ನಿಮ್ಮ ಭಯೋತ್ಪಾದನಾ ಕಾರ್ಖಾನೆ ಮುಚ್ಚಿ, ಪಿಒಕೆಯನ್ನು ತಕ್ಷಣವೇ ಖಾಲಿ ಮಾಡಿ, ವಿಶ್ವಸಂಸ್ಥೆಯಲ್ಲಿ ಪಾಕ್ಗೆ ಭಾರತ ಎಚ್ಚರಿಕೆ
ನಿಮ್ಮ ಭಯೋತ್ಪಾದನಾ ಕಾರ್ಖಾನೆಯನ್ನು ಮೊದಲು ಮುಚ್ಚಿ ಹಾಗೆಯೇ ಪಿಒಕೆಯನ್ನು ಮೊದಲು ಖಾಲಿ ಮಾಡಿ ಎಂದು ವಿಶ್ವಸಂಸ್ಥೆಯಲ್ಲಿ ಭಾರತವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ಕಾಶ್ಮೀರದ ರಾಗವನ್ನು ಮತ್ತೆ ಮತ್ತೆ ಹಾಡುತ್ತಿದ್ದ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿತ್ತು. ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರುಲ್ ಹಕ್ ಕಾಕರ್ ಮತ್ತೊಮ್ಮೆ ಕಾಶ್ಮೀರ ವಿಚಾರ ಕೆದಕಿದ್ದರು ಅಲ್ಲಿ ಮಿಲಿಟರಿ ಹಸ್ತಕ್ಷೇಪಕ್ಕೆ ಒತ್ತಾಯಿಸಿದ್ದರು. ಅದಕ್ಕೆ ಭಾರತ ಪ್ರತ್ಯುತ್ತರ ನೀಡಿದೆ.
ನಿಮ್ಮ ಭಯೋತ್ಪಾದನಾ ಕಾರ್ಖಾನೆಯನ್ನು ಮೊದಲು ಮುಚ್ಚಿ ಹಾಗೆಯೇ ಪಿಒಕೆಯನ್ನು ಮೊದಲು ಖಾಲಿ ಮಾಡಿ ಎಂದು ವಿಶ್ವಸಂಸ್ಥೆಯಲ್ಲಿ ಭಾರತವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ಕಾಶ್ಮೀರದ ರಾಗವನ್ನು ಮತ್ತೆ ಮತ್ತೆ ಹಾಡುತ್ತಿದ್ದ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿತ್ತು. ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರುಲ್ ಹಕ್ ಕಾಕರ್ ಮತ್ತೊಮ್ಮೆ ಕಾಶ್ಮೀರ ವಿಚಾರ ಕೆದಕಿದ್ದರು ಅಲ್ಲಿ ಮಿಲಿಟರಿ ಹಸ್ತಕ್ಷೇಪಕ್ಕೆ ಒತ್ತಾಯಿಸಿದ್ದರು. ಅದಕ್ಕೆ ಭಾರತ ಪ್ರತ್ಯುತ್ತರ ನೀಡಿದೆ.
ವಿಶ್ವಸಂಸ್ಥೆಯಲ್ಲಿ ಭಾರತದ ಪೆಟಲ್ ಗೆಹ್ಲೋಟ್ ಪಾಕಿಸ್ತಾನದ ಮಾತುಗಳನ್ನು ಆಲಿಸಿದ ಬಳಿಕ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ, ನಮ್ಮ ಆಂತರಿಕ ವಿಷಯಗಳಲ್ಲಿ ಮಾತನಾಡಲು ಪಾಕಿಸ್ತಾನಕ್ಕೆ ಹಕ್ಕಿಲ್ಲ. ಪಾಕಿಸ್ತಾನವು ಇತರರ ಆಂತರಿಕ ವ್ಯವಹಾರಗಳನ್ನು ಇಣುಕಿ ನೋಡುವುದಲ್ಲ, ಅದು ಮೊದಲು ತನ್ನ ದೇಶದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನೋಡಬೇಕು ಮತ್ತು ಅದನ್ನು ತಕ್ಷಣವೇ ನಿಲ್ಲಿಸಬೇಕು.
ಪಾಕಿಸ್ತಾನವು ಭಯೋತ್ಪಾದನಾ ಕಾರ್ಖಾನೆಯನ್ನು ಮೊದಲು ಮುಚ್ಚಬೇಕು, ಪಾಕ್ ಆಕ್ರಮಿತ ಕಾಶ್ಮೀರವನ್ನು ಬಿಟ್ಟು ಹೋಗಬೇಕು ಎಂದರು. ಮುಂಬೈ ದಾಳಿಯ ಸಂತ್ರಸ್ತರು 15 ವರ್ಷಗಳ ನಂತರವೂ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಭಯೋತ್ಪಾದಕರ ವಿರುದ್ಧ ನೀವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಹೇಳಿದ್ದಾರೆ.
ಪಾಕಿಸ್ತಾನ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಭದ್ರಕೋಟೆಯಾಗಿದೆ. ಅವರು ಪಾಕಿಸ್ತಾನವನ್ನು ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವನ್ನಾಗಿ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಭಾರತದ ವಿರುದ್ಧ ಪದೇ ಪದೇ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ. ಈ ವಿಷಯದಲ್ಲಿ ಪಾಕಿಸ್ತಾನದ ದಾಖಲೆ ತೀರಾ ಕಳಪೆಯಾಗಿದೆ ಎಂದರು.
ಮತ್ತಷ್ಟು ಓದಿ: ಭಾರತವನ್ನು ವಿಶ್ವವೇ ನೋಡುತ್ತಿದೆ, ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ: ಪಾಕ್ ಮಾಜಿ ಪ್ರಧಾನಿ
ಈ ವರ್ಷದ ಆಗಸ್ಟ್‌ನಲ್ಲಿ ಪಾಕಿಸ್ತಾನದ ಫೈಸಲಾಬಾದ್ ಜಿಲ್ಲೆಯ ಜರನ್‌ವಾಲಾದಲ್ಲಿ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರದ ವಿಷಯವನ್ನು ಅವರು ಪ್ರಸ್ತಾಪಿಸಿದರು. ಹಿಂಸಾಚಾರದಲ್ಲಿ ಒಟ್ಟು 19 ಚರ್ಚ್ ಗಳ ಮೇಲೆ ದಾಳಿ ನಡೆಸಲಾಗಿದ್ದು, 89 ಕ್ರೈಸ್ತರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೆಟಲ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಅಹ್ಮದೀಯ ಸಮುದಾಯದ ಜನರ ವಿರುದ್ಧ ಇದೇ ರೀತಿಯ ಅಪರಾಧವನ್ನು ಮಾಡಲಾಗಿದೆ, ಅವರ ಪೂಜಾ ಸ್ಥಳಗಳನ್ನು ಪಾಕಿಸ್ತಾನದಲ್ಲಿ ಕೆಡವಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ, ಸಿಖ್ ಮತ್ತು ಕ್ರಿಶ್ಚಿಯನ್ ಮಹಿಳೆಯರ ಸ್ಥಿತಿ ವಿಶ್ವದಲ್ಲೇ ಅತ್ಯಂತ ಕೆಟ್ಟದಾಗಿದೆ. ಇದನ್ನು ಸ್ವತಃ ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ವರದಿಯ ಪ್ರಕಾರ, ಪಾಕಿಸ್ತಾನದಲ್ಲಿ ಪ್ರತಿ ವರ್ಷ ಸುಮಾರು 1000 ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅಪಹರಿಸಿ ಬಲವಂತವಾಗಿ ಮತಾಂತರ ಮಾಡಿ ಮದುವೆಯಾಗುತ್ತಾರೆ ಎಂದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ