AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿಒ ಸಮಿಟ್​ನಲ್ಲಿ ಭಯೋತ್ಪಾದನೆ ವಿರುದ್ಧ ವ್ಯಕ್ತವಾದ ಖಂಡನೆ; ಭಾರತದ ನಿಲುವಿಗೆ ಬೆಂಬಲ, ಪಾಕಿಸ್ತಾನಕ್ಕೆ ಪರೋಕ್ಷ ಮುಖಭಂಗ

SCO members support Indian sentiment on terrorism: ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಬಲವಾದ ಧ್ವನಿ ವ್ಯಕ್ತವಾಯಿತು. ನರೇಂದ್ರ ಮೋದಿ ಅವರು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಖಂಡಿಸಿದರು. ಎಸ್​ಸಿಒ ಸದಸ್ಯ ರಾಷ್ಟ್ರಗಳು ಇದಕ್ಕೆ ಬೆಂಬಲ ನೀಡಿವೆ. ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಪಹಲ್ಗಾಂ ದಾಳಿ ಘಟನೆಯನ್ನು ಬಲವಾಗಿ ಖಂಡಿಸಲಾಗಿದೆ.

ಎಸ್​ಸಿಒ ಸಮಿಟ್​ನಲ್ಲಿ ಭಯೋತ್ಪಾದನೆ ವಿರುದ್ಧ ವ್ಯಕ್ತವಾದ ಖಂಡನೆ; ಭಾರತದ ನಿಲುವಿಗೆ ಬೆಂಬಲ, ಪಾಕಿಸ್ತಾನಕ್ಕೆ ಪರೋಕ್ಷ ಮುಖಭಂಗ
ಎಸ್​ಸಿಒ ಸಮಿಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2025 | 11:52 AM

Share

ನವದೆಹಲಿ, ಸೆಪ್ಟೆಂಬರ್ 1: ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ (SCO Summit) ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೆಲ ದೇಶಗಳು ಹೇಗೆ ದ್ವಂದ್ವ ನೀತಿ ಅನುಸರಿಸುತ್ತಿವೆ ಎಂಬುದನ್ನು ಮೋದಿ ಎತ್ತಿ ತೋರಿಸಿದರು. ಮೋದಿ ಅವರ ಈ ಅನಿಸಿಕೆಗೆ ಎಸ್​ಸಿಒದ ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ. ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಈ ರಾಷ್ಟ್ರಗಳು ಖಂಡಿಸಿವೆ.

ಚೀನಾದ ಟಿಯಾಂಜಿನ್​ನಲ್ಲಿ ನಡೆದ ಈ ಸಮಿಟ್​ನಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕೂಡ ಪಾಲ್ಗೊಂಡಿದ್ದರು. ಅವರ ಎದುರೇ ಭಾರತವು ಭಯೋತ್ಪಾದನೆ ವಿರುದ್ಧ ವಿವಿಧ ರಾಷ್ಟ್ರಗಳ ಬೆಂಬಲ ಗಳಿಸಿದ್ದು ಅದಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವು ಎಂದು ವಿಶ್ಲೇಷಿಸಲಾಗಿದೆ.

ಇದನ್ನೂ ಓದಿ: ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದಿಂದ ಭಯೋತ್ಪಾದನೆ ವಿಚಾರ; ಚೀನಾದಿಂದಲೂ ಬೆಂಬಲ

ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಉಗ್ರ ದಾಳಿ ಘಟನೆ ಖಂಡನೆ

2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು ದಾಳಿ ಮಾಡಿ ಹಲವು ಮಂದಿಯನ್ನು ಗುಂಡಿಟ್ಟು ಬಲಿಪಡೆದಿದ್ದರು. ಶಾಂಘೈ ಸಹಕಾರ ಸಂಘಟನೆಯ ವಿವಿಧ ಸದಸ್ಯ ದೇಶಗಳು ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಘಟನೆಯನ್ನು ಬಲವಾಗಿ ಖಂಡಿಸಿವೆ.

‘ಸದಸ್ಯ ದೇಶಗಳು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಬಲವಾಗಿ ಖಂಡಿಸಿವೆ. ಮೃತರು ಮತ್ತು ಗಾಯಾಳುಗಳಿಗೆ ಸಾಂತ್ವನ ವ್ಯಕ್ತಪಡಿಸಿವೆ. ಇಂಥ ದಾಳಿಗಳನ್ನು ಎಸಗಿದವರು, ಬೆಂಬಲ ನೀಡಿದವರಿಗೆ ಶಿಕ್ಷೆಯಾಗಬೇಕು’ ಎಂದು ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ ನರೇಂದ್ರ ಮೋದಿ ಅವರು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಸಭೆಯಲ್ಲಿ ಪ್ರಸ್ತಾಪಿಸಿ ತೀವ್ರವಾಗಿ ಖಂಡಿಸಿದ್ದರು. ‘ಪಹಲ್ಗಾಂ ಘಟನೆಯು ಭಾರತದ ಆತ್ಮದ ಮೇಲೆ ನಡೆದ ದಾಳಿ ಮಾತ್ರವಲ್ಲ, ಮಾನವೀಯತೆನ್ನು ನಂಬುವ ಪ್ರತಿಯೊಂದು ದೇಶಕ್ಕೂ ಎಸೆದ ಸವಾಲಾಗಿತ್ತು. ಕೆಲ ದೇಶಗಳು ಬಹಿರಂಗವಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ಹೇಗೆ ಒಪ್ಪುವುದು ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ’ ಎಂದು ಮೋದಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಪರಸ್ಪರ ನಂಬಿಕೆ, ಗೌರವದ ಮೇಲೆ ನಮ್ಮ ಸಂಬಂಧ ಮುಂದುವರೆಸಲು ಬದ್ಧ: ಜಿನ್​​ಪಿಂಗ್​​ಗೆ ಮೋದಿ ಸಂದೇಶ

ಎಸ್​ಸಿಒ ಶೃಂಗಸಭೆಯಲ್ಲಿ ಭಾರತ, ರಷ್ಯಾ ಮತ್ತು ಚೀನಾ ಶಕ್ತಿಗಳ ಸಮಾಗಮವಾಗಿತ್ತು. ನರೇಂದ್ರ ಮೋದಿ, ವ್ಲಾದಿಮಿರ್ ಪುಟಿನ್, ಷಿ ಜಿನ್​ಪಿಂಗ್ ಒಟ್ಟಿಗೆ ನಿಂತು ಮಾತನಾಡಿದರು. ಪುಟಿನ್ ಮತ್ತು ಮೋದಿ ನಡುವೆ ಹೆಚ್ಚಿನ ಆಪ್ತತೆ ಕಾಣಿಸಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೃತೀಯ ಜಗತ್ತಿನ ರಾಷ್ಟ್ರಗಳ ಶಕ್ತಿಗಳು ನಿರ್ದಿಷ್ಟ ಸಂದೇಶ ರವಾನಿಸಿದಂತೆ ಕಾಣುತ್ತಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್