AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ತನ್ನ ಯುದ್ಧ ವಿಮಾನಗಳ ಅವಶೇಷಗಳಡಿ ಹೂತುಹೋಗುತ್ತದೆ’; ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ

ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು. ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸದಿದ್ದರೆ ಪಾಕಿಸ್ತಾನವನ್ನು ವಿಶ್ವದ ಭೂಪಟದಿಂದಲೇ ಅಳಿಸಿಹಾಕುತ್ತೇವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾನುವಾರ ಪ್ರತಿಕ್ರಿಯಿಸಿದ್ದಾರೆ. ಭಾರತವು "ತನ್ನ ವಿಮಾನಗಳ ಅವಶೇಷಗಳ ಅಡಿಯಲ್ಲಿ ಹೂತುಹೋಗುತ್ತದೆ" ಎಂದು ಅವರು ಬೆದರಿಕೆ ಹಾಕಿದ್ದಾರೆ.

'ಭಾರತ ತನ್ನ ಯುದ್ಧ ವಿಮಾನಗಳ ಅವಶೇಷಗಳಡಿ ಹೂತುಹೋಗುತ್ತದೆ'; ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ
Khawaja Asif
ಸುಷ್ಮಾ ಚಕ್ರೆ
|

Updated on: Oct 05, 2025 | 7:32 PM

Share

ಇಸ್ಲಮಾಬಾದ್, ಅಕ್ಟೋಬರ್ 5: “ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ, ನಮ್ಮ ಪಡೆಗಳು ಎಲ್ಲ ಮಿತಿಯನ್ನೂ ಮೀರಿ ಗಡಿಯನ್ನು ದಾಟಬಹುದು” ಎಂದು ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿತ್ತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ (Pakistan) ಕೂಡ ಭಾರತಕ್ಕೆ ಎಚ್ಚರಿಕೆ ನೀಡಿದೆ. ಭಾರತದ ನಿರಾಕರಣೆಯ ನಡುವೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ 6 ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬ ಹೇಳಿಕೆಯನ್ನು ಪಾಕಿಸ್ತಾನ ಮತ್ತೆ ಪುನರುಚ್ಚರಿಸಿದೆ.

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದ ಎಚ್ಚರಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಭಾರತವು ಅದರ ಯುದ್ಧ ವಿಮಾನಗಳ ಅವಶೇಷಗಳಡಿಯಲ್ಲಿ ಹೂತುಹೋಗಲಿದೆ” ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಆಸಿಫ್, ಭಾರತದ ಮಿಲಿಟರಿ ಮತ್ತು ರಾಜಕೀಯ ನಾಯಕರ ಇತ್ತೀಚಿನ ಹೇಳಿಕೆಗಳು ಅವರ ಕಳೆದುಹೋದ ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸುವ ವಿಫಲ ಪ್ರಯತ್ನ ಎಂದು ಟೀಕಿಸಿದ್ದಾರೆ. ದೇಶೀಯ ಪ್ರತಿಕ್ರಿಯೆಯಿಂದ ಜನರನ್ನು ಬೇರೆಡೆಗೆ ಸೆಳೆಯಲು ಸರ್ಕಾರವು ಉದ್ವಿಗ್ನತೆಯನ್ನು ಹುಟ್ಟುಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನದ 5 ಯುದ್ಧ ವಿಮಾನ ಪತನ; ಐಎಎಫ್ ಮುಖ್ಯಸ್ಥ ಮಹತ್ವದ ಮಾಹಿತಿ

“ಪಾಕಿಸ್ತಾನ ಅಲ್ಲಾಹನ ಹೆಸರಿನಲ್ಲಿ ನಿರ್ಮಿಸಲಾದ ರಾಷ್ಟ್ರ, ನಮ್ಮ ರಕ್ಷಕರು ಅಲ್ಲಾಹನ ಸೈನಿಕರು. ಈ ಬಾರಿ, ಭಾರತವೇನಾದರೂ ನಮ್ಮ ತಂಟೆಗೆ ಬಂದರೆ ಅದು ತನ್ನ ಯುದ್ಧವಿಮಾನಗಳ ಭಗ್ನಾವಶೇಷಗಳ ಅಡಿಯಲ್ಲಿ ಹೂತುಹೋಗಲಿದೆ. ಅಲ್ಲಾಹು ಅಕ್ಬರ್,” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಮೇ 7ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ, ಭಯೋತ್ಪಾದಕ ಮೂಲಸೌಕರ್ಯಗಳನ್ನು ಹೊಡೆದುರುಳಿಸಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತ್ತು. ಇದಾದ ನಂತರ, ಪಾಕಿಸ್ತಾನವು ಪುರಾವೆಗಳಿಲ್ಲದೆ ಪದೇ ಪದೇ ತಾನೇ ವಿಜಯ ಸಾಧಿಸಿರುವುದಾಗಿ ಹೇಳಿಕೊಂಡು ತಿರುಗಾಡುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ