ಬ್ರಿಕ್ಸ್ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಆಗಸ್ಟ್ 22) ಸಂಜೆ 5.15ಕ್ಕೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್​​ಗೆ  ಬಂದಿಳಿದಿದ್ದಾರೆ.ಆಗ ಈ ಸಂದರ್ಭದಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಅಧ್ಯಕ್ಷ ಸಿರಿಲ್ ರಮಾಫೋಸಾ ಅವರ ಆಹ್ವಾನದ ಮೇರೆಗೆ ಇಲ್ಲಿಗೆ ಬಂದಿರುವ ಪ್ರಧಾನಿ ಮೋದಿ ಅವರು ಆಗಸ್ಟ್ 22 ರಿಂದ 24 ರವರೆಗೆ ಇರಲಿದ್ದಾರೆ.

ಬ್ರಿಕ್ಸ್ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
PM Modi in BRICS
Follow us
ರಶ್ಮಿ ಕಲ್ಲಕಟ್ಟ
| Updated By: Digi Tech Desk

Updated on:Aug 23, 2023 | 9:22 AM

ಜೋಹಾನ್ಸ್‌ಬರ್ಗ್‌ ಆಗಸ್ಟ್ 22: ಬ್ರಿಕ್ಸ್ ಸಭೆಯಲ್ಲಿ (BRICS) ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ (South Africa) ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಆಫ್ರಿಕನ್ ನೃತ್ಯಗಾರರು ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದ್ದು ಭಾರತೀಯ ಶೈಲಿಯ ಡ್ರಮ್ಸ್ ಮತ್ತು ವಾದ್ಯಗಳನ್ನು ನುಡಿಸಲಾಯಿತು. ಕೆಲವು ನಿಮಿಷಗಳ ಕಾಲ ಅಲ್ಲಿ ನಿಂತ ಮೋದಿ, ಆಫ್ರಿಕನ್ ನೃತ್ಯವನ್ನು ಆನಂದಿಸಿದರು. ಈ ವೇಳೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡುತ್ತಲೇ ಇದ್ದರು. ಅದೇ ಸಮಯದಲ್ಲಿ, ಅವರಿಗೆ ವಿಶೇಷ ಆಧ್ಯಾತ್ಮಿಕ ಸ್ವಾಗತವನ್ನು ನೀಡಲಾಯಿತು. ಅದನ್ನು ಪ್ರಧಾನಿ ಬಹಳ ಎಚ್ಚರಿಕೆಯಿಂದ ಆಲಿಸಿದರು. ಈ ಸಂದರ್ಭದಲ್ಲಿ, ಅವರೊಂದಿಗೆ ಅನೇಕ ಸಾಧುಗಳೂ ಉಪಸ್ಥಿತರಿದ್ದರು.

ಉತ್ತಮ ಸಂಖ್ಯೆಯಲ್ಲಿ ನೆರೆದಿದ್ದ ಭಾರತೀಯ ಸಮುದಾಯದ ಜನರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಅವರಲ್ಲಿ ಕೆಲವು ಮಕ್ಕಳಿದ್ದರು. ಅವರು ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಅಲ್ಲಿಗೆ ಬಂದಿದ್ದರು. ಅವರೂ ಯಾರನ್ನೂ ಮೋದಿ ನಿರಾಸೆಗೊಳಿಸಲಿಲ್ಲ. ಭಾರತೀಯ ಸಮುದಾಯದ ಮಹಿಳೆಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದಾರೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ವಿಡಿಯೊವನ್ನು ಟ್ವೀಟ್ ಮಾಡಿದ್ದು, ಇದೊಂದು ವಿಶೇಷ ಕ್ಷಣ ಎಂದು ಬಣ್ಣಿಸಿದ್ದಾರೆ.

ಬಳಿಕ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಅನಿವಾಸಿಗಳು ಮೋದಿ ಅವರನ್ನು ಕಂಡೊಡನೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗಿದರು. ದಕ್ಷಿಣ ಆಫ್ರಿಕಾ ಗಣರಾಜ್ಯದ ಉಪಾಧ್ಯಕ್ಷ ಪಾಲ್ ಶಿಪೋಕೋಸಾ ಮಶಾತಿಲೆ ಅವರು ಮೋದಿಯವರನ್ನು ಔಪಚಾರಿಕವಾಗಿ ಸ್ವಾಗತಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮಾತ್ರವಲ್ಲದೆ ಜೋಹಾನ್ಸ್‌ಬರ್ಗ್‌ನ ಸ್ಯಾಂಡ್‌ಟನ್ ಸನ್ ಹೋಟೆಲ್‌ನ ಹೊರಗಡೆಯೂ ಭಾರತೀಯರು ನರೇಂದ್ರ ಮೋದಿಯವರನ್ನು ಡ್ರಮ್ಸ್ ಮತ್ತು ಕೆಲವು ಸಂಗೀತ ವಾದ್ಯಗಳೊಂದಿಗೆ ಸ್ವಾಗತಿಸಿದರು. ಸ್ವಾಮೀಜಿಗಳು, ಜೈನ ಮುನಿಗಳು ಸೇರಿದಂತೆ ಹಲವರು ದೇವರ ಗೀತೆಗಳನ್ನು ಹಾಡಿ ಸ್ವಾಗತಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಪ್ರಧಾನಿಯನ್ನು ಅದ್ಭುತ ನಾಯಕ ಎಂದು ಬಣ್ಣಿಸಿದ್ದಾರೆ. ಅವರು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ, ಆದ್ದರಿಂದ ನಾವೆಲ್ಲರೂ ಇಲ್ಲಿಗೆ ಬಂದು ಸ್ವಾಗತಿಸಲು ಬಯಸಿದ್ದೇವೆ ಎಂದು ಮಹಿಳೆ ಹೇಳಿದ್ದಾರೆ.

ಜೋಹಾನ್ಸ್ ಬರ್ಗ್​​ಗೆ ಬಂದಿಳಿದ ಪ್ರಧಾನಿ

15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಆಗಸ್ಟ್ 22) ಸಂಜೆ 5.15ಕ್ಕೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್​​ಗೆ  ಬಂದಿಳಿದಿದ್ದಾರೆ.ಆಗ ಈ ಸಂದರ್ಭದಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಅಧ್ಯಕ್ಷ ಸಿರಿಲ್ ರಮಾಫೋಸಾ ಅವರ ಆಹ್ವಾನದ ಮೇರೆಗೆ ಇಲ್ಲಿಗೆ ಬಂದಿರುವ ಪ್ರಧಾನಿ ಮೋದಿ ಅವರು ಆಗಸ್ಟ್ 22 ರಿಂದ 24 ರವರೆಗೆ ಇರಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಭಾರತೀಯ ಸಮುದಾಯದ ಹೆಚ್ಚಿನ ಸಂಖ್ಯೆಯ ಜನರು ವಿಮಾನ ನಿಲ್ದಾಣವನ್ನು ತಲುಪಿದರು. ಈ ಸಂದರ್ಭದಲ್ಲಿ ಮೋದಿ ಅವರು ಜನರಿಗೆ ಹಸ್ತಲಾಘವ ಸಲ್ಲಿಸಿದರು.

ದಕ್ಷಿಣ ಆಫ್ರಿಕಾಕ್ಕೆ ತೆರಳುವ ಮೊದಲು ಸಾಂಸ್ಥಿಕ ಬೆಳವಣಿಗೆಗಳನ್ನು ಪರಿಶೀಲಿಸಲು ಮತ್ತು ಭವಿಷ್ಯದ ಸಹಕಾರದ ಕ್ಷೇತ್ರಗಳನ್ನು ಗುರುತಿಸಲು ಸದಸ್ಯ ರಾಷ್ಟ್ರಗಳಿಗೆ ಇದು ಉಪಯುಕ್ತ ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಬ್ರಿಕ್ಸ್ ಗುಂಪಿನಲ್ಲಿ ಭಾರತದೊಂದಿಗೆ ರಷ್ಯಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ಸೇರಿವೆ. 2019ರ ನಂತರ ಬ್ರಿಕ್ಸ್ ನಾಯಕರ ಮುಖಾಮುಖಿ ಸಭೆ ಇದಾಗಿದೆ.

ಪ್ರಧಾನಿ ಮೋದಿಯವರ ಕಾರ್ಯಕ್ರಮ ಹೀಗಿದೆ

ನಾನು ‘ಬ್ರಿಕ್ಸ್-ಆಫ್ರಿಕಾ ಔಟ್ರೀಚ್’ ಮತ್ತು ‘ಬ್ರಿಕ್ಸ್ ಪ್ಲಸ್ ಡೈಲಾಗ್’ ಕಾರ್ಯಕ್ರಮಗಳಲ್ಲಿ ಸಹ ಭಾಗವಹಿಸುತ್ತೇನೆ. ಬ್ರಿಕ್ಸ್ ಶೃಂಗಸಭೆಯು ‘ಗ್ಲೋಬಲ್ ಸೌತ್’ ಮತ್ತು ಇತರ ಅಭಿವೃದ್ಧಿ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಚರ್ಚಿಸಲು ವೇದಿಕೆಯನ್ನು ಒದಗಿಸುತ್ತದೆ. ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನಿತ ಹಲವು ಅತಿಥಿ ರಾಷ್ಟ್ರಗಳೊಂದಿಗೆ ಸಂವಾದ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು. ಜೋಹಾನ್ಸ್‌ಬರ್ಗ್‌ನಲ್ಲಿ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ದಕ್ಷಿಣ ಆಫ್ರಿಕಾ ಮಹಿಳೆ; ವಿಡಿಯೋ ಇಲ್ಲಿದೆ

ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ನಡುವೆ ಚರ್ಚೆ ನಡೆಯಲಿದೆಯೇ?

ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಏನು ಚರ್ಚಿಸಲಿದ್ದಾರೆ? ಈ ಪ್ರಶ್ನೆಯ ಕುರಿತು ಮಾತನಾಡಿರುವ ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಅವರು ಸೋಮವಾರ (ಆಗಸ್ಟ್ 21) ಪ್ರಧಾನಿ ಮೋದಿಯವರ ದ್ವಿಪಕ್ಷೀಯ ಸಭೆಗಳು ಇನ್ನೂ ಅಂತಿಮ ಹಂತದಲ್ಲಿವೆ.

ಅಜೆಂಡಾ ಏನು?

ಬ್ರಿಕ್ಸ್ ವಿಸ್ತರಣೆಯ ಕುರಿತು ಮಾತನಾಡಿದ ಕ್ವಾತ್ರಾ, ಬ್ರಿಕ್ಸ್ ವಿಸ್ತರಣೆಗೆ ಬಂದಾಗ, ನಮ್ಮ ಉದ್ದೇಶ ಸಕಾರಾತ್ಮಕವಾಗಿದೆ. ಬ್ರಿಕ್ಸ್ ವಿಸ್ತರಣೆಯು ಶೃಂಗಸಭೆಯಲ್ಲಿ ಪ್ರಮುಖ ಕಾರ್ಯಸೂಚಿಯ ಅಂಶವಾಗಿದೆ. ಗುಂಪಿನ ಸದಸ್ಯತ್ವಕ್ಕಾಗಿ ಸುಮಾರು 23 ದೇಶಗಳು ಅರ್ಜಿ ಸಲ್ಲಿಸಿವೆ.

BRICS ಕೊಡುಗೆ ಏನು?

ಸುದ್ದಿ ಸಂಸ್ಥೆ PTI ಪ್ರಕಾರ, BRICS ನಲ್ಲಿ ಸೇರಿಸಲಾದ ದೇಶಗಳ ಒಟ್ಟು ಜನಸಂಖ್ಯೆಯು ವಿಶ್ವ ಜನಸಂಖ್ಯೆಗೆ 41 ಪ್ರತಿಶತ, ವಿಶ್ವ GDP ಗೆ 31.5 ಪ್ರತಿಶತ ಮತ್ತು ವಿಶ್ವ ವ್ಯಾಪಾರಕ್ಕೆ 16 ಪ್ರತಿಶತ ಕೊಡುಗೆ ನೀಡುತ್ತದೆ.

ದಕ್ಷಿಣ ಆಫ್ರಿಕಾ ಪ್ರವಾಸದ ನಂತರ ಪ್ರಧಾನಿ ಮೋದಿ ಎಲ್ಲಿಗೆ ಹೋಗುತ್ತಾರೆ?

ದಕ್ಷಿಣ ಆಫ್ರಿಕಾದ ನಂತರ, ಪ್ರಧಾನಿ ಮೋದಿ ಆಗಸ್ಟ್ 25 ರಂದು ಅಥೆನ್ಸ್ಗೆ ತಮ್ಮ ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. ಈ ಮೂಲಕ ಕಳೆದ 40 ವರ್ಷಗಳಲ್ಲಿ ಗ್ರೀಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ಮೋದಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Tue, 22 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್