Plane Emergency Landing: ಕರಾಚಿ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿಮಾನ ತುರ್ತು ಭೂ ಸ್ಪರ್ಶ
ಭಾರತೀಯ ವಿಮಾನಯಾನ ಸಂಸ್ಥೆಯ ವಿಮಾನವೊಂದು ತನ್ನ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಭಾರತೀಯ ವಿಮಾನಯಾನ ಸಂಸ್ಥೆಯ ವಿಮಾನವೊಂದು ತನ್ನ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಇಂಡಿಗೋ ಏರ್‌ಲೈನ್ ವಿಮಾನದ ಪ್ರಯಾಣಿಕನೊಬ್ಬ ವಿಮಾನದ ಮಧ್ಯೆ ಅಸ್ವಸ್ಥರಾಗಿದ್ದರೆಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ವಿಮಾನದ ಕ್ಯಾಪ್ಟನ್ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿ ವೈದ್ಯಕೀಯ ತುರ್ತುಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.
ಮಾಹಿತಿ ಪ್ರಕಾರ ಪ್ರಯಾಣಿಕರೊಬ್ಬರು ಮೃತಪಟ್ಟ ಕಾರಣ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಪ್ರಾಧಿಕಾರದ (ಪಿಸಿಸಿಎ) ಮೂಲಗಳು ವಿಮಾನವು ನವದೆಹಲಿಯಿಂದ ದೋಹಾಗೆ ತೆರಳುತ್ತಿದ್ದಾಗ ವಿಮಾನದಲ್ಲಿ ವೈದ್ಯಕೀಯ ತುರ್ತುಸ್ಥಿತಿ ವರದಿಯಾಗಿದೆ.
ಪ್ರಯಾಣಿಕನ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ, ಕ್ಯಾಪ್ಟನ್ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿ ಮಾನವೀಯ ಆಧಾರದ ಮೇಲೆ ಕರಾಚಿಯಲ್ಲಿ ಇಳಿಯಲು ಅನುಮತಿ ಕೋರಿದರು.
ಪಾಕಿಸ್ತಾನದ ಅಧಿಕಾರಿಗಳು ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲು ಅನುಮತಿಸಿದರೆ, ಆರೋಗ್ಯ ಅಧಿಕಾರಿಗಳು ಪ್ರಯಾಣಿಕನನ್ನು ಪರೀಕ್ಷಿಸಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಅವರು ನೈಜೀರಿಯನ್ ಪ್ರಜೆಯಾಗಿದ್ದು ಹೆಸರು ಅಬ್ದುಲ್ಲಾ ಎಂದು ಗುರುತಿಸಲಾಗಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:09 am, Mon, 13 March 23