಗಳ ಪಟ್ಟಿ ವಿನಿಮಯ ಮಾಡಿಕೊಂಡಿವೆ. ಪಾಕ್ ಜೈಲುಗಳಲ್ಲಿ ಶಿಕ್ಷಾ ಅವಧಿ ಪೂರ್ಣಗೊಳಿಸಿರುವ 188 ಭಾರತೀಯ ಮೀನುಗಾರರು ಮತ್ತು ನಾಗರಿಕ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಭಾರತ ಒತ್ತಾಯಿಸಿದೆ. 2008ರ 'ಕಾನ್ಸುಲರ್ ಪ್ರವೇಶ ಒಪ್ಪಂದ'ದ ಅಡಿಯಲ್ಲಿ ಈ ಪ್ರಕ್ರಿಯೆ ಪ್ರತಿವರ್ಷ ನಡೆಯುತ್ತದೆ. ಉಳಿದ ಭಾರತೀಯರ ಸುರಕ್ಷತೆ ಮತ್ತು ಬಿಡುಗಡೆಗೆ ಭಾರತ ಸರ್ಕಾರ ನಿರಂತರ ಪ್ರಯತ್ನ ಮುಂದುವರಿಸಿದೆ.

ಭಾರತ-ಪಾಕ್ ಕೈದಿಗಳ ಪಟ್ಟಿ ವಿನಿಮಯ: 188 ಭಾರತೀಯರ ತಕ್ಷಣದ ಬಿಡುಗಡೆಗೆ ಪಾಕಿಸ್ತಾನಕ್ಕೆ ಭಾರತ ಒತ್ತಾಯ
ಕೈದಿ
ನಯನಾ ರಾಜೀವ್
|

Updated on: Jul 02, 2026 | 8:04 AM

Share

ನವದೆಹಲಿ, ಜುಲೈ 02: ಭಾರತ ಮತ್ತು ಪಾಕಿಸ್ತಾನ(Pakistan) ದೇಶಗಳು ಏಕಕಾಲಕ್ಕೆ ರಾಜತಾಂತ್ರಿಕ ಮಾರ್ಗಗಳ ಮೂಲಕ ತಮ್ಮ ವಶದಲ್ಲಿರುವ ಕೈದಿಗಳು ಮತ್ತು ಮೀನುಗಾರರ ಅಧಿಕೃತ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಈ ಬೆನ್ನಲ್ಲೇ, ಪಾಕಿಸ್ತಾನದ ಜೈಲುಗಳಲ್ಲಿ ಈಗಾಗಲೇ ತಮ್ಮ ಶಿಕ್ಷಾ ಅವಧಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿರುವ 188 ಭಾರತೀಯ ಮೀನುಗಾರರು ಮತ್ತು ನಾಗರಿಕ ಕೈದಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ ತಾಯ್ನಾಡಿಗೆ ವಾಪಸ್ ಕಳುಹಿಸುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಬಲವಾಗಿ ಒತ್ತಾಯಿಸಿದೆ.

ಪ್ರತಿ ವರ್ಷ ಜುಲೈ 1 ರಂದು ನಡೆಯುವ ಒಪ್ಪಂದ ಪ್ರಕ್ರಿಯೆ ಉಭಯ ದೇಶಗಳ ನಡುವೆ 2008 ರಲ್ಲಿ ಸಹಿ ಹಾಕಲಾದ ‘ಕಾನ್ಸುಲರ್ ಪ್ರವೇಶ ಒಪ್ಪಂದ’ದ (Agreement on Consular Access) ಅಡಿಯಲ್ಲಿ, ಪ್ರತಿ ವರ್ಷ ಜನವರಿ 1 ಮತ್ತು ಜುಲೈ 1 ರಂದು ಇಂತಹ ಪಟ್ಟಿಗಳನ್ನು ಕಡ್ಡಾಯವಾಗಿ ವಿನಿಮಯ ಮಾಡಿಕೊಳ್ಳಲಾಗುತ್ತದೆ. ಈ ಬಾರಿ ವಿನಿಮಯ ಮಾಡಲಾದ ಪಟ್ಟಿಯ ವಿವರ ಹೀಗಿದೆ.

ಭಾರತ ಜೈಲಿನಲ್ಲಿರುವ 386 ಪಾಕಿಸ್ತಾನಿ ಕೈದಿಗಳು ಮತ್ತು 53ಜನ ಮೀನುಗಾರರು, ಪಾಕಿಸ್ತಾನ ಜೈಲಿನಲ್ಲಿರುವ 52 ಮಂದಿ ಕೈದಿಗಳು ಮತ್ತು 198 ಮಂದಿ ಮೀನುಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂಬ ಒಪ್ಪಂದ ನಡೆಯಿತು.

ಪಾಕಿಸ್ತಾನದ ವಶದಲ್ಲಿರುವ, ಭಾರತೀಯರೆಂದು ನಂಬಲಾದ 13 ನಾಗರಿಕ ಕೈದಿಗಳಿಗೆ ಇದುವರೆಗೆ ಯಾವುದೇ ರಾಜತಾಂತ್ರಿಕ ಸಂಪರ್ಕ ಸಿಕ್ಕಿಲ್ಲ. ಅವರಿಗೆ ತಕ್ಷಣವೇ ಕಾನ್ಸುಲರ್ ಪ್ರವೇಶ ಕಲ್ಪಿಸಬೇಕು. ಪಾಕ್ ಜೈಲುಗಳಲ್ಲಿ ಬಂಧನದಲ್ಲಿರುವ ಮತ್ತು ಬಿಡುಗಡೆಗೆ ಬಾಕಿ ಇರುವ ಎಲ್ಲಾ ಭಾರತೀಯರ ಸುರಕ್ಷತೆ, ಭದ್ರತೆ ಮತ್ತು ಕಲ್ಯಾಣವನ್ನು ಖಚಿತಪಡಿಸುವುದು ಇಸ್ಲಾಮಾಬಾದ್‌ನ ಜವಾಬ್ದಾರಿಯಾಗಿದೆ.

ಮತ್ತಷ್ಟು ಓದಿ: ಪಾಕ್-ಅಫ್ಘಾನ್ ಗಡಿಯಲ್ಲಿ ಭೀಕರ ಸೇನಾ ದಾಳಿ, ಉದ್ವಿಗ್ನತೆ: 35 ನಾಗರಿಕರ ಸಾವು

ಮೀನುಗಾರರ ದೋಣಿಗಳು ಹಾಗೂ ಈ ಹಿಂದೆ ಗಡಿಯಲ್ಲಿ ಕಾಣೆಯಾದ ಭಾರತೀಯ ರಕ್ಷಣಾ ಸಿಬ್ಬಂದಿಯನ್ನು ಶೀಘ್ರವಾಗಿ ಪತ್ತೆ ಹಚ್ಚಿ ಬಿಡುಗಡೆ ಮಾಡಬೇಕು. ಭಾರತ ಸರ್ಕಾರದ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ, 2014 ರಿಂದ ಈವರೆಗೆ ಪಾಕಿಸ್ತಾನದ ಜೈಲುಗಳಿಂದ ಬರೋಬ್ಬರಿ 2,661 ಭಾರತೀಯ ಮೀನುಗಾರರನ್ನು ಮತ್ತು 78 ಭಾರತೀಯ ನಾಗರಿಕ ಕೈದಿಗಳನ್ನು ಯಶಸ್ವಿಯಾಗಿ ತಾಯ್ನಾಡಿಗೆ ಮರಳಿ ಕರೆತರಲಾಗಿದೆ.

ಇದರಲ್ಲಿ 2023 ರಿಂದ ಇತ್ತೀಚಿನವರೆಗಿನ ಅವಧಿಯಲ್ಲೇ ವಾಪಸ್ ಬಂದ 500 ಮೀನುಗಾರರು ಹಾಗೂ 20 ನಾಗರಿಕ ಕೈದಿಗಳು ಸೇರಿದ್ದಾರೆ. ಸದ್ಯ ಜೈಲಿನಲ್ಲಿ ಉಳಿದಿರುವವರನ್ನು ಆದಷ್ಟು ಬೇಗ ತಾಯ್ನಾಡಿಗೆ ಕರೆತರಲು ವಿದೇಶಾಂಗ ಇಲಾಖೆ ಕಾರ್ಯೋನ್ಮುಖವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ