Video: ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ
ಅಮೆರಿಕದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಟೆಕ್ಸಾಸ್‌ನಲ್ಲಿ, ವಾಷಿಂಗ್ ಮೆಷಿನ್‌ಗೆ ಸಂಬಂಧಿಸಿದ ಜಗಳದಲ್ಲಿ ಭಾರತ ಮೂಲದ 50 ವರ್ಷದ ಮೋಟೆಲ್ ಮ್ಯಾನೇಜರ್‌ನನ್ನು ಅವರ ಪತ್ನಿ ಮತ್ತು ಮಗನ ಮುಂದೆಯೇ ಕೊಲೆ ಮಾಡಲಾಗಿದೆ. ಶಂಕಿತನನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಆರೋಪಿಯ ಮೇಲೆ ಕ್ರಿಮಿನಲ್ ದಾಖಲೆ ಇದೆ. ಆತ ಮೃತರ ಸಹೋದ್ಯೋಗಿ ಎಂದು ಹೇಳಲಾಗುತ್ತಿದೆ. ಈ ಘಟನೆ ಬುಧವಾರ ಬೆಳಗ್ಗೆ ಡಲ್ಲಾಸ್‌ನ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ಡಲ್ಲಾಸ್, ಸೆಪ್ಟೆಂಬರ್ 12: ಅಮೆರಿಕದ ಡಲ್ಲಾಸ್ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ.
ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ ಎಂದು ಗುರುತಿಸಿದ್ದು ಆತನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಜೈಲು ದಾಖಲೆಗಳ ಪ್ರಕಾರ, ಆರೋಪಿಗೆ ಬಾಂಡ್ ರಹಿತ ಬಂಧನ ಆದೇಶ ಹೊರಡಿಸಲಾಗಿದೆ.
ನಾಗಮಲ್ಲಯ್ಯ, ತನ್ನ ಸಹೋದ್ಯೋಗಿ ಯೋರ್ದಾನಿಸ್ ಕೋಬೋಸ್-ಮಾರ್ಟಿನೆಜ್ ಜೊತೆ ಒಡೆದ ವಾಷಿಂಗ್ ಮೆಷಿನ್ ಬಗ್ಗೆ ನಡೆದ ವಾಗ್ವಾದದ ನಂತರ ಹತ್ಯೆ ಮಾಡಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಕೋಬೋಸ್-ಮಾರ್ಟಿನೆಜ್ ಚಾಕುವನ್ನು ಹೊರತೆಗೆದು ನಾಗಮಲ್ಲಯ್ಯ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.
ಮತ್ತಷ್ಟು ಓದಿ:
ಪಾರ್ಕಿಂಗ್ ವಿವಾದ, ಉತ್ತರ ಪ್ರದೇಶದಲ್ಲಿ ಶಿಕ್ಷಕನ ಬರ್ಬರ ಹತ್ಯೆ, ಮೂವರ ಬಂಧನ
ನಾಗಮಲ್ಲಯ್ಯ ಅವರು ತನ್ನ ಹೆಂಡತಿ ಮತ್ತು 18 ವರ್ಷದ ಮಗ ಇದ್ದ ಮೋಟೆಲ್ ಕಚೇರಿಗೆ ಓಡಿಹೋದರು, ಶಂಕಿತನು ಅವರನ್ನು ಹಿಂಬಾಲಿಸಿ ಅವನ ಮೇಲೆ ಹಲ್ಲೆ ಮಾಡಿದ್ದಾನೆ. ಕೋಬೋಸ್-ಮಾರ್ಟಿನ್ ಹೂಸ್ಟನ್‌ನಲ್ಲಿ ವಾಹನ ಕಳ್ಳತನ ಮತ್ತು ಹಲ್ಲೆ ಸೇರಿದಂತೆ ಅಪರಾಧ ಇತಿಹಾಸವನ್ನು ಹೊಂದಿದ್ದಾನೆ. ನಾಗಮಲ್ಲಯ್ಯ ತುಂಬಾ ಮೃದು ಸ್ವಭಾವದವರಾಗಿದ್ದರು. ಈ ಊಹಿಸಲಾಗದ ಘಟನೆ ಹಠಾತ್ ಮಾತ್ರವಲ್ಲ, ಇದು ಅತ್ಯಂತ ಆಘಾತ ಉಂಟು ಮಾಡಿದೆ ಎಂದು ಸ್ನೇಹಿತರು ಹೇಳಿದ್ದಾರೆ.
ವಿಡಿಯೋ
🚨 A man was beheaded over a washing machine in Dallas. 50-year-old Indian-American, Chandra Nagamallaiah, lost his life to cold-blooded racism.
Inhuman. Heartless. Unforgivable.
And yet, some Indians will a find a way to justify this https://t.co/gDF0USzMea
— Aagastya_Thaker (@aagastyat) September 11, 2025
ಹೆಂಡತಿ ಮತ್ತು ಮಗ ಮಧ್ಯಪ್ರವೇಶಿಸಲು ಓಡಿಹೋಗಿದ್ದಾರೆ , ಆದರೆ ಆರೋಪಿ ಅವರನ್ನು ಪಕ್ಕಕ್ಕೆ ತಳ್ಳಿದ್ದಾನೆ . ನಾಗಮಲ್ಲಯ್ಯ ಅವರ ಶಿರಚ್ಛೇದ ಮಾಡಿದ್ದಾನೆ ಮತ್ತು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಎಲ್ಲವೂ ದಾಖಲಾಗಿದೆ. ಡಲ್ಲಾಸ್ ಅಗ್ನಿಶಾಮಕ ದಳದ ಸಿಬ್ಬಂದಿ ಆರೋಪಿಯನ್ನು ಬೆನ್ನಟ್ಟಿದ್ದರು. ಪೊಲೀಸರು ಬಂದಾಗ, ಆರೋಪಿಯನ್ನು ಸ್ಥಳದಲ್ಲೇ ಬಂಧಿಸಲಾಯಿತು. ವಿಚಾರಣೆಯ ಸಮಯದಲ್ಲಿ, ಕೊಬೊಸ್-ಮಾರ್ಟಿನೆಜ್ ಕೊಲೆಯನ್ನು ಒಪ್ಪಿಕೊಂಡಿದ್ದಾನೆ. ದಾಳಿ ಪೂರ್ವಯೋಜಿತವೋ ಅಥವಾ ಹಠಾತ್ ಕೋಪವೋ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:14 am, Fri, 12 September 25




