ನಾವು ಭಾರತದ ವಿರುದ್ಧ ಗೆದ್ದಿದ್ದೇವೆ: ಮತ್ತೆ ಸುಳ್ಳಿನ ಕತೆ ಹೇಳಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್​

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸುವ ಮೂಲಕ ತನ್ನ ಹಳೇ ಚಾಳಿಯನ್ನು ಮುಂದುವರೆಸಿದ್ದು, ಭಾರತದ ಮೇಲೆ ದಾಳಿ ಮಾಡಿದೆ. ಇದಕ್ಕೆ ಭಾರತ ಕೂಡ ತಕ್ಕ ಪ್ರತ್ಯುತ್ತರ ಕೊಟ್ಟಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್​ ಶರೀಫ್​ ಸುದ್ದಿಗೋಷ್ಠಿ ನಡೆಸಿ ತನ್ನ ಉದ್ದಟತನವನ್ನು ಮುಂದುವರೆಸಿದ್ದಾರೆ.

ನಾವು ಭಾರತದ ವಿರುದ್ಧ ಗೆದ್ದಿದ್ದೇವೆ: ಮತ್ತೆ ಸುಳ್ಳಿನ ಕತೆ ಹೇಳಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್​
ಪ್ರಧಾನಿ ಶೆಹಬಾಜ್​ ಶರೀಫ್

Updated on: May 11, 2025 | 12:46 AM

ಇಸ್ಲಾಮಾಬಾದ್​, ಮೇ 11: ಪಾಕಿಸ್ತಾನ (Pakistan) ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ (India) ಮೇಲೆ ಮತ್ತೆ ದಾಳಿ ಮಾಡಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ನಡುವೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್​ ಶರೀಫ್​ ಸುದ್ದಿಗೋಷ್ಠಿ ನಡೆಸಿ, “ನಮ್ಮ ದಾಳಿಯು ಶತ್ರುಗಳ (ಭಾರತ) ವಾಯುನೆಲೆ ಮತ್ತು ಮದ್ದುಗುಂಡುಗಳನ್ನು ನಾಶಪಡಿಸಿತು. ಅವರ ರಫೇಲ್ ಅನ್ನು ನಾವು ಹೊಡೆದುರುಳಿಸಿದ್ದೇವೆ. ನಾವು ಭಾರತದ ವಿರುದ್ಧ ಗೆದ್ದಿದ್ದೇವೆ ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ, ಕದನ ವಿರಾಮ ಉಲ್ಲಂಘನೆ ಬಗ್ಗೆ ಮಾತನಾಡದೆ, ತಮ್ಮ ಉದ್ದಟತನವನ್ನು ಮುಂದುವರೆಸಿದ್ದಾರೆ.

ಇದಕ್ಕೂ ಮೊದಲು ತನ್ನ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ ಶೆಹಬಾಜ್​ ಶರೀಫ್​, “ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ಚೀನಾ ಅಧ್ಯಕ್ಷ, ಚೀನಾದ ಜನರಿಗೆ ಧನ್ಯವಾದ ಹೇಳುತ್ತೇನೆ. ಸೌದಿ ಅರೇಬಿಯಾ, ಯುಎಇ, ಟರ್ಕಿ, ಕತಾರ್ ಮತ್ತು ಬ್ರಿಟನ್​​​​ ನಾಯಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಶಾಂತಿಯ ಪರ; ಕದನ ವಿರಾಮದ ಬಗ್ಗೆ ಪಾಕ್ ವಿದೇಶಾಂಗ ಸಚಿವ ಪ್ರತಿಕ್ರಿಯೆ

ಇದನ್ನೂ ಓದಿ
ಕದನವಿರಾಮ ಉಲ್ಲಂಘಿಸಿದ ಪಾಕಿಸ್ತಾನ; ತೀವ್ರ ಕ್ರಮಕ್ಕೆ ಭಾರತೀಯ ಸೇನೆಗೆ ಸೂಚನೆ
ಸೂಕ್ಷ್ಮ ಸಂದರ್ಭದಲ್ಲಿ ಏನೋನೋ ಮಾತನಾಡಿದ್ರೆ ಏನೇನು ಅವಾಂತರವಾಗುತ್ತೆ ನೋಡಿ
ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಜತೆ ಮಾತುಕತೆ
ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ

ಹಾಗೇ, “ನನ್ನ ಪ್ರೀತಿಯ ಸಹೋದರ, ರಾಜಕುಮಾರ ಮೊಹಮ್ಮದ್ ಬಿನ್ ಜಾಯೆದ್ ಮತ್ತು ಕತಾರ್‌ನ ನನ್ನ ಅತ್ಯಂತ ಆಪ್ತ ಸಹೋದರ ಅಮೀರ್ ಶೇಖ್ ತಮೀಮ್ ಮತ್ತು ಟರ್ಕಿಯ ಅಧ್ಯಕ್ಷ ತಯ್ಯಿಬ್ ಎರ್ಡೋಗನ್ ಅವರು ಪಾಕಿಸ್ತಾನವನ್ನು ಸಹೋದರರಂತೆ ಬೆಂಬಲಿಸಿದ್ದಕ್ಕಾಗಿ ಧನ್ಯವಾದ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:34 am, Sun, 11 May 25