AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಒಪ್ಪಂದ: 2030ರ ವೇಳೆಗೆ 5,000 ಕೋಟಿ ರೂಪಾಯಿ ದ್ವಿಪಕ್ಷೀಯ ವಹಿವಾಟಿಗೆ ಮುನ್ನುಡಿ!

ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರ ಮಹತ್ವದ ಮಾತುಕತೆಯ ನಂತರ ಭಾರತ ಮತ್ತು ನ್ಯೂಜಿಲೆಂಡ್ ಬಾಂಧವ್ಯವನ್ನು ಸ್ಟ್ರಾಟಜಿಕ್ ಪಾರ್ಟ್ನರ್​ಶಿಪ್​ ಮಟ್ಟಕ್ಕೆ ಕೊಂಡೊಯ್ಯಲಾಗಿದೆ. ಅಂದರೆ 2030ರ ವೇಳೆಗೆ ಉಭಯ ದೇಶಗಳ ನಡುವೆ 35,000 ಕೋಟಿ ರೂ. ದ್ವಿಪಕ್ಷೀಯ ವ್ಯಾಪಾರದ ಗುರಿ ಹೊಂದಲಾಗಿದ್ದು, ರಕ್ಷಣೆ ಮತ್ತು ನೌಕಾಪಡೆಗೆ ಸಂಬಂಧಿಸಿದಂತೆ 10 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

Narendra Modi: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಒಪ್ಪಂದ: 2030ರ ವೇಳೆಗೆ 5,000 ಕೋಟಿ ರೂಪಾಯಿ ದ್ವಿಪಕ್ಷೀಯ ವಹಿವಾಟಿಗೆ ಮುನ್ನುಡಿ!
ಪ್ರಧಾನಿ ಮೋದಿ ಮತ್ತು ಕ್ರಿಸ್ಟೋಫರ್ ಲಕ್ಸನ್Image Credit source: The Hindu
ಭಾವನಾ ಹೆಗಡೆ
|

Updated on:Jul 11, 2026 | 10:50 AM

Share

ಮುಖ್ಯಾಂಶಗಳು

  • ಭಾರತ ಮತ್ತು ನ್ಯೂಜಿಲೆಂಡ್ ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಯನ್ನಾಗಿಸಿದೆ
  • 2030ರ ವೇಳೆಗೆ ವಾರ್ಷಿಕ ವ್ಯಾಪಾರವನ್ನು 35,000 ಕೋಟಿ ರೂಪಾಯಿಗಳಿಗೆ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ.
  • ರಕ್ಷಣೆ ಮತ್ತು ನೌಕಾಸೇನೆ ಸಹಕಾರ ಸೇರಿ 18 ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ನ್ಯೂಜಿಲೆಂಡ್, ಜುಲೈ 11: ಭಾರತ ಮತ್ತು ನ್ಯೂಜಿಲೆಂಡ್ ದೇಶಗಳು ಶನಿವಾರ ತಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ‘ಕಾರ್ಯತಂತ್ರದ ಪಾಲುದಾರಿಕೆ’ (Strategic Partnership) ಮಟ್ಟಕ್ಕೆ ಕೊಂಡೊಯ್ದಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರ ನಡುವೆ ನಡೆದ ಸುದೀರ್ಘ ಉನ್ನತ ಮಟ್ಟದ ಮಾತುಕತೆಯ ನಂತರ, ಮುಂದಿನ ಐದು ವರ್ಷಗಳಲ್ಲಿ ಅಂದರೆ 2030 ರ ವೇಳೆಗೆ ಉಭಯ ದೇಶಗಳ ನಡುವಿನ ವಾರ್ಷಿಕ ಸರಕು ಮತ್ತು ಸೇವಾ ವ್ಯಾಪಾರವನ್ನು ಬರೋಬ್ಬರಿ 35,000 ಕೋಟಿ ರೂಪಾಯಿಗಳಿಗೆ (7 ಬಿಲಿಯನ್ ನ್ಯೂಜಿಲೆಂಡ್ ಡಾಲರ್) ದ್ವಿಗುಣಗೊಳಿಸುವ ಐತಿಹಾಸಿಕ ಗುರಿಯನ್ನು ನಿಗದಿಪಡಿಸಲಾಗಿದೆ.

ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸದ ಅಂತಿಮ ಹಂತವಾಗಿ ಆಕ್ಲೆಂಡ್‌ಗೆ ಭೇಟಿ ನೀಡಿದ್ದು, ಚೀನಾದ ಪ್ರಭಾವ ಹೆಚ್ಚುತ್ತಿರುವ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ವಿಸ್ತರಿಸುವತ್ತ ಈ ಭೇಟಿ ಪ್ರಮುಖ ಗಮನ ಹರಿಸಿದೆ. ಇತ್ತೀಚೆಗೆ ಸಹಿ ಮಾಡಲಾದ ಮುಕ್ತ ವ್ಯಾಪಾರ ಒಪ್ಪಂದದ (FTA) ಯಶಸ್ವಿ ಅನುಷ್ಠಾನದ ಬಗ್ಗೆಯೂ ಇಬ್ಬರೂ ನಾಯಕರು ಚರ್ಚಿಸಿದ್ದಾರೆ.

18 ಪ್ರಮುಖ ನಿರ್ಧಾರಗಳು, 10 ಒಪ್ಪಂದಗಳು

ಈ ಐತಿಹಾಸಿಕ ಸಭೆಯಲ್ಲಿ ಉಭಯ ದೇಶಗಳ ನಡುವೆ 10 ಮಹತ್ವದ ಒಪ್ಪಂದಗಳು ಸೇರಿದಂತೆ ಒಟ್ಟು 18 ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಾಗಿದೆ. ಇಂಡೋ-ಪೆಸಿಫಿಕ್ ಸಾಮರಸ್ಯ, ನೌಕಾಪಡೆ ಮತ್ತು ನ್ಯೂಜಿಲೆಂಡ್ ರಕ್ಷಣಾ ಪಡೆಗಳ ನಡುವೆ ಪರಸ್ಪರ ಲಾಜಿಸ್ಟಿಕ್ಸ್ ಬೆಂಬಲ ಒಪ್ಪಂದಗಳು ಇದರಲ್ಲಿ ಸೇರಿವೆ. ನಾವು ಪ್ರತಿಯೊಂದು ವಲಯದಲ್ಲೂ ಸ್ಪಷ್ಟ ಗುರಿ ಮತ್ತು ಫಲಿತಾಂಶಗಳೊಂದಿಗೆ ಮುನ್ನಡೆಯಲಿದ್ದೇವೆ ಎಂದು ಪ್ರಧಾನಿ ಮೋದಿ ಮಾತುಕತೆಯ ನಂತರ ತಿಳಿಸಿದ್ದಾರೆ.

ಜಾಗತಿಕ ವಿಷಯಗಳ ಕುರಿತು ಚರ್ಚೆ

ಉಭಯ ನಾಯಕರು ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸ್ಟ್ರೈಟ್ ಆಫ್ ಹಾರ್ಮುಜ್ ಮೂಲಕ ಜಾಗತಿಕ ವಾಣಿಜ್ಯದ ಮುಕ್ತ ಸಂಚಾರಕ್ಕೆ ಯಾವುದೇ ಅಡ್ಡಿ ಇರಬಾರದು ಎಂದು ಒತ್ತಿ ಹೇಳಿದರು. ಇನ್ನು ಉಕ್ರೇನ್ ಯುದ್ಧ ಮತ್ತು ಭಯೋತ್ಪಾದನೆಯ ವಿರುದ್ಧ ಜೀರೋ-ಟಾಲರೆನ್ಸ್ (ಶೂನ್ಯ ಸಹಿಷ್ಣುತೆ) ಧೋರಣೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು. ಕಳೆದ ವರ್ಷ ಪಹಲ್ಗಾಮ್ ಮತ್ತು ಕೆಂಪುಕೋಟೆಯ ಬಳಿ ನಡೆದ ಭಯೋತ್ಪಾದಕ ದಾಳಿಯನ್ನು ಉಭಯ ನಾಯಕರು ತೀವ್ರವಾಗಿ ಖಂಡಿಸಿದರು. ಜೊತೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಸ್ತರಣೆ ಮತ್ತು ಸುಧಾರಣೆಗೆ ಭಾರತದ ಬೇಡಿಕೆಯನ್ನು ನ್ಯೂಜಿಲೆಂಡ್ ಬೆಂಬಲಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Sat, 11 July 26

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ