ನವದೆಹಲಿ: ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ. ಹವಾಮಾನ ಬದಲಾವಣೆಯಂಥ ಸವಾಲಿನ ಸಂದರ್ಭದಲ್ಲಿ ಅಜಯ್ ಬಂಗಾ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಸವಾಲು ಎದುರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ವಿಶ್ವಬ್ಯಾಂಕ್ ಗ್ರೂಪ್ ವಿಕಸನ ಪ್ರಕ್ರಿಯೆಯಲ್ ಲಿಬಂಗಾ ಅವರೊಂದಿಗೆ ಕೆಲಸ ಮಾಡಲು ಮಂಡಳಿಯು ಎದುರು ನೋಡುತ್ತಿದೆ ಎಂದು ಅದು ತಿಳಿಸಿದೆ. ಬಂಗಾ ಅವರ ಅಧಿಕಾರಾವಧಿ ಐದು ವರ್ಷಗಳದ್ದಾಗಿರಲಿದೆ.
ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಎದುರಿಸುತ್ತಿರುವ ಕಠಿಣ ಬೆಳವಣಿಗೆಯ ಸವಾಲುಗಳನ್ನು ನಿಭಾಯಿಸುವ ಗುರಿಯನ್ನು ವಿಶ್ವಬ್ಯಾಂಕ್ ಹೊಂದಿದೆ. ಸಮೂಹದ ಎಲ್ಲಾ ಮಹತ್ವಾಕಾಂಕ್ಷೆಗಳು ಮತ್ತು ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಂಗಾ ಅವರೊಂದಿಗೆ ಕೆಲಸ ಮಾಡಲು ಎದುರುನೋಡುತ್ತಿದ್ದೇವೆ ಎಂದು ವಿಶ್ವಬ್ಯಾಂಕ್ ಹೇಳಿದೆ.
ವಿಶ್ವ ಬ್ಯಾಂಕ್ ಅಧ್ಯಕ್ಷರ ಹುದ್ದೆಗೆ ಏಕೈಕ ನಾಮನಿರ್ದೇಶತರಾಗಿದ್ದ ಬಂಗಾ ಜೂನ್ ಎರಡರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹುದ್ದೆಯಿಂದ ನಿರ್ಗಮಿಸಲಿರುವ ಡೇವಿಡ್ ಮಾಲ್ಪಾಸ್ ಅವರು ಬಂಗಾಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಇದನ್ನೂ ಓದಿ: Vladimir Putin: ವ್ಲಾಡಿಮಿರ್ ಪುಟಿನ್ ಹತ್ಯೆಗೆ ಉಕ್ರೇನ್ ಯತ್ನ ನಡೆಸಿದೆ: ರಷ್ಯಾ ಆರೋಪ
ಇದರೊಂದಿಗೆ, ಅಭಿವೃದ್ಧಿ ಹೊಂದುತ್ತಿರುವ ಮತ್ತು ಉದಯೋನ್ಮುಖ ಆರ್ಥಿಕತೆಗಳಿಂದ ಕೂಡಿರುವ ವಿಶ್ವಬ್ಯಾಂಕ್ನ ಅಧ್ಯಕ್ಷ ಸ್ಥಾನದ ಮೇಲೆ ಅಮೆರಿಕದ ಹಿಡಿತ ನಿರಂತರವಾಗಿ ಮುಂದುವರಿದಿದೆ ಎಂಬ ಇತರ ದೇಶಗಳ ಅಸಮಾಧಾನ ಹೆಚ್ಚುತ್ತಿರುವ ಹೊರತಾಗಿಯೂ, ಭಾರತದಲ್ಲಿ ಸಿಖ್ ಕುಟುಂಬದಲ್ಲಿ ಜನಿಸಿದ ಮತ್ತು ಅಮೆರಿಕ ಪ್ರಜೆಯಾಗಿರುವ 63 ವರ್ಷದ ಬಂಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದರೊಂದಿಗೆ ಅಮೆರಿಕದ ಹಿಡಿತ ಮತ್ತೆ ಮುಂದುವರಿದಿದೆ.
ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ