AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಗಿಲ್‌ನಲ್ಲಿ ಮಡಿದ ಸ್ವಂತ ಸೈನಿಕರ ಶವಗಳನ್ನೇ ತಿರಸ್ಕರಿಸಿದ ದೇಶ ನಿಮ್ಮದು,ಪಾಕ್‌ಗೆ ಇತಿಹಾಸದ ಕರಾಳ ಸತ್ಯ ನೆನಪಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನದ ದ್ವಿಮುಖ ನೀತಿಯನ್ನು ಕಟುವಾಗಿ ಟೀಕಿಸಿದೆ. ಭಯೋತ್ಪಾದನೆಗೆ ಬೆಂಬಲ, ಅಲ್ಪಸಂಖ್ಯಾತರ ಹಕ್ಕುಗಳ ದಮನ ಮತ್ತು ಕಾರ್ಗಿಲ್ ಯುದ್ಧದಲ್ಲಿ ಸೈನಿಕರ ಶವಗಳನ್ನು ತಿರಸ್ಕರಿಸಿದ ಪಾಕಿಸ್ತಾನದ ಕರಾಳ ಸತ್ಯವನ್ನು ಭಾರತ ಬಯಲು ಮಾಡಿದೆ. ಸ್ವಂತ ದೇಶದ ಅಲ್ಪಸಂಖ್ಯಾತರನ್ನು ರಕ್ಷಿಸಲಾಗದ ಪಾಕ್, ಮಾನವ ಹಕ್ಕುಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕು ಹೊಂದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಕಾರ್ಗಿಲ್‌ನಲ್ಲಿ ಮಡಿದ ಸ್ವಂತ ಸೈನಿಕರ ಶವಗಳನ್ನೇ ತಿರಸ್ಕರಿಸಿದ ದೇಶ ನಿಮ್ಮದು,ಪಾಕ್‌ಗೆ ಇತಿಹಾಸದ ಕರಾಳ ಸತ್ಯ ನೆನಪಿಸಿದ ಭಾರತ
ಭಾವಿಕ
ನಯನಾ ರಾಜೀವ್
|

Updated on: Oct 23, 2026 | 8:59 AM

Share

ನ್ಯೂಯಾರ್ಕ್​, ಅಕ್ಟೋಬರ್ 23: ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಕುಮ್ಮಕ್ಕು ನೀಡುತ್ತಾ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮಾತನಾಡುತ್ತಿರುವ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ತೀವ್ರ ತಪರಾಕಿ ಹಾಕಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಪ್ರಥಮ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ನೆರೆ ರಾಷ್ಟ್ರದ ನಕಲಿ ಕಾಳಜಿ ಹಾಗೂ ಇಬ್ಬಗೆಯ ನೀತಿಯನ್ನು ಕಟು ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಜಾಗತಿಕ ದಕ್ಷಿಣದ (Global South) ದೇಶಗಳ ವಿರುದ್ಧ ಮಾತ್ರ ಪಕ್ಷಪಾತ ಹೊಂದಿರುವ ವಿಶ್ವಸಂಸ್ಥೆಯ ವಲಸಿಗರ ಮಾನವ ಹಕ್ಕುಗಳ ವಿಶೇಷ ವರದಿಯ ವಿಧಾನವನ್ನು ಭಾರತ ಇದೇ ವೇಳೆ ಬಲವಾಗಿ ತಿರಸ್ಕರಿಸಿದೆ.

ಸ್ವಂತ ಅಲ್ಪಸಂಖ್ಯಾತರನ್ನೇ ರಕ್ಷಿಸಲಾಗದ ವಿಫಲ ದೇಶ

ಪಾಕಿಸ್ತಾನದಲ್ಲಿ ಹಿಂದೂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಅಲ್ಪಸಂಖ್ಯಾತರ ಸಂಖ್ಯೆ ದಿನೇ ದಿನೆ ಕ್ಷೀಣಿಸುತ್ತಿದೆ. ಅವರ ಮೂಲಭೂತ ಹಕ್ಕುಗಳನ್ನು ನಿರಂತರವಾಗಿ ದಮನಿಸಲಾಗುತ್ತಿದೆ. ತನ್ನ ದೇಶದ ಅಲ್ಪಸಂಖ್ಯಾತರ ಸುರಕ್ಷತೆಯನ್ನೇ ಖಚಿತಪಡಿಸಿಕೊಳ್ಳಲು ಯೋಗ್ಯತೆಯಿಲ್ಲದ ರಾಷ್ಟ್ರವೊಂದು, ಭಾರತದಂತಹ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡುವ ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಮಂಗಳಾನಂದನ್ ಗುಡುಗಿದರು.

ಕಾರ್ಗಿಲ್ ಯುದ್ಧದ ಮುಖವಾಡ ಕಳಚಿದ ಭಾರತ

1999ರ ಕಾರ್ಗಿಲ್ ಯುದ್ಧದ ಕರಾಳ ಇತಿಹಾಸವನ್ನು ನೆನಪಿಸಿದ ಅವರು, “ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ತನ್ನದೇ ಸೇನೆಯ ಯೋಧರ ಮೃತದೇಹಗಳನ್ನು ಸ್ವೀಕರಿಸಲು ಹಿಂದೇಟು ಹಾಕಿ ನಿರಾಕರಿಸಿದ ನಾಚಿಕೆಗೇಡಿನ ಇತಿಹಾಸ ಪಾಕಿಸ್ತಾನಕ್ಕಿದೆ. ಅಂದು ಆ ಮೃತ ಸೈನಿಕರಿಗೆ ಇಸ್ಲಾಮಿಕ್ ವಿಧಿವಿಧಾನಗಳ ಪ್ರಕಾರ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದ್ದು ಭಾರತೀಯ ಸೇನೆ. ತನ್ನ ಸೈನಿಕರನ್ನೇ ಧಿಕ್ಕರಿಸಿದ ದೇಶ ಇಂದು ಸಮಾಧಿ, ಧರ್ಮ ಮತ್ತು ನಂಬಿಕೆಯ ಬಗ್ಗೆ ನಾಚಿಕೆಯಿಲ್ಲದೆ ಮಾತನಾಡುತ್ತಿರುವುದು ದೊಡ್ಡ ವಿಪರ್ಯಾಸ” ಎಂದು ಛೀಮಾರಿ ಹಾಕಿದರು.

ಪೋಸ್ಟ್​

ಭಯೋತ್ಪಾದನೆಗೆ ಬೆಂಬಲ

ಪಾಕಿಸ್ತಾನದಲ್ಲಿ ಮೋಸ್ಟ್ ವಾಂಟೆಡ್ ಉಗ್ರರು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಒಬ್ಬ ಭಯೋತ್ಪಾದಕ ಕೇವಲ ಅಮಾಯಕರನ್ನು ಕೊಲ್ಲುವುದು ಮಾತ್ರವಲ್ಲ, ಇಡೀ ರಾಷ್ಟ್ರದ ಶಾಂತಿ ಮತ್ತು ಸ್ವಾಸ್ಥ್ಯವನ್ನು ಹಾಳುಮಾಡುತ್ತಾನೆ. ಮಾನವನ ಅತ್ಯಂತ ಪವಿತ್ರವಾದ ‘ಬದುಕುವ ಹಕ್ಕನ್ನು’ ಕಸಿದುಕೊಳ್ಳುವ ಭಯೋತ್ಪಾದಕರ ಹಕ್ಕುಗಳಿಗಾಗಿ ವಿಶ್ವಸಂಸ್ಥೆಯ ವೇದಿಕೆಯಲ್ಲಿ ವಕಾಲತ್ತು ವಹಿಸುವವರಿಗೆ, ಆ ಭಯೋತ್ಪಾದನೆಯಿಂದ ಬಲಿಯಾದ ಮುಗ್ಧ ಜನರ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದಿರುವುದು ದುರಂತ ಎಂದರು.

ಜಮ್ಮು-ಕಾಶ್ಮೀರದ ಕುರಿತು ಪಾಕಿಸ್ತಾನ ಪದೇ ಪದೇ ಹಸ್ತಕ್ಷೇಪ ಮಾಡುವುದನ್ನು ತಳ್ಳಿಹಾಕಿದ ಅವರು, “ಭಾರತದ ಅವಿಭಾಜ್ಯ ಅಂಗವಾದ ಜಮ್ಮು-ಕಾಶ್ಮೀರದ ಬಗ್ಗೆ ಮಾತನಾಡುವುದನ್ನು ಬಿಟ್ಟು, ರಾವಲಕೋಟ್ ಸೇರಿದಂತೆ ತನ್ನ ಅಕ್ರಮ ಆಕ್ರಮಣದಲ್ಲಿರುವ ಪಾಕ್ ಆಕ್ರಮಿತ ಕಾಶ್ಮೀರದ (PoK) ಜನರ ಅಭಿವೃದ್ಧಿ ಮತ್ತು ಅಲ್ಲಿನ ದುಸ್ಥಿತಿಯ ಕಡೆಗೆ ಪಾಕಿಸ್ತಾನ ಗಮನಹರಿಸಲಿ” ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ: ಪಹಲ್ಗಾಮ್ ದಾಳಿ ಪ್ರಸ್ತಾಪಿಸಿ ಜಾಗತಿಕ ವೇದಿಕೆಯಲ್ಲಿ ಪಾಕ್ ವಿರುದ್ಧ ಭಾರತ ನೇರ ವಾಗ್ದಾಳಿ

ವಿಶ್ವಸಂಸ್ಥೆಯ ವರದಿಗೆ ಆಕ್ಷೇಪ

ಕೋವಿಡ್-19 ಸಾಂಕ್ರಾಮಿಕದ ಅವಧಿಯ ವಲಸಿಗರ ಸ್ಥಿತಿಗತಿಯ ಕುರಿತ ವರದಿಯನ್ನು ಪ್ರಶ್ನಿಸಿದ ಭಾರತ, “ಎಲ್ಲಾ ತಪ್ಪುಗಳು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲೇ ನಡೆದಿವೆ ಎಂಬಂತೆ ವರದಿ ಸಿದ್ಧಪಡಿಸಲಾಗಿದೆ. ಆದರೆ, ಅಭಿವೃದ್ಧಿ ಹೊಂದಿದ ಶ್ರೀಮಂತ ಪಾಶ್ಚಿಮಾತ್ಯ ದೇಶಗಳಲ್ಲಿ ಸಂಭವಿಸಿದ ಇದೇ ರೀತಿಯ ದುರಂತ ಸನ್ನಿವೇಶಗಳಿಗೆ ವರದಿಗಾರರು ಜಾಣಕುರುಡು ಪ್ರದರ್ಶಿಸಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ