YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
ಯೂಟ್ಯೂಬ್​ನ ನೂತನ ಸಿಇಒ ನೀಲ್ ಮೋಹನ್Image Credit source: Economic Times
Follow us
|

Updated on:Feb 17, 2023 | 7:34 AM

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 17 February 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ