Student Murdered: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಕೊಲೆ

ಭಾರತ ಮೂಲದ ಇಪ್ಪತ್ತು ವರ್ಷ ವಯಸ್ಸಿನ ವಿದ್ಯಾರ್ಥಿ ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿಯು ಯುನೈಟೆಡ್ ಸ್ಟೇಟ್ಸ್‌ನ ಇಂಡಿಯಾನಾ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್​​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ವರುಣ್ ಮನೀಶ್ ಛೇಡಾನ ರೂಮ್‌ಮೇಟ್‌ ಈ ಹತ್ಯೆಯನ್ನು ಮಾಡಿದ್ದು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ

Student Murdered: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಕೊಲೆ
Indian-origin student murdered in America
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 06, 2022 | 12:01 PM

ಅಮೆರಿಕ: ಭಾರತ ಮೂಲದ ಇಪ್ಪತ್ತು ವರ್ಷ ವಯಸ್ಸಿನ ವಿದ್ಯಾರ್ಥಿ ವರುಣ್ ಮನೀಶ್ ಛೇಡಾ  ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿಯು ಯುನೈಟೆಡ್ ಸ್ಟೇಟ್ಸ್‌ನ ಇಂಡಿಯಾನಾ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್​​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.ಪ್ರಾಥಮಿಕ ಶವಪರೀಕ್ಷೆಯ ವರದಿ ಹೇಳಿರುವಂತೆ ಇದೊಂದು ಕೊಲೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯ ಸಾವು ಹಲವಾರು ಪ್ರಶ್ನೆಗಳಾಗಿ ಉಳಿದಿದೆ, ಆದರೆ ಅಲ್ಲಿರುವ ಕೆಲವರು ಇದು ಕೊಲೆ ಎಂದು ಹೇಳುತ್ತಿದ್ದಾರೆ.

ವರುಣ್ ಮನೀಶ್ ಛೇಡಾನ ರೂಮ್‌ಮೇಟ್‌ ಈ ಹತ್ಯೆಯನ್ನು ಮಾಡಿದ್ದು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ದೂರದರ್ಶನ ಕೇಂದ್ರವಾದ ಫಾಕ್ಸ್ 59 ಪ್ರಕಾರ ಛೇಡಾ ಪಾರ್ಕ್ ಟ್ಯೂಡರ್‌ನ 2020 ರ ಪದವೀಧರರಾಗಿದ್ದರು.ಛೇಡಾನ ರೂಮ್‌ಮೇಟ್, ಕೊರಿಯಾದ 22 ವರ್ಷದ ಜಿ ಮಿನ್ ಜಿಮ್ಮಿ ಶಾ ಎಂದು ಹೇಳಲಾಗಿದೆ. ಈಗ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಮತ್ತು ಪ್ರಕರಣದ ಪ್ರಮುಖ ಸಾಕ್ಷಿ ಕೂಡ ಹೌದು. ಶಾ ಕೊರಿಯಾದ ಜೂನಿಯರ್ ಸೈಬರ್ ಸೆಕ್ಯುರಿಟಿ ಮೇಜರ್ ಮತ್ತು ಅಂತರರಾಷ್ಟ್ರೀಯ ವಿದ್ಯಾರ್ಥಿ.

ಇದನ್ನು ಓದಿ: ಅಪಹರಣವಾಗಿದ್ದ ಭಾರತದ ಮೂಲದ 4 ಮಂದಿಯ ಶವ ಯುಎಸ್‌ನ ಹಣ್ಣಿನ ತೋಟದಲ್ಲಿ ಪತ್ತೆ

ಬುಧವಾರ ಬೆಳಗ್ಗೆ 12:45 ಗಂಟೆಗೆ ಶಾ ಸಾವಿನ ಬಗ್ಗೆ ಪೊಲೀಸರನ್ನು ಎಚ್ಚರಿಸಲು 911ಗೆ ಕರೆ ಮಾಡಿದ್ದಾರೆ ಎಂದು ಪರ್ಡ್ಯೂ ವಿಶ್ವವಿದ್ಯಾಲಯದ ಪೊಲೀಸ್ ಮುಖ್ಯಸ್ಥ ಲೆಸ್ಲಿ ವೈಟೆ ಬುಧವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದರು ಎಂದು ಈ ಬಗ್ಗೆ ಎನ್‌ಬಿಸಿ ವರದಿ ಮಾಡಿದೆ. ಛೇಡಾನ ಮ್ಯಾಕ್‌ಕಟ್ಚಿಯಾನ್ ಹಾಲ್‌ನ ಮೊದಲ ಮಹಡಿಯಲ್ಲಿರುವ ತನ್ನ ಕೋಣೆಯಲ್ಲಿ ಹೇಗೆ ಸತ್ತರು ಎಂಬುದನ್ನು ಬಹಿರಂಗಪಡಿಸಲಾಗಿಲ್ಲ. ಪೊಲೀಸರು ಸಾವನ್ನು ಕೊಲೆ ಪ್ರಕರಣ ಎಂದು ಪರಿಗಣಿಸಿದ್ದಾರೆ. ಪೊಲೀಸ್ ಮುಖ್ಯಸ್ಥರ ಪ್ರಕಾರ, ಶಂಕಿತನ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ. 911 ಕರೆ ಸಮಯದಲ್ಲಿ, ಆ ಸಮಯದಲ್ಲಿ ಛೇದಾ ಮತ್ತು ಶಾ ಮಾತ್ರ ಕೋಣೆಯಲ್ಲಿದ್ದರು ಎಂದು ಅವರು ಹೇಳಿದರು.

Published On - 12:01 pm, Thu, 6 October 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ