AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ: ಭಯೋತ್ಪಾದನೆ ಬಗ್ಗೆ ಆತಂಕ

ಅಫ್ಘಾನಿಸ್ತಾನ ಭೂಪ್ರದೇಶವನ್ನು ಯಾವುದೇ ಭಯೋತ್ಪಾದಕ ಸಂಘಟನೆಯು ಬಳಸಿಕೊಳ್ಳಲು ಅವಕಾಶ ನೀಡಬಾರದು ಎಂದು ಭಾರತ ಆಗ್ರಹಿಸಿದೆ.

ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ: ಭಯೋತ್ಪಾದನೆ ಬಗ್ಗೆ ಆತಂಕ
ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಸೋಮವಾರ ನಡೆಯಿತು. ಭಾರತದ ಪ್ರತಿನಿಧಿ ತಿರುಮೂರ್ತಿ ಮಾತನಾಡಿದರು.
TV9 Web
| Edited By: |

Updated on: Aug 16, 2021 | 9:36 PM

Share

ನ್ಯೂಯಾರ್ಕ್​: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ಸೋಮವಾರ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತುಸಭೆ ನಡೆಯಿತು. ವಿಶ್ವಸಂಸ್ಥೆಯಲ್ಲಿರುವ ಭಾರತದ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಭಯೋತ್ಪಾದನೆ ಮತ್ತು ಅದರ ಯಾವುದೇ ಮುಖದ ಬಗ್ಗೆ ಕಿಂಚಿತ್ತೂ ಸಹನೆ ಇರಿಸಿಕೊಳ್ಳುವುದಿಲ್ಲ ಎನ್ನುವುದು ನಿಜವೇ ಆಗಿದ್ದರೆ ಅಫ್ಘಾನಿಸ್ತಾನ ಭೂಪ್ರದೇಶವನ್ನು ಯಾವುದೇ ಭಯೋತ್ಪಾದಕ ಸಂಘಟನೆಯು ಬಳಸಿಕೊಳ್ಳಲು ಅವಕಾಶ ನೀಡಬಾರದು. ಇತರ ಯಾವುದೇ ದೇಶಗಳ ವಿರುದ್ಧ ಉಗ್ರಗಾಮಿ ಕಾರ್ಯಾಚರಣೆ ನಡೆಸಲು ಅಫ್ಘನ್ ನೆಲವನ್ನು ಬಳಸಿಕೊಳ್ಳಲು ಅವಕಾಶ ಕೊಡಬಾರದು. ಆಗ ಮಾತ್ರ ಅಫ್ಘಾನಿಸ್ತಾನದ ನೆರೆಹೊರೆಯ ದೇಶಗಳು ಸುರಕ್ಷಿತ ಭಾವನೆ ಹೊಂದುತ್ತವೆ ಎಂದು ತಿರುಮೂರ್ತಿ ಹೇಳಿದರು.

ಕಾಬೂಲ್​ನ ಹಮೀದ್ ಕರ್ಜೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಷಾದಕರ ದೃಶ್ಯಗಳು ಕಂಡುಬಂದವು. ಜನರಲ್ಲಿ ಭೀತಿ ಆವರಿಸಿಕೊಂಡಿದೆ. ಮಹಿಳೆಯರು ಮತ್ತು ಮಕ್ಕಳು ಹೆದರಿದ್ದಾರೆ. ಕಾಬೂಲ್​ನ ವಿಮಾನ ನಿಲ್ದಾಣವೂ ಸೇರಿದಂತೆ ನಗರದ ಹಲವೆಡೆ ಗುಂಡು ಹಾರಾಟ ವರದಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಫ್ಘಾನಿಸ್ತಾನದ ನೆರೆಯ ದೇಶವಾಗಿ, ಅಲ್ಲಿನ ಜನರ ಗೆಳೆಯನಾಗಿ ಭಾರತಕ್ಕೆ ಅಲ್ಲಿನ ಪರಿಸ್ಥಿತಿ ಆತಂಕ ಉಂಟು ಮಾಡಿದೆ. ಅಫ್ಘಾನಿಸ್ತಾನದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸದಾ ಭಯದಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದರು.

ಅಫ್ಘಾನಿಸ್ತಾನವು ಎಂದಿಗೂ ಉಗ್ರರಿಗೆ ವೇದಿಕೆಯಾಗಬಾರದು. ಉಗ್ರಗಾಮಿ ಚಟುವಟಿಕೆಗಳಿಗೆ ಸುರಕ್ಷಿತ ತಾಣ ಎನಿಸಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನವು ಭಯೋತ್ಪಾದಕರ ನೆಲೆವೀಡಾಗುವ ಅಪಾಯವಿದೆ. ಇದರ ವಿರುದ್ಧ ಅಂತಾರಾಷ್ಟ್ರೀಯ ಸಮುದಾಯ ಒಂದಾಗಬೇಕು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಟೆರೆಸ್ ಹೇಳಿದರು.

(India Expresses its Concern over Horrifying Situation of Afghanistan)

ಇದನ್ನೂ ಓದಿ: ಅಫ್ಘಾನಿಸ್ತಾನದ ಹಿಂದೂ-ಸಿಖ್ಖರು ಭಾರತಕ್ಕೆ ಬರಲು ನೆರವು: ಸರ್ಕಾರದ ಭರವಸೆ

ಇದನ್ನೂ ಓದಿ: Impact on India: ತಾಲಿಬಾನ್ ವಶಕ್ಕೆ ಅಫ್ಘಾನಿಸ್ತಾನ, ಭಾರತದ ಭದ್ರತೆಗೆ ಹಲವು ಆತಂಕ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ