ಭಾರತ ಜಾಗತಿಕ ಸೂಪರ್ ಪವರ್ ಆಗಲು ಅರ್ಹವಾಗಿದೆ; ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘನೆ

ಸೋಚಿಯಲ್ಲಿನ ವಾಲ್ಡೈ ಚರ್ಚಾ ಕ್ಲಬ್‌ನ ಅಧಿವೇಶನದಲ್ಲಿ ಮಾತನಾಡಿದ ರಷ್ಯಾ ಅಧ್ಯಕ್ಷ ಪುಟಿನ್, ರಷ್ಯಾ ತನ್ನ ದ್ವಿಪಕ್ಷೀಯ ಸಂಬಂಧಗಳಲ್ಲಿ ದೊಡ್ಡ ಮಟ್ಟದ ನಂಬಿಕೆಯನ್ನು ಹೊಂದಿದೆ. ಎಲ್ಲಾ ಕ್ಷೇತ್ರಗಳಲ್ಲಿ ಭಾರತದೊಂದಿಗೆ ತನ್ನ ಸಂಬಂಧವನ್ನು ಬಲಪಡಿಸುತ್ತಿದೆ ಎಂದು ಒತ್ತಿ ಹೇಳಿದರು. ಪುಟಿನ್ ಭಾರತದ ಆರ್ಥಿಕ ನಾಯಕತ್ವದ ಬಗ್ಗೆ ಮಾತನಾಡಿದ್ದು, "ಭಾರತವು ಪ್ರಸ್ತುತ ಆರ್ಥಿಕ ಬೆಳವಣಿಗೆಯಲ್ಲಿ ವಿಶ್ವವನ್ನು ಮುನ್ನಡೆಸುತ್ತಿದೆ" ಎಂದು ಹೇಳಿದ್ದಾರೆ. ರಷ್ಯಾ-ಭಾರತದ ಸಹಕಾರದ ಪ್ರಮಾಣವು ಪ್ರತಿ ವರ್ಷ ಗಮನಾರ್ಹವಾಗಿ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರತ ಜಾಗತಿಕ ಸೂಪರ್ ಪವರ್ ಆಗಲು ಅರ್ಹವಾಗಿದೆ; ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘನೆ
ಮೋದಿ- ಪುಟಿನ್
Follow us
ಸುಷ್ಮಾ ಚಕ್ರೆ
|

Updated on: Nov 08, 2024 | 5:02 PM

ಮಾಸ್ಕೋ: ಭಾರತವು ಜಾಗತಿಕ ಸೂಪರ್​ ಪವರ್ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಅರ್ಹವಾಗಿದೆ. ಏಕೆಂದರೆ, ಅದರ ಆರ್ಥಿಕತೆಯು ಪ್ರಸ್ತುತ ಇತರ ಎಲ್ಲ ದೇಶಗಳಿಗಿಂತ ವೇಗವಾಗಿ ಬೆಳೆಯುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಸೋಚಿಯಲ್ಲಿ ಗುರುವಾರ ನಡೆದ ವಾಲ್ಡೈ ಚರ್ಚಾ ಕ್ಲಬ್‌ನ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ವ್ಲಾಡಿಮಿರ್ ಪುಟಿನ್, ರಷ್ಯಾ ಭಾರತದೊಂದಿಗೆ ಎಲ್ಲಾ ರೀತಿಯಲ್ಲಿ ಸಂಬಂಧವನ್ನು ಅಭಿವೃದ್ಧಿಪಡಿಸುತ್ತಿದೆ. ರಷ್ಯಾಕ್ಕೆ ದ್ವಿಪಕ್ಷೀಯ ಬಾಂಧವ್ಯಗಳಲ್ಲಿ ಹೆಚ್ಚಿನ ನಂಬಿಕೆ ಇದೆ ಎಂದು ಹೇಳಿದರು.

ಭಾರತವನ್ನು ನಿಸ್ಸಂದೇಹವಾಗಿ ಸೂಪರ್ ಪವರ್ ಪಟ್ಟಿಗೆ ಸೇರಿಸಬೇಕು. ಅದರ ಒಂದೂವರೆ ಶತಕೋಟಿ ಜನಸಂಖ್ಯೆ, ವಿಶ್ವದ ಎಲ್ಲಾ ಆರ್ಥಿಕತೆಗಳಲ್ಲಿ ಅತ್ಯಂತ ವೇಗದ ಬೆಳವಣಿಗೆ, ಪ್ರಾಚೀನ ಸಂಸ್ಕೃತಿಯನ್ನು ಪರಿಗಣಿಸಬೇಕು ಎಂದು ಪುಟಿನ್ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಭಾರತವನ್ನು ಶ್ರೇಷ್ಠ ದೇಶ ಎಂದು ಕರೆದ ಪುಟಿನ್, “ನಾವು ಭಾರತದೊಂದಿಗೆ ಎಲ್ಲಾ ರೀತಿಯಲ್ಲಿ ಸಂಬಂಧವನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಭಾರತವು ಶ್ರೇಷ್ಠ ದೇಶವಾಗಿದೆ. ಭಾರತ ಈಗ ಜನಸಂಖ್ಯೆಯ ದೃಷ್ಟಿಯಿಂದ ದೊಡ್ಡ ದೇಶವಾಗಿದೆ. ಆರ್ಥಿಕ ಬೆಳವಣಿಗೆಯಲ್ಲಿ ಭಾರತ ವಿಶ್ವದಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ.

ಇದನ್ನೂ ಓದಿ: ಇಡೀ ಜಗತ್ತೇ ನಿಮ್ಮನ್ನು ಪ್ರೀತಿಸುತ್ತೆ, ಪ್ರಧಾನಿ ಮೋದಿಯನ್ನು ಹೊಗಳಿದ ಟ್ರಂಪ್

ಭದ್ರತೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ನಡುವಿನ ಸಂಪರ್ಕಗಳು ಅಭಿವೃದ್ಧಿಯಾಗುತ್ತಿವೆ ಎಂದು ಪುಟಿನ್ ಹೇಳಿದ್ದಾರೆ. “ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಎಷ್ಟು ರೀತಿಯ ರಷ್ಯಾದ ಮಿಲಿಟರಿ ಉಪಕರಣಗಳು ಸೇವೆಯಲ್ಲಿವೆ ಎಂಬುದನ್ನು ಗಮನಿಸಿ. ಈ ಸಂಬಂಧದಲ್ಲಿ ಹೆಚ್ಚಿನ ನಂಬಿಕೆ ಇದೆ. ನಾವು ನಮ್ಮ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ಮಾರಾಟ ಮಾಡುವುದಿಲ್ಲ; ನಾವು ಅವುಗಳನ್ನು ಜಂಟಿಯಾಗಿ ವಿನ್ಯಾಸಗೊಳಿಸುತ್ತೇವೆ” ಎಂದು ಅವರು ಹೇಳಿದರು.

ಪುಟಿನ್ ಭಾರತದ ಆರ್ಥಿಕ ನಾಯಕತ್ವವನ್ನು ಎತ್ತಿ ತೋರಿಸಿದರು, “ಭಾರತವು ಪ್ರಸ್ತುತ ಆರ್ಥಿಕ ಬೆಳವಣಿಗೆಯಲ್ಲಿ ವಿಶ್ವವನ್ನು ಮುನ್ನಡೆಸುತ್ತಿದೆ” ಎಂದು ಹೇಳಿದ್ದಾರೆ. ರಷ್ಯಾ-ಭಾರತದ ಸಹಕಾರದ ಪ್ರಮಾಣವು ಪ್ರತಿ ವರ್ಷ ಗಮನಾರ್ಹವಾಗಿ ಹೆಚ್ಚುತ್ತಿದೆ ಎಂದಿರುವ ಅವರು, ನಮ್ಮ 2 ದೇಶಗಳ ಭವಿಷ್ಯದ ಅಭಿವೃದ್ಧಿಯ ಬಗ್ಗೆ ನಮ್ಮ ದೃಷ್ಟಿಕೋನ ನೆಟ್ಟಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ