AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ

ಭಾರತೀಯ ಭಾಷೆಗಳನ್ನು ಮಕ್ಕಳಿಗೆ ಕಲಿಸುವುದು ಸೇರಿದಂತೆ ಶತಮಾನಗಳಿಂದ ಭಾರತೀಯ ಸಂಪ್ರದಾಯಗಳನ್ನು ಸಂರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿ ವಲಸಿಗರನ್ನು ಶ್ಲಾಘಿಸಿದ್ದಾರೆ. ಮಲೇಷ್ಯಾದಲ್ಲಿರುವ ತಮಿಳು ವಲಸಿಗರ ಸದಸ್ಯರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ತಮಿಳು ವಲಸಿಗರು ಹಲವು ಶತಮಾನಗಳಿಂದ ಇಲ್ಲಿದ್ದಾರೆ. ಈ ಇತಿಹಾಸದಿಂದ ಪ್ರೇರಿತರಾಗಿ ಮಲಯ ವಿಶ್ವವಿದ್ಯಾಲಯದಲ್ಲಿ ತಿರುವಳ್ಳುವರ್ ಪೀಠವನ್ನು ಸ್ಥಾಪಿಸಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಮೋದಿ ಹೇಳಿದ್ದಾರೆ.

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ
Pm Modi In Malaysia
ಸುಷ್ಮಾ ಚಕ್ರೆ
|

Updated on: Feb 07, 2026 | 7:49 PM

Share

ಕೌಲಾಲಂಪುರ, ಫೆಬ್ರವರಿ 7: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ (PM Modi), “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ” ಎಂದು ಹೇಳಿದ್ದಾರೆ.

ಭಾರತೀಯ ಮೂಲದ ಸುಮಾರು ಮೂರು ಮಿಲಿಯನ್ ಜನರು ಮಲೇಷ್ಯಾದಲ್ಲಿ ವಾಸಿಸುತ್ತಿದ್ದಾರೆ. ಇದು ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ. ಅವರಲ್ಲಿ ಬಹುಪಾಲು ತಮಿಳು ಮೂಲದವರು. ಹೀಗಾಗಿ, ತಮಿಳು ಭಾಷೆಯ ಕುರಿತು ತಮ್ಮ ಭಾಷಣದಲ್ಲಿ ಮಾತನಾಡಿದ ಮೋದಿ, “ತಮಿಳು ಜಗತ್ತಿಗೆ ಭಾರತ ನೀಡಿದ ಕೊಡುಗೆ. ತಮಿಳು ಸಾಹಿತ್ಯ ಶಾಶ್ವತ ಮತ್ತು ಜಾಗತಿಕವಾಗಿದೆ. ಭಾರತದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಕೇಂದ್ರ ಸಚಿವರಾದ ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರಂತಹ ತಮಿಳು ಸಮುದಾಯದ ನಾಯಕರು ತಮ್ಮ ಪ್ರತಿಭೆಯಿಂದ ಮಾನವೀಯತೆಗೆ ಸೇವೆ ಸಲ್ಲಿಸಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

ತಮಿಳು ವಲಸಿಗರ ಸಾಮರ್ಥ್ಯಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ತಮಿಳು ಇತಿಹಾಸದಿಂದ ಪ್ರೇರಿತರಾಗಿ ಮಲಯ ವಿಶ್ವವಿದ್ಯಾಲಯದಲ್ಲಿ ತಿರುವಳ್ಳುವರ್ ಪೀಠವನ್ನು ಸ್ಥಾಪಿಸಲಾಗಿದೆ. ನಮ್ಮ ತಮಿಳು ಪರಂಪರೆಯನ್ನು ಮತ್ತಷ್ಟು ಬಲಪಡಿಸಲು ನಾವು ತಿರುವಳ್ಳುವರ್ ಕೇಂದ್ರವನ್ನು ಸ್ಥಾಪಿಸಿದ್ದೇವೆ” ಎಂದು ಪ್ರಧಾನಿ ಹೇಳಿದ್ದಾರೆ.

ಮಲೇಷ್ಯಾಕ್ಕೆ ಈ ಭೇಟಿ 2026ರಲ್ಲಿ ಪ್ರಧಾನಿಯವರ ಮೊದಲ ವಿದೇಶಿ ಭೇಟಿಯನ್ನು ಸೂಚಿಸುತ್ತದೆ. ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅಧಿಕಾರಕ್ಕೇರುವ ಮೊದಲೇ ಪ್ರಧಾನಿ ಮೋದಿ ಅವರು ಮಲೇಷ್ಯಾ ಪ್ರಧಾನಿಯವರೊಂದಿಗೆ ಸ್ನೇಹ ಹೊಂದಿದ್ದರು. ಈ ಬಗ್ಗೆಯೂ ಮೋದಿ ಪ್ರಸ್ತಾಪಿಸಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​