AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಇಟಲಿ ನಡುವೆ ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ: ಪಿಎಂ ಮೋದಿ ಘೋಷಣೆ

India-Italy Elevate Ties to Special Strategic Partnership: ಭಾರತ ಹಾಗೂ ಇಟಲಿ ಸಂಬಂಧವು ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆಗೆ ಏರಿದ್ದು, ಪ್ರಧಾನಿ ಮೋದಿ ಮತ್ತು ಮೆಲೋನಿ ಘೋಷಿಸಿದ್ದಾರೆ. ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಹಾಗೂ ಉತ್ಪಾದನಾ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆಗೆ ಒತ್ತು ನೀಡಲಾಗಿದೆ. IMEC ಯೋಜನೆಗೂ ಉಭಯ ನಾಯಕರು ಬದ್ಧತೆ ಪುನರುಚ್ಚರಿಸಿದ್ದು, ಇದು ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ಆಯಾಮ ನೀಡಿದೆ. ಮೋದಿ ಭೇಟಿಯನ್ನು ಮೆಲೋನಿ 'ಐತಿಹಾಸಿಕ' ಎಂದು ಬಣ್ಣಿಸಿದರು.

ಭಾರತ-ಇಟಲಿ ನಡುವೆ ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ: ಪಿಎಂ ಮೋದಿ ಘೋಷಣೆ
ಇಟಲಿಯಲ್ಲಿ ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿImage Credit source: AP
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 20, 2026 | 5:38 PM

Share

ರೋಮ್, ಮೇ 20: ಭಾರತ ಹಾಗೂ ಇಟಲಿ ದೇಶಗಳ ಸಂಬಂಧವು ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆಯ (Special Strategic Partnership) ಮಟ್ಟಕ್ಕೆ ಏರಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಘೋಷಿಸಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಟಲಿಗೆ ಭೇಟಿ ನೀಡಿದ್ದು, ಅಲ್ಲಿ ಮೆಲೋನಿ ಜೊತೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದರು. ಅದಾದ ಬಳಿಕ ಉಭಯ ನಾಯಕರು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ ಘೋಷಣೆ

ರೋಮ್‌ನ ವಿಲ್ಲಾ ಪಾಂಫಿಲ್‌ನಲ್ಲಿ ನಡೆದ ಮಾತುಕತೆಯ ನಂತರ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ನಮ್ಮ ಸಂಬಂಧವನ್ನು ‘ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ’ಗೆ ಮೇಲ್ದರ್ಜೆಗೆ ಏರಿಸುತ್ತಿರುವುದನ್ನು ಘೋಷಿಸಲು ನನಗೆ ಸಂತೋಷವಾಗಿದೆ” ಎಂದು ತಿಳಿಸಿದರು. ಭಾರತ ಮತ್ತು ಐರೋಪ್ಯ ಒಕ್ಕೂಟದ ಮಧ್ಯೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡಲು ಇಟಲಿ ನೀಡಿದ ಬೆಂಬಲಕ್ಕಾಗಿ ಮೆಲೋನಿ ಅವರಿಗೆ ಮೋದಿ ಧನ್ಯವಾದ ಕೂಡ ಹೇಳಿದರು. ಇಟಲಿ ಮತ್ತು ಭಾರತದ ನಡುವಿನ ಸಂಬಂಧಕ್ಕೆ ಹೊಸ ಎತ್ತರ ಸಿಕ್ಕಿದ್ದು, ಇದು ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಸಹಕಾರದ ಪ್ರಮುಖ ವಿಸ್ತರಣೆಯನ್ನು ಸೂಚಿಸುತ್ತದೆ.

ಇದನ್ನೂ ಓದಿ: ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ

ಮೋದಿ ಭೇಟಿಯನ್ನು ಐತಿಹಾಸಿಕ ಎಂದು ಬಣ್ಣಿಸಿದ ಮೆಲೋನಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಈ ಭೇಟಿಯನ್ನು ಉಭಯ ದೇಶಗಳ ಸಂಬಂಧದಲ್ಲಿ ಒಂದು “ಐತಿಹಾಸಿಕ ದಿನ” ಎಂದು ಬಣ್ಣಿಸಿದರು. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಅವರು ಇಟಲಿಗೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಈ ಹಿಂದೆ ಭಾರತದ ಪ್ರಧಾನಿಯೊಬ್ಬರು ಇಟಲಿಗೆ ದ್ವಿಪಕ್ಷೀಯ ಭೇಟಿ ನೀಡಿದ್ದು 2000ನೇ ಇಸವಿಯಲ್ಲಿ. ಈಗ ಮೋದಿ ಭೇಟಿಯಿಂದ ಭಾರತ ಹಾಗು ಇಟಲಿ ನಡುವಿನ ಸಂಬಂಧಕ್ಕೆ ಹೊಸ ಚೈತನ್ಯ ನೀಡಲಾಗುತ್ತಿದೆ ಎಂದು ಮೆಲೋನಿ ಅಭಿಪ್ರಾಯಪಟ್ಟರು.

ರಕ್ಷಣೆ ಮತ್ತು ಆರ್ಥಿಕ ಸಹಕಾರ

ಉಭಯ ದೇಶಗಳು ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸುತ್ತಿವೆ. ಪ್ರಧಾನಿ ಮೋದಿ ಅವರು, “ಭಾರತ ಮತ್ತು ಇಟಲಿಯಲ್ಲಿ ಜಂಟಿಯಾಗಿ ಉತ್ಪಾದಿಸಿ, ಜಗತ್ತಿಗೆ ತಲುಪಿಸಿ” (Develop in India and Italy and deliver to the world) ಎಂಬ ದೂರದೃಷ್ಟಿಯೊಂದಿಗೆ ಜಂಟಿ ಉತ್ಪಾದನೆ ಮತ್ತು ಪೂರೈಕೆ ಸರಪಳಿ (Supply chain) ವಿಧಾನವನ್ನು ಉತ್ತೇಜಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ 1,000ಕ್ಕೂ ಹೆಚ್ಚು ಭಾರತೀಯ ಮತ್ತು ಇಟಾಲಿಯನ್ ಕಂಪನಿಗಳು ಪರಸ್ಪರರ ಮಾರುಕಟ್ಟೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ: ಮೆಲೋನಿಗೆ ಮೋದಿಯಿಂದ ಚಾಕೊಲೇಟ್ ಗಿಫ್ಟ್; ಆದರೆ, ಷೇರುಬೆಲೆ ಹೆಚ್ಚಿದ್ದು ರಿಯಲ್ ಎಸ್ಟೇಟ್ ಕಂಪನಿಯದ್ದು; ಯಾಕೆ?

ಎರಡೂ ದೇಶಗಳ ಸಂಬಂಧದ ಪ್ರಮುಖ ಗುರಿಗಳು

  • ದ್ವಿಪಕ್ಷೀಯ ವ್ಯಾಪಾರ: ಭಾರತ ಮತ್ತು ಇಟಲಿ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು 2029ರ ವೇಳೆಗೆ 20 ಬಿಲಿಯನ್ ಯೂರೋಗಳಿಗಿಂತ ಹೆಚ್ಚು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ.
  • ಉದಯೋನ್ಮುಖ ತಂತ್ರಜ್ಞಾನ: ಕೃತಕ ಬುದ್ಧಿಮತ್ತೆ (AI), ಕ್ವಾಂಟಮ್ ಕಂಪ್ಯೂಟಿಂಗ್, ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಡಿಜಿಟಲ್ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲಾಗುವುದು. AI ತಂತ್ರಜ್ಞಾನವು ಮಾನವ ಕೇಂದ್ರಿತವಾಗಿರಬೇಕು ಎಂಬ ಭಾರತದ ‘ಮಾನವ್’ (MANAV) ಪರಿಕಲ್ಪನೆ ಮತ್ತು ಇಟಲಿಯ ನೈತಿಕ ಚೌಕಟ್ಟನ್ನು ಒಟ್ಟಿಗೆ ತರಲಾಗುವುದು.
  • ಪ್ರಾದೇಶಿಕ ಸಂಪರ್ಕ: ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್ ಅನ್ನು ಸಂಪರ್ಕಿಸುವ ‘ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್’ (IMEC) ಯೋಜನೆಗೆ ಉಭಯ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಭೌಗೋಳಿಕವಾಗಿ ಇಂಡೋ-ಪೆಸಿಫಿಕ್ ಮತ್ತು ಮೆಡಿಟರೇನಿಯನ್ ಪ್ರದೇಶಗಳನ್ನು ಜೋಡಿಸುವ ಮೂಲಕ ಈ ಪಾಲುದಾರಿಕೆ ಜಾಗತಿಕ ರಾಜತಾಂತ್ರಿಕತೆಗೆ ಹೊಸ ಆಯಾಮ ನೀಡಲಿದೆ ಎಂದು ಈ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!