ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದ ಪಾಕ್ ಪ್ರಧಾನಿ ಶೆಹಬಾಜ್

ಭಾರತದ ಕೈಯಲ್ಲಿ ಸೋಲು ಅನುಭವಿಸಿದ ಬಳಿಕ, ಭಯೋತ್ಪಾದನೆಯನ್ನು ಪೋಷಿಸುವ ದೇಶ ಪಾಕಿಸ್ತಾನವು ಈಗ ಟ್ರ್ಯಾಕ್​ಗೆ ಬಂದಿದೆ. ಭಾರತಕ್ಕೆ ಯಾವಾಗಲೂ ಯುದ್ಧ ಮತ್ತು ಪರಮಾಣು ದಾಳಿಯ ಬೆದರಿಕೆ ಹಾಕುವ ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್, ಶಾಂತಿ ಬಗ್ಗೆ ಮಾತನಾಡಿದ್ದಾರೆ. ಈಗ ಶೆಹಬಾಜ್ ಷರೀಫ್ ಶಾಂತಿಗಾಗಿ ಮಾತನಾಡಲು ಸಿದ್ಧ ಎಂದು ಹೇಳಿದ್ದಾರೆ. ಷರೀಫ್ ಗುರುವಾರ ದೇಶದ ಪಂಜಾಬ್ ಪ್ರಾಂತ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಿದರು. ಶಾಂತಿಗಾಗಿ ಭಾರತದೊಂದಿಗೆ ಮಾತನಾಡಲು ನಾವು ಸಿದ್ಧರಿದ್ದೇವೆ ಎಂದು ಶಹಬಾಜ್ ಷರೀಫ್ ಇಲ್ಲಿ ಹೇಳಿದರು.

ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದ ಪಾಕ್ ಪ್ರಧಾನಿ ಶೆಹಬಾಜ್
ಶೆಹಬಾಜ್ ಷರೀಫ್​
Image Credit source: Moneycontrol

Updated on: May 16, 2025 | 8:05 AM

ಇಸ್ಲಾಮಾಬಾದ್, ಮೇ 16: ‘‘ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧರಿದ್ದೇವೆ’’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್(Shehbaz Sharif)​ ಹೇಳಿದ್ದಾರೆ. ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಶೆಹಬಾಜ್ ಅವರೊಂದಿಗೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ವಾಯುನೆಲೆಗೆ ಬಂದಿದ್ದರು.

ನಾಲ್ಕು ದಿನಗಳ ತೀವ್ರ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಮೇ 10 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಮಾಡಿಕೊಂಡ ಒಪ್ಪಂದದ ನಂತರ, ರಕ್ಷಣಾ ಸೌಲಭ್ಯಕ್ಕೆ ಪ್ರಧಾನಿಯ ಎರಡನೇ ಭೇಟಿ ಇದಾಗಿದೆ.

ಇದನ್ನೂ ಓದಿ
ಕದನವಿರಾಮ ಉಲ್ಲಂಘಿಸಿದ ಪಾಕಿಸ್ತಾನ; ತೀವ್ರ ಕ್ರಮಕ್ಕೆ ಭಾರತೀಯ ಸೇನೆಗೆ ಸೂಚನೆ
ಸೂಕ್ಷ್ಮ ಸಂದರ್ಭದಲ್ಲಿ ಏನೋನೋ ಮಾತನಾಡಿದ್ರೆ ಏನೇನು ಅವಾಂತರವಾಗುತ್ತೆ ನೋಡಿ
ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಜತೆ ಮಾತುಕತೆ
ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ 6 ಮತ್ತು 7 ರ ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ ಸೇರಿದಂತೆ ಹಲವಾರು ಪಾಕಿಸ್ತಾನಿ ಮಿಲಿಟರಿ ಸ್ಥಾಪನೆಗಳ ಮೇಲೆ ಭೀಕರ ಪ್ರತಿದಾಳಿ ನಡೆಸಿದವು.

ಮತ್ತಷ್ಟು ಓದಿ: ಪಹಲ್ಗಾಮ್ ದಾಳಿಯ ತಟಸ್ಥ ತನಿಖೆಗೆ ಸಿದ್ಧ; ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭರವಸೆ

ಬುಧವಾರ, ಶೆಹಬಾಜ್ ಸಿಯಾಲ್‌ಕೋಟ್‌ನ ಪಸ್ರೂರ್ ಕಂಟೋನ್ಮೆಂಟ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರು ಸೈನಿಕರೊಂದಿಗೆ ಸಂವಾದ ನಡೆಸಿದ್ದರು. ಈ ಮೋದಲು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಅದರ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿರುತ್ತವೆ ಎಂದು ಭಾರತ ಸಮರ್ಥಿಸಿಕೊಂಡಿತ್ತು.

ಮೇ 18 ರವರೆಗೆ ಒಪ್ಪಿಗೆ ವಿಸ್ತರಣೆ
ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಡಿಜಿಎಂಒ ಮಟ್ಟದ ಮಾತುಕತೆಯಲ್ಲಿ ಯುದ್ಧವನ್ನು ಕೊನೆಗೊಳಿಸಲು ಒಪ್ಪಿಕೊಂಡಿದ್ದವು. ಈಗ ಎರಡೂ ದೇಶಗಳು ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಿವೆ. ಮಾಹಿತಿಯ ಪ್ರಕಾರ, ಯುದ್ಧವನ್ನು ಕೊನೆಗೊಳಿಸುವ ಕುರಿತು ಎರಡೂ ದೇಶಗಳ ನಡುವೆ ಮಾಡಿಕೊಂಡ ಒಪ್ಪಂದವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Fri, 16 May 25