World Bank: ವಿಶ್ವಬ್ಯಾಂಕ್​ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ

ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ.

World Bank: ವಿಶ್ವಬ್ಯಾಂಕ್​ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ
ಅಜಯ್ ಬಂಗಾ
Follow us
Ganapathi Sharma
|

Updated on: May 03, 2023 | 11:05 PM

ನವದೆಹಲಿ: ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ. ಹವಾಮಾನ ಬದಲಾವಣೆಯಂಥ ಸವಾಲಿನ ಸಂದರ್ಭದಲ್ಲಿ ಅಜಯ್ ಬಂಗಾ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಸವಾಲು ಎದುರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ವಿಶ್ವಬ್ಯಾಂಕ್ ಗ್ರೂಪ್ ವಿಕಸನ ಪ್ರಕ್ರಿಯೆಯಲ್ ಲಿಬಂಗಾ ಅವರೊಂದಿಗೆ ಕೆಲಸ ಮಾಡಲು ಮಂಡಳಿಯು ಎದುರು ನೋಡುತ್ತಿದೆ ಎಂದು ಅದು ತಿಳಿಸಿದೆ. ಬಂಗಾ ಅವರ ಅಧಿಕಾರಾವಧಿ ಐದು ವರ್ಷಗಳದ್ದಾಗಿರಲಿದೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಎದುರಿಸುತ್ತಿರುವ ಕಠಿಣ ಬೆಳವಣಿಗೆಯ ಸವಾಲುಗಳನ್ನು ನಿಭಾಯಿಸುವ ಗುರಿಯನ್ನು ವಿಶ್ವಬ್ಯಾಂಕ್ ಹೊಂದಿದೆ. ಸಮೂಹದ ಎಲ್ಲಾ ಮಹತ್ವಾಕಾಂಕ್ಷೆಗಳು ಮತ್ತು ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಂಗಾ ಅವರೊಂದಿಗೆ ಕೆಲಸ ಮಾಡಲು ಎದುರುನೋಡುತ್ತಿದ್ದೇವೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ವಿಶ್ವ ಬ್ಯಾಂಕ್ ಅಧ್ಯಕ್ಷರ ಹುದ್ದೆಗೆ ಏಕೈಕ ನಾಮನಿರ್ದೇಶತರಾಗಿದ್ದ ಬಂಗಾ ಜೂನ್ ಎರಡರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹುದ್ದೆಯಿಂದ ನಿರ್ಗಮಿಸಲಿರುವ ಡೇವಿಡ್ ಮಾಲ್ಪಾಸ್ ಅವರು ಬಂಗಾಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಇದನ್ನೂ ಓದಿ: Vladimir Putin: ವ್ಲಾಡಿಮಿರ್ ಪುಟಿನ್‌ ಹತ್ಯೆಗೆ ಉಕ್ರೇನ್ ಯತ್ನ ನಡೆಸಿದೆ: ರಷ್ಯಾ ಆರೋಪ

ಇದರೊಂದಿಗೆ, ಅಭಿವೃದ್ಧಿ ಹೊಂದುತ್ತಿರುವ ಮತ್ತು ಉದಯೋನ್ಮುಖ ಆರ್ಥಿಕತೆಗಳಿಂದ ಕೂಡಿರುವ ವಿಶ್ವಬ್ಯಾಂಕ್​ನ ಅಧ್ಯಕ್ಷ ಸ್ಥಾನದ ಮೇಲೆ ಅಮೆರಿಕದ ಹಿಡಿತ ನಿರಂತರವಾಗಿ ಮುಂದುವರಿದಿದೆ ಎಂಬ ಇತರ ದೇಶಗಳ ಅಸಮಾಧಾನ ಹೆಚ್ಚುತ್ತಿರುವ ಹೊರತಾಗಿಯೂ, ಭಾರತದಲ್ಲಿ ಸಿಖ್ ಕುಟುಂಬದಲ್ಲಿ ಜನಿಸಿದ ಮತ್ತು ಅಮೆರಿಕ ಪ್ರಜೆಯಾಗಿರುವ 63 ವರ್ಷದ ಬಂಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದರೊಂದಿಗೆ ಅಮೆರಿಕದ ಹಿಡಿತ ಮತ್ತೆ ಮುಂದುವರಿದಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್