AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೈದುಬೈ ವಿಮಾನದಲ್ಲಿ ಸಾವಿನ ದವಡೆಯಿಂದ 174 ಮಂದಿಯನ್ನು ಪಾರು ಮಾಡಿದ ಪೈಲಟ್ ಸ್ಮಿತ್ ಮಚ್ಚರ್​ಗೆ ಇಸ್ರೇಲ್​ನ ಪ್ರತಿಷ್ಠಿತ ಪ್ರಶಸ್ತಿ

ಫ್ಲೈದುಬೈ ವಿಮಾನದಲ್ಲಿ ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್ ತನ್ನ ಅತ್ಯುನ್ನತ ನಾಗರಿಕ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಿದೆ. ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್‌ನಿಂದ ನಡೆದ ಮಾರಣಾಂತಿಕ ದಾಳಿಯ ಹೊರತಾಗಿಯೂ, ಮಚ್ಚರ್ ಗಂಭೀರವಾಗಿ ಗಾಯಗೊಂಡಿದ್ದರೂ ಧೈರ್ಯದಿಂದ ವಿಮಾನವನ್ನು ಸುರಕ್ಷಿತವಾಗಿ ಇಳಿಸಿ 174 ಜನರ ಜೀವ ಉಳಿಸಿದರು. ಅವರ ಈ ಸಾಹಸಕ್ಕೆ ಇಸ್ರೇಲ್ ಅಧ್ಯಕ್ಷರು, ಮೋದಿ, ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಫ್ಲೈದುಬೈ ವಿಮಾನದಲ್ಲಿ ಸಾವಿನ ದವಡೆಯಿಂದ 174 ಮಂದಿಯನ್ನು ಪಾರು ಮಾಡಿದ ಪೈಲಟ್ ಸ್ಮಿತ್ ಮಚ್ಚರ್​ಗೆ ಇಸ್ರೇಲ್​ನ ಪ್ರತಿಷ್ಠಿತ ಪ್ರಶಸ್ತಿ
ಸ್ಮಿತ್ Image Credit source: Mumbai Mirror
ನಯನಾ ರಾಜೀವ್
|

Updated on:Oct 09, 2026 | 7:29 AM

Share

ಇಸ್ರೇಲ್, ಅಕ್ಟೋಬರ್ 09: ಫ್ಲೈದುಬೈ ವಿಮಾನದಲ್ಲಿ 174 ಪ್ರಯಾಣಿಕರು ಹಾಗೂ ಸಿಬ್ಬಂದಿಯ ಜೀವ ಉಳಿಸಲು ಧೈರ್ಯದಿಂದ ಹೋರಾಡಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್ ತನ್ನ ಪ್ರತಿಷ್ಠಿತ ನಾಗರಿಕ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಈ ಘೋಷಣೆ ಮಾಡಿದ್ದು, ಪೈಲಟ್ ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಾಕ್‌ಪಿಟ್‌ನಲ್ಲೇ ನಡೆದ ಭೀಕರ ದಾಳಿ

ವರದಿಗಳ ಪ್ರಕಾರ, ಫ್ಲೈದುಬೈ ವಿಮಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ ಅವರ ಮೇಲೆ ಓಮನ್ ಮೂಲದ ಸಹ ಪೈಲಟ್ ಹಮ್ಮಮ್ ಅಲ್-ಹಮ್ಮಮಿ ದಾಳಿ ನಡೆಸಿದ್ದನು. ದಾಳಿಗೆ ಕ್ರ್ಯಾಶ್ ಕೊಡಲಿಯನ್ನು ಬಳಸಲಾಗಿತ್ತು ಎನ್ನಲಾಗಿದೆ. ಈ ಘಟನೆಯಲ್ಲಿ ಮಚ್ಚರ್ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವಕ್ಕೆ ಒಳಗಾದರು. ಆದರೂ ಅವರು ಧೈರ್ಯ ಕಳೆದುಕೊಳ್ಳದೆ ಕಾಕ್‌ಪಿಟ್ ಬಾಗಿಲು ತೆರೆದರು. ಇದರಿಂದ ವಿಮಾನದಲ್ಲಿದ್ದ ಇಸ್ರೇಲಿ ಪ್ರಯಾಣಿಕರು ಒಳಗೆ ಪ್ರವೇಶಿಸಿ ದಾಳಿಕೋರನನ್ನು ನಿಯಂತ್ರಿಸಲು ನೆರವಾದರು ಎಂದು ವರದಿಗಳು ತಿಳಿಸಿವೆ.

ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಪೈಲಟ್‌ಗಳು

ದಾಳಿಯ ನಡುವೆಯೂ ವಿಮಾನದ ಮೇಲಿನ ನಿಯಂತ್ರಣವನ್ನು ಮರಳಿ ಪಡೆಯುವ ಪ್ರಯತ್ನ ನಡೆಯಿತು. ವಿಮಾನವನ್ನು ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತಾಗಿ ಇಳಿಸಲಾಯಿತು ಎಂದು ವರದಿಯಾಗಿದೆ. ಪೈಲಟ್‌ಗಳ ಸಮಯೋಚಿತ ಕ್ರಮದಿಂದ ದೊಡ್ಡ ಅನಾಹುತ ತಪ್ಪಿತು. ಗಂಭೀರವಾಗಿ ಗಾಯಗೊಂಡ ಕ್ಯಾಪ್ಟನ್ ಸ್ಮಿತ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಯುಎಇಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಸ್ರೇಲ್ ಅಧ್ಯಕ್ಷರಿಂದ ಪ್ರಶಂಸೆ

ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ಕ್ಯಾಪ್ಟನ್ ಸ್ಮಿತ್ ಅವರ ಧೈರ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. “ಕ್ಯಾಪ್ಟನ್ ಮಚ್ಚರ್ ಅವರ ಸಂಪೂರ್ಣ ಚೇತರಿಕೆಗೆ ನಮ್ಮ ಹೃತ್ಪೂರ್ವಕ ಶುಭಾಶಯಗಳು. ಅವರ ಅಸಾಧಾರಣ ಧೈರ್ಯ ಮತ್ತು ವೃತ್ತಿಪರತೆ ದೊಡ್ಡ ದುರಂತವನ್ನು ತಪ್ಪಿಸಲು ನೆರವಾಗಿದೆ. ಅವರು ಚೇತರಿಸಿಕೊಂಡ ಬಳಿಕ ಇಸ್ರೇಲ್ ಜನರ ಪರವಾಗಿ ನಾಗರಿಕ ಶೌರ್ಯಕ್ಕಾಗಿ ನೀಡುವ ಅಧ್ಯಕ್ಷೀಯ ಪ್ರಶಸ್ತಿಯನ್ನು ಪ್ರದಾನ ಮಾಡುವುದು ನನಗೆ ಗೌರವದ ವಿಷಯ,” ಎಂದು ಹೆರ್ಜಾಗ್ ಹೇಳಿದ್ದಾರೆ.

ಮತ್ತಷ್ಟು ಓದಿ: ಮಿಡ್-ಏರ್ ಹೈಡ್ರಾಮಾ ತನಿಖೆಯಲ್ಲಿ ಶಾಕಿಂಗ್ ಸತ್ಯ: ಕ್ಯಾಪ್ಟನ್ ಸ್ಮಿತ್‌ಗೆ ಚಾಕು ಇರಿದಿದ್ದ ಕೋ-ಪೈಲಟ್ ಉಗ್ರ

ಐದು ಇಸ್ರೇಲಿ ಪ್ರಯಾಣಿಕರಿಗೂ ಗೌರವ

ವಿಮಾನದಲ್ಲಿದ್ದ ಸಹ ಪ್ರಯಾಣಿಕನ ದಾಳಿಯನ್ನು ತಡೆಯಲು ನೆರವಾದ ಐದು ಇಸ್ರೇಲಿ ನಾಗರಿಕರಿಗೂ ಇಸ್ರೇಲ್ ಅಧ್ಯಕ್ಷರು ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ಎಂದು ವರದಿಯಾಗಿದೆ. ಅಪಾಯದ ಸಂದರ್ಭದಲ್ಲಿ ಇತರರ ಜೀವ ಉಳಿಸಲು ಅವರು ತೋರಿದ ಧೈರ್ಯವನ್ನು ಅಧ್ಯಕ್ಷರು ಪ್ರಶಂಸಿಸಿದ್ದಾರೆ.

ಮೋದಿ, ನೆತನ್ಯಾಹು, ಟ್ರಂಪ್‌ರಿಂದ ಮೆಚ್ಚುಗೆ

ಕ್ಯಾಪ್ಟನ್ ಸ್ಮಿತ್ ಅವರ ಸಾಹಸವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ಜೀವವನ್ನೇ ಅಪಾಯಕ್ಕೆ ಒಡ್ಡಿಕೊಂಡು ನೂರಾರು ಜನರ ಸುರಕ್ಷತೆಗೆ ಆದ್ಯತೆ ನೀಡಿದ ಕ್ಯಾಪ್ಟನ್ ಸ್ಮಿತ್ ಅವರ ನಡೆ, ಕರ್ತವ್ಯನಿಷ್ಠೆ ಮತ್ತು ಮಾನವೀಯ ಧೈರ್ಯಕ್ಕೆ ಸಾಕ್ಷಿಯಾಗಿದೆ. ಅವರ ಚೇತರಿಕೆಯ ಬಳಿಕ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದ ಮೇಲೆ ಈಗ ಎಲ್ಲರ ಗಮನ ನೆಟ್ಟಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:25 am, Fri, 9 October 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?