AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಅರೇಬಿಯಾದ ವಿಮಾನ ನಿಲ್ದಾಣದ ಮೇಲೆ ದಾಳಿ; ಭಾರತೀಯ ಸೇರಿ ಇಬ್ಬರು ಸಾವು

ಯೆಮೆನ್‌ನ ಹೌತಿ ಬಂಡುಕೋರರ ವೈಮಾನಿಕ ದಾಳಿಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸೌದಿ ಅರೇಬಿಯಾದ ಪೂರ್ವ ತೈಲ ನಗರಿ ದಮ್ಮಾಮ್‌ನ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ಮತ್ತೊಬ್ಬ ವ್ಯಕ್ತಿ ಸೌದಿ ಪ್ರಜೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ಭಾರತ, ಯೆಮೆನ್, ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶಿ ಮೂಲದ ಸೌದಿ ನಿವಾಸಿ ಸೇರಿದಂತೆ ಒಟ್ಟು 8 ಜನರು ಗಾಯಗೊಂಡಿದ್ದಾರೆ.

ಸೌದಿ ಅರೇಬಿಯಾದ ವಿಮಾನ ನಿಲ್ದಾಣದ ಮೇಲೆ ದಾಳಿ; ಭಾರತೀಯ ಸೇರಿ ಇಬ್ಬರು ಸಾವು
ಸೌದಿ ಅರೇಬಿಯಾದ ವಿಮಾನ ನಿಲ್ದಾಣದ ಮೇಲೆ ದಾಳಿImage Credit source: TV9
ಸುಷ್ಮಾ ಚಕ್ರೆ
|

Updated on: Oct 22, 2026 | 7:08 PM

Share

ರಿಯಾದ್, ಅಕ್ಟೋಬರ್ 22: ಯೆಮೆನ್‌ನ ಹೌತಿ ಬಂಡುಕೋರರ ವೈಮಾನಿಕ ದಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಇಬ್ಬರು ಮೃತಪಟ್ಟು, 8 ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಬುಧವಾರ ವಿಮಾನ ನಿಲ್ದಾಣದ ಮೇಲೆ ನಡೆದ ಈ ದಾಳಿಯಲ್ಲಿ ಓರ್ವ ಸೌದಿ ಪ್ರಜೆ ಹಾಗೂ ಓರ್ವ ಭಾರತೀಯ ಪ್ರಜೆ ಮೃತಪಟ್ಟಿರುವುದಾಗಿ ಸಾಮಾನ್ಯ ನಾಗರಿಕ ವಿಮಾನಯಾನ ಪ್ರಾಧಿಕಾರವು ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ.

ಈ ದುರಂತದ ಕುರಿತು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಸಂತ್ರಸ್ತ ಕುಟುಂಬಗಳನ್ನು ಸಂಪರ್ಕಿಸುತ್ತಿದೆ. “ಮೃತರ ಕುಟುಂಬ ಮತ್ತು ಪ್ರೀತಿಯ ಜನರಿಗೆ ನಮ್ಮ ಪ್ರಾರ್ಥನೆಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ” ಎಂದು ರಾಯಭಾರ ಕಚೇರಿ ಎಕ್ಸ್ ಜಾಲತಾಣದಲ್ಲಿ ತಿಳಿಸಿದೆ.

ಇದನ್ನೂ ಓದಿ: ಹೌತಿ ಕ್ಷಿಪಣಿ ದಾಳಿಗಳ ಭೀತಿ: ಬಂಕರ್‌ಗಳಿರುವ ಅರಮನೆಯಿಂದ ಅರಮನೆಗೆ ಶಿಫ್ಟ್ ಆಗ್ತಿದ್ದಾರೆ ಸೌದಿ ಕ್ರೌನ್ ಪ್ರಿನ್ಸ್

ದಾಳಿಯಿಂದಾದ ಹಾನಿಯ ಕುರಿತು ಮೌಲ್ಯಮಾಪನ ಮಾಡಲಾಗುತ್ತಿದ್ದು, ವಿಮಾನ ನಿಲ್ದಾಣದ ಕಾರ್ಯಾಚರಣೆ ಹಾಗೂ ವಿಮಾನ ಸಂಚಾರ ಸಹಜ ಸ್ಥಿತಿಗೆ ಮರಳಿದೆ ಎಂದು ಸೌದಿ ವಿಮಾನಯಾನ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಇರಾನ್ ಬೆಂಬಲಿತ ಹೌತಿ ಪಡೆಗಳು ಈ ತಿಂಗಳಲ್ಲಿ ಸೌದಿ ಅರೇಬಿಯಾದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದು, ರಿಯಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಾಳಿಯೂ ಸೇರಿ ಹಲವು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿವೆ. ಬುಧವಾರ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಬಂದ ಡ್ರೋನ್ ಅನ್ನು ಹೊಡೆದುರುಳಿಸಿದಾಗ ಬಿದ್ದ ಅವಶೇಷಗಳಿಂದ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದರು.

ಇತ್ತೀಚಿನ ವಾರಗಳಲ್ಲಿ ಸೌದಿ ಅರೇಬಿಯಾದ ತೈಲ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಹೌತಿಗಳು ನಡೆಸುತ್ತಿರುವ ದಾಳಿಯು ವಿಪರೀತವಾಗಿದೆ. ಎಎಫ್‌ಪಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ತಿಂಗಳು ಸೌದಿ ವಿಮಾನ ನಿಲ್ದಾಣಗಳ ಮೇಲೆ ನಡೆದ ದಾಳಿಗಳಲ್ಲಿ ಒಟ್ಟು 22 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸೌದಿ ಅರೇಬಿಯಾ ವಿಮಾನ ನಿಲ್ದಾಣ, ಅರಾಮ್ಕೊ ತೈಲ ಘಟಕದ ಮೇಲೂ ವೈಮಾನಿಕ ದಾಳಿ, 3 ಸಾವು, ಭಾರತೀಯರಿಗೆ ಗಾಯ

ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕವು ತನ್ನ ರಾಯಭಾರ ಕಚೇರಿಯ ಅಗತ್ಯವಿಲ್ಲದ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರನ್ನು ಸೌದಿ ಅರೇಬಿಯಾದಿಂದ ಹಿಂತಿರುಗುವಂತೆ ಸೂಚಿಸಿದೆ. ನಾಗರಿಕ ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಮೂಲಸೌಕರ್ಯಗಳ ಮೇಲಿನ ದಾಳಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಭಾರತೀಯರಿಗೆ ಎಚ್ಚರಿಕೆಯಿಂದಿರಲು ಸೂಚನೆ:

ಸೌದಿ ಆಡಳಿತ ಮಂಡಳಿಯು ಹೊರಡಿಸುವ ತುರ್ತು ಭದ್ರತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೌದಿಯಲ್ಲಿರುವ ಭಾರತೀಯ ನಾಗರಿಕರಿಗೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮನವಿ ಮಾಡಿದೆ. ತುರ್ತು ಸಂದರ್ಭಗಳಲ್ಲಿ ಶಾಂತ ರೀತಿಯಿಂದ ಕಟ್ಟಡಗಳ ಒಳಗೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಪರಿಸ್ಥಿತಿ ತಿಳಿಯಾಗುವವರೆಗೆ ಹೊರಗೆ ಬಾರದಂತೆ ಸೂಚಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ