AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುತಾತ್ಮರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ; ಭಾರತಕ್ಕೆ ಪಾಕಿಸ್ತಾನ ಪ್ರಧಾನಿ ಸವಾಲು

ಮಂಗಳವಾರ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿತ್ತು. ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಭಾರತ ವೈಮಾನಿಕ ದಾಳಿಯ ಮೂಲಕ ಧ್ವಂಸಗೊಳಿಸಿತ್ತು. ಈ ಬಗ್ಗೆ ಇಂದು ಪಾಕಿಸ್ತಾನವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಶಹಬಾಜ್ ಷರೀಫ್, ಭಾರತೀಯ ಸೇನೆ ದಾಳಿಗೆ ಪಾಕಿಸ್ತಾನ ತಕ್ಕ ಪ್ರತ್ಯುತ್ತರ ನೀಡಲಿದೆ, ಪಾಕಿಸ್ತಾನ ಮುಂದಿಟ್ಟ ಹೆಜ್ಜೆಯನ್ನು ಎಂದಿಗೂ ಹಿಂದಿಡುವುದಿಲ್ಲ ಎಂದು ದರ್ಪದ ಹೇಳಿಕೆ ನೀಡಿದ್ದಾರೆ.

ಹುತಾತ್ಮರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ; ಭಾರತಕ್ಕೆ ಪಾಕಿಸ್ತಾನ ಪ್ರಧಾನಿ ಸವಾಲು
Pakistan Pm
ಸುಷ್ಮಾ ಚಕ್ರೆ
|

Updated on: May 07, 2025 | 11:18 PM

Share

ಇಸ್ಲಾಮಾಬಾದ್, ಮೇ 7: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವೈಮಾನಿಕ ದಾಳಿ ನಡೆಸಿದ್ದ ಭಾರತ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಕಾಶ್ಮೀರದ ಎಲ್​ಒಸಿ ಬಳಿ ನಾಗರಿಕರ ಮೇಲೆ ಶೆಲ್ ದಾಳಿ ನಡೆಸಿ 15 ಜನರನ್ನು ಕೊಂದಿದೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತ ಪಾಕಿಸ್ತಾನದ ನಾಗರಿಕರನ್ನು ಟಾರ್ಗೆಟ್ ಮಾಡದೆ ಕೇವಲ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ್ದರೂ ಪಾಕಿಸ್ತಾನ ಅಮಾಯಕ ಜನರ ಪ್ರಾಣ ತೆಗೆಯುವುದನ್ನು ನಿಲ್ಲಿಸಿಲ್ಲ. ಇದೆಲ್ಲದರ ನಡುವೆ ಭಾರತದ ದಾಳಿ ಹೇಡಿತನದ್ದು ಎಂದು ಪಾಕಿಸ್ತಾನ ಟೀಕಿಸಿದೆ.

ಇಂದು ಪಾಕಿಸ್ತಾನವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಶಹಬಾಜ್ ಷರೀಫ್, ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ‘ಹೇಡಿತನದ’ ದಾಳಿಯ ಪರಿಣಾಮವನ್ನು ಭಾರತ ಅನುಭವಿಸಲೇಬೇಕು ಎಂದು ಪಾಕಿಸ್ತಾನ ಪ್ರಧಾನಿ ಹೇಳಿದ್ದಾರೆ. ಹಾಗೇ, ಈ ದಾಳಿಗೆ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ.

ಇದನ್ನೂ ಓದಿ: ಭಾರತದ ದಾಳಿ ಬಗ್ಗೆ ಮಹಿಳಾ ಅಧಿಕಾರಿಗಳಿಂದಲೇ ಮೋದಿ ಸುದ್ದಿಗೋಷ್ಠಿ ನಡೆಸಿದ್ದೇಕೆ?

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
Image
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
Image
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
Image
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಭಾರತದ ವಾಯುಪಡೆಯ ರಾತ್ರಿಯ ಕ್ಷಿಪಣಿ ದಾಳಿಯ ನಂತರ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ರೀತಿ ದಾಳಿ ಮಾಡಿದ ನಂತರ ಬಹುಶಃ ನಾವು ಹಿಂದೆ ಸರಿಯುತ್ತೇವೆ ಎಂದು ಭಾರತ ಭಾವಿಸಿರಬಹುದು. ಆದರೆ ಇದು ಧೈರ್ಯದ ಮೇಲೆ ನಿರ್ಮಿಸಲಾದ ರಾಷ್ಟ್ರ ಎಂಬ ಅಂಶವನ್ನು ಅವರು ಮರೆತಿದ್ದಾರೆ. ನಾವು ಮುಂದಿಟ್ಟ ಹೆಜ್ಜೆಯನ್ನು ಹಿಂದಿಡುವ ಪ್ರಶ್ನೆಯೇ ಇಲ್ಲ. ಇದರ ಪರಿಣಾಮವನ್ನು ಭಾರತ ಅನುಭವಿಸಬೇಕಾಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದೊಳಗೆ ನುಗ್ಗಿ ಹೊಡೆದ ಭಾರತ, ಆಪರೇಷನ್ ಸಿಂಧೂರಕ್ಕೆ ಜಾಗತಿಕ ಬೆಂಬಲ, ಗಡಿಯಲ್ಲಿ ಮತ್ತೆ ಪಾಕ್ ಆಕ್ರಮಣ; ಇಂದಿನ ಬೆಳವಣಿಗೆಗಳಿವು

ಪಾಕಿಸ್ತಾನದಲ್ಲಿ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಉಗ್ರರನ್ನು ಹುತಾತ್ಮರು ಎಂದಿರುವ ಪಾಕಿಸ್ತಾನ ಪ್ರಧಾನಿ, ಈ ಹುತಾತ್ಮರ ಸಾವಿಗೆ ನಾವು ಸೇಡು ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಹುತಾತ್ಮರ ಪ್ರತಿ ಹನಿ ರಕ್ತಕ್ಕೂ ನಾವು ಸೇಡು ತೀರಿಸಿಕೊಳ್ಳುತ್ತೇವೆ. ಪಾಕಿಸ್ತಾನಕ್ಕೆ ಸೂಕ್ತ ಉತ್ತರವನ್ನು ಹೇಗೆ ನೀಡಬೇಕೆಂದು ತಿಳಿದಿದೆ. ಇಡೀ ರಾಷ್ಟ್ರವು ತನ್ನ ಧೈರ್ಯಶಾಲಿ ಸಶಸ್ತ್ರ ಪಡೆಗಳಿಗೆ ನಮಸ್ಕರಿಸುತ್ತದೆ. ಪಾಕಿಸ್ತಾನ ಸೇನೆಯು ಭಾರತದ ದಾಳಿಗೆ ಸಿದ್ಧವಾಗಿದೆ ಎಂದು ಹೇಳಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ